ಒಳಿತಿನ ದೃಷ್ಟಿಯಿಂದ ಬಿಎಸ್‌ವೈಗೆ ಎಚ್‌ಡಿಡಿ ಬೆಂಬಲ : ಪುಟ್ಟರಾಜು

Published : Nov 12, 2019, 12:47 PM IST
ಒಳಿತಿನ ದೃಷ್ಟಿಯಿಂದ ಬಿಎಸ್‌ವೈಗೆ ಎಚ್‌ಡಿಡಿ ಬೆಂಬಲ : ಪುಟ್ಟರಾಜು

ಸಾರಾಂಶ

ಒಳಿತಿನ ದೃಷ್ಟಿಯಿಂದ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬೆಂಬಲಿಸಿ ಮಾತನಾಡಿದ್ದಾರೆ ಎಂದು ಮಾಜಿ ಸಚಿವ ಪುಟ್ಟರಾಜು ಹೇಳಿದ್ದಾರೆ. 

ಪಾಂಡವಪುರ [ನ.12] :  ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಅನುಕೂಲ ಮಾಡಿಕೊಡಲಿ ಎಂಬ ಉದ್ದೇಶಕ್ಕಾಗಿ ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರೆಯಲಿ ಎಂದು ಎಚ್‌.ಡಿ.ದೇವೇಗೌಡರು ಹೇಳಿರಬಹುದು. ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಶಾಸಕ ಸಿ.ಎಸ್‌.ಪುಟ್ಟರಾಜು ಹೇಳಿದರು.

ತಾಲೂಕಿನ ಕೆ.ಬೆಟ್ಟಹಳ್ಳಿ ಗ್ರಾಮದಲ್ಲಿ ಮುಖ್ಯಮಂತ್ರಿಗಳ ಗ್ರಾಮ ವಿಕಾಸ ಯೋಜನೆ ಹಾಗೂ ಲೋಕೋಪಯೋಗಿ ಇಲಾಖೆ ವತಿಯಿಂದ 85 ಲಕ್ಷ ರು. ವೆಚ್ಚ ವಿವಿಧ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಉತ್ತರ ಕರ್ನಾಟಕದ ನೆರೆ ಸಂತ್ರಸ್ತರು ಸೇರಿದಂತೆ ಆ ಭಾಗದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಶ್ರಮಿಸಬೇಕಾಗಿದೆ. ಸದ್ಯಕ್ಕೆ ಯಾರೂ ಚುನಾವಣೆಗೆ ಹೋಗಲು ಸಿದ್ಧರಿಲ್ಲ. ಸರ್ಕಾರ ಬೀಳುವ ಪ್ರಶ್ನೆ ಇಲ್ಲದ ಕಾರಣ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಯಡಿಯೂರಪ್ಪನವೇ ಸಿಎಂ ಆಗಿ ಮುಂದುವರೆಯಲಿ ಎಂಬುದಾಗಿ ಹೇಳಿರಬಹುದು ಎಂದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಹುತೇಕ ಕಡೆಗೆ ಜೆಡಿಎಸ್‌ ಪಕ್ಷದ ಅಭ್ಯರ್ಥಿ ಗೆಲವು ಸಾಧಿಸಲಿದ್ದಾರೆ. ಕೆ.ಆರ್‌.ಪೇಟೆ ಕ್ಷೇತ್ರದಲ್ಲೂ ಜೆಡಿಎಸ್‌ ಅಭ್ಯರ್ಥಿ ಹೆಚ್ಚಿನ ಮತಗಳಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೆ.ಬೆಟ್ಟಹಳ್ಳಿ ಗ್ರಾಮವನ್ನು ಸರ್ವತೋಮುಖವಾಗಿ ಅಭಿವೃದ್ಧಿಪಡಿಸಬೇಕಾಗಿದೆ. ಅದಕ್ಕಾಗಿ ಮುಖ್ಯಮಂತ್ರಿಗಳ ಗ್ರಾಮ ವಿಕಾಸ ಯೋಜನೆಯಡಿಯಿಂದ ಸುಮಾರು 60 ಲಕ್ಷ ರು. ಅನುದಾನವನ್ನು ಬಿಡುಗಡೆ ಮಾಡಿಸಿದ್ದೇನೆ. ಲೋಕೋಪಯೋಗಿ ಇಲಾಖೆಯಿಂದ 25 ಲಕ್ಷ ಅನುದಾನವನ್ನು ಬಿಡುಗಡೆ ಮಾಡಿಸಿ ಗ್ರಾಮದ ರಸ್ತೆ ಹಾಗೂ ಚರಂಡಿ ಅಭಿವೃದ್ದಿಯನ್ನು ಮಾಡಿಸಲಾಗಿದೆ. ಮುಂದಿನ ದಿನಗಳಲ್ಲಿ ಗ್ರಾಮದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದರು. ಮನ್ಮುಲ್ ನಿರ್ದೇಶಕ ಕಾಡೇನಹಳ್ಳಿ ರಾಮಚಂದ್ರು, ಎಂಡಿಸಿಸಿ ಬ್ಯಾಂಕ್‌ ಮಾಜಿ ಅಧ್ಯಕ್ಷ ಗುರುಸ್ವಾಮಿ, ತಾಪಂ ಸದಸ್ಯ ವಿ.ಎಸ್‌.ನಿಂಗೇಗೌಡ, ಗ್ರಾಪಂ ಅಧ್ಯಕ್ಷೆ ಜ್ಯೋತಿ, ಟಿಎಪಿಸಿಎಂಎಸ್‌ ಮಾಜಿ ಅಧ್ಯಕ್ಷ ರಾಮಕೃಷ್ಣೇಗೌಡ ಜೆಡಿಎಸ್‌ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

PREV
click me!

Recommended Stories

ದೇವರ ದರ್ಶನ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಬಸ್ ಮಂಡ್ಯ ಬಳಿ ಪಲ್ಟಿ, 8 ಮಂದಿಗೆ ಗಾಯ
ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪಿಸುವುದು ಕಾಂಗ್ರೆಸ್‌ನವರಿಗೆ ಇಷ್ಟವಿಲ್ಲ: ಎಚ್.ಡಿ.ಕುಮಾರಸ್ವಾಮಿ