ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಪಲ್ಟಿ : ಇಬ್ಬರ ದುರ್ಮರಣ

By Web Desk  |  First Published Oct 21, 2019, 12:30 PM IST

ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ  ಬಸ್ ಪಲ್ಟಿಯಾಗಿದ್ದು ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದು ಹಲವರು ಗಾಯಗೊಂಡಿದ್ದಾರೆ. 


ಮಂಡ್ಯ (ಅ.21) : ಮಿನಿ ಬಸ್  ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದು, 12 ಮಂದಿ ಗಾಯಗೊಂಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. 

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಕದಬಹಳ್ಳಿಯ ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ದುರ್ಘಟನೆ ಸಂಭವಿಸಿದೆ. ಗೌತಮ್ [20], ದರ್ಶನ್ [17] ಸ್ಥಳದಲ್ಲಿ ಸಾವನ್ನಪ್ಪಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. 

Tap to resize

Latest Videos

ಹೆಚ್ಚಿನ ಜಿಲ್ಲೆಗಳ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಧರ್ಮಸ್ಥಳ ಯಾತ್ರೆ ಮುಗಿಸಿಕೊಂಡು ಸ್ವಗ್ರಾಮಕ್ಕೆ ವಾಪಸಾಗುತ್ತಿದ್ದ ವೇಳೆ ತಿರುವು ತೆಗೆದುಕೊಳ್ಳುತ್ತಿದ್ದ ವೇಳೆ ಬಸ್ ಪಲ್ಟಿಯಾಗಿ ಅವಘಡವಾಗಿದೆ. 

ಈ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

click me!