ಮಂಡ್ಯ ಕಾರು ಅಪಘಾತಕ್ಕೆ ಟ್ವಿಸ್ಟ್: ಮೃತ ಯುವತಿ ತಾಯಿ ಬಿಚ್ಚಿಟ್ಲು ಶಾಕಿಂಗ್‌ ವಿಷಯ

Published : Aug 04, 2026, 09:14 AM IST
mandya girl accident

ಸಾರಾಂಶ

ಮಂಡ್ಯದಲ್ಲಿ ನಡೆದ ಕಾರು ಅಪಘಾತದಲ್ಲಿ ಯುವತಿಯೊಬ್ಬಳು ಮೃತಪಟ್ಟಿದ್ದು, ಇದೊಂದು ಪೂರ್ವನಿಯೋಜಿತ ಕೊಲೆ ಎಂದು ಮೃತೆಯ ತಾಯಿ ಆರೋಪಿಸಿದ್ದಾರೆ. ಹುಟ್ಟುಹಬ್ಬದ ನೆಪದಲ್ಲಿ ಕರೆದೊಯ್ದು ಕೊಲೆ ಮಾಡಿ, ಅಪಘಾತವೆಂದು ಬಿಂಬಿಸಲು ಯತ್ನಿಸಲಾಗಿದೆ ಎಂದು ಸ್ನೇಹಿತರ ವಿರುದ್ಧ ದೂರು ದಾಖಲಿಸಿದ್ದಾರೆ. ಈ ದೂರಿನ ಅನ್ವಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮಂಡ್ಯ: ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕಾರು ಅಪಘಾತವೊಂದರಲ್ಲಿ ಮೃತಪಟ್ಟ ಯುವತಿಯ ಸಾವಿನ ಹಿಂದೆ ಭಾರಿ ಸಂಚು ಅಡಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಯುವತಿಯನ್ನು ಕೊಲೆ ಮಾಡಿ, ಅದನ್ನು ಅಪಘಾತವೆಂದು ಬಿಂಬಿಸಲು ಯತ್ನಿಸಲಾಗಿದೆ ಎಂದು ಮೃತ ಯುವತಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣಕ್ಕೆ ತೀವ್ರ ತಿರುವು ಸಿಕ್ಕಿದೆ.

ಮೃತ ಯುವತಿಯನ್ನು ಹೊನ್ನೆಮಡು ಗ್ರಾಮದ ನವೀನ (19) ಎಂದು ಗುರುತಿಸಲಾಗಿದೆ. ಈಕೆಯ ನಿಗೂಢ ಸಾವಿನ ಹಿನ್ನೆಲೆಯಲ್ಲಿ ಸ್ನೇಹಿತರಾದ ಅಶ್ವಿನಿ, ವಿಷ್ಣು ಮತ್ತು ಶಿವಕುಮಾರ್ ವಿರುದ್ಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಏನಿದು ಘಟನೆ?

ಮಂಡ್ಯ ನಗರದ ಹಣ್ಣಿನ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ನವೀನ, ಅಲ್ಲಿಯೇ ಪಿ.ಜಿಯೊಂದರಲ್ಲಿ ವಾಸವಿದ್ದಳು. ಆಗಸ್ಟ್ 2ರಂದು ಸಂಜೆ ತಾನು ಮನೆಗೆ ಹೋಗುವುದಾಗಿ ಪಿ.ಜಿ ಮಾಲೀಕರಿಗೆ ತಿಳಿಸಿ ಹೊರಟಿದ್ದಳು. ಆದರೆ ಆಕೆ ತನ್ನ ಸ್ನೇಹಿತರಾದ ಅಶ್ವಿನಿ, ವಿಷ್ಣು ಮತ್ತು ಶಿವಕುಮಾರ್ ಅವರೊಂದಿಗೆ ಕೊಮ್ಮೇರಹಳ್ಳಿ ಬೆಟ್ಟಕ್ಕೆ ಕಾರಿನಲ್ಲಿ ತೆರಳಿದ್ದಾಳೆ. ಕೊಮ್ಮೇರಹಳ್ಳಿ ಬಳಿ ಇವರು ಪ್ರಯಾಣಿಸುತ್ತಿದ್ದ ಕಾರು ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ನವೀನ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಉಳಿದ ಮೂವರು ಸ್ನೇಹಿತರಿಗೆ ಕೇವಲ ಸಣ್ಣಪುಟ್ಟ ಗಾಯಗಳಾಗಿವೆ.

ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಲು ಕಾರಣಗಳೇನು?

ನವೀನ ಸಾವಿನ ಬಗ್ಗೆ ಆಕೆಯ ಕುಟುಂಬಸ್ಥರು ಹಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದು, ಸ್ನೇಹಿತರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಅಪಘಾತವು ಆಗಸ್ಟ್ 2ರ ಸಂಜೆ ನಡೆದಿದ್ದರೂ, ಸ್ನೇಹಿತರು ಯುವತಿಯ ಕುಟುಂಬದವರಿಗೆ ರಾತ್ರಿ 11 ಗಂಟೆಯ ಸುಮಾರಿಗೆ ಮಾಹಿತಿ ನೀಡಿದ್ದಾರೆ. ಈ ವಿಳಂಬವೇ ಹಲವು ಸಂಶಯಗಳಿಗೆ ಕಾರಣವಾಗಿದೆ. ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ನವೀನಳನ್ನು ಕರೆದುಕೊಂಡು ಹೋಗಿ, ಅಲ್ಲಿ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದೆ. ಅದಕ್ಕೆ ನವೀನ ಒಪ್ಪದಿದ್ದಾಗ ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎಂದು ತಾಯಿ ದೂರಿನಲ್ಲಿ ತಿಳಿಸಿದ್ದಾರೆ.

ಯುವತಿಯನ್ನು ಕೊಲೆ ಮಾಡಿದ ಬಳಿಕ, ಹೆಣವನ್ನು ಕಾರಿನ ಮುಂಭಾಗದ ಸೀಟಿನಲ್ಲಿ ಕೂರಿಸಿ ತಂದು ಲೈಟ್ ಕಂಬಕ್ಕೆ ಡಿಕ್ಕಿ ಹೊಡೆಸಲಾಗಿದೆ. ಆ ಮೂಲಕ ಇದೊಂದು ಅಪಘಾತ ಎಂಬಂತೆ ಬಿಂಬಿಸಲು ಆರೋಪಿಗಳು ವ್ಯವಸ್ಥಿತವಾಗಿ ಸಂಚು ರೂಪಿಸಿದ್ದಾರೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಸದ್ಯ ಮೃತ ಯುವತಿ ನವೀನಳ ತಾಯಿ ಬೊಮ್ಮಮ್ಮ ಅವರು ನೀಡಿದ ದೂರಿನ ಮೇರೆಗೆ ಸ್ನೇಹಿತರಾದ ಅಶ್ವಿನಿ, ವಿಷ್ಣು ಮತ್ತು ಶಿವಕುಮಾರ್ ವಿರುದ್ಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಇದು ಅಪಘಾತವೇ ಅಥವಾ ಪ್ರೀ-ಪ್ಲಾನ್ಡ್ ಕೊಲೆಯೇ ಎಂಬ ನಿಟ್ಟಿನಲ್ಲಿ ತನಿಖೆ ಕೈಗೊಂಡಿದ್ದಾರೆ.

PREV
Read more Articles on
click me!

Recommended Stories

Karnataka Cabinet expansion today: ಶಾಸಕ ತನ್ವೀರ್‌ ಸೇಠ್‌ಗೆ ಕೈತಪ್ಪಿದ ಸಚಿವ ಸ್ಥಾನ; ಬೆಂಬಲಿಗರಿಂದ ಪ್ರತಿಭಟನೆ
ಶತಕ ಬಾರಿಸಿದ KRS; ಆತಂಕಗಳ ನಡುವೆಯೂ ರೈತರಿಗೆ ಭರ್ಜರಿ ಗುಡ್‌ನ್ಯೂಸ್..!