ಪಾಂಡವಪುರದಲ್ಲಿ ಮೂರು ದಿನಗಳ ಪುನೀತ್ ಹಬ್ಬ

Published : Nov 19, 2022, 05:14 PM IST
ಪಾಂಡವಪುರದಲ್ಲಿ ಮೂರು ದಿನಗಳ ಪುನೀತ್ ಹಬ್ಬ

ಸಾರಾಂಶ

ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ ಮೂರು ದಿನಗಳ ಪುನೀತೋತ್ಸವ ಆಚರಿಸಲಾಗುತ್ತಿದ್ದು, ಅಪ್ಪು ನೆನಪಲ್ಲಿ ವಿಶೇಷ ಕಾರ್ಯಕ್ರಮಗಳನ್ನ ನಡೆಸಲಾಗುತ್ತಿದೆ.

ಮಂಡ್ಯ(ನ.19): ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನೆಲ್ಲಾ ಅಗಲಿ ವರ್ಷ ಕಳೆದಿದೆ. ಆದರೆ ಅವರ ಮೇಲಿನ ಅಭಿಮಾನ ಅಪ್ಪು ಅವರನ್ನು ಜೀವಂತವಾಗಿರಿಸಿದೆ. ಅಪ್ಪು ನಡೆದ ಹಾದಿಯಲ್ಲೆ ನಡೆಯುವ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ವಿವಿಧ ಕಾರ್ಯಕ್ರಮಗಳ ಆಯೋಜನೆ ಮೂಲಕ ಅಪ್ಪು ನೆನೆಯುವ ಪ್ರಯತ್ನ ಮಾಡುತ್ತಿದ್ದಾರೆ. ಈಗ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ ಮೂರು ದಿನಗಳ ಪುನೀತೋತ್ಸವ ಆಚರಿಸಲಾಗುತ್ತಿದ್ದು, ಅಪ್ಪು ನೆನಪಲ್ಲಿ ವಿಶೇಷ ಕಾರ್ಯಕ್ರಮಗಳನ್ನ ನಡೆಸಲಾಗುತ್ತಿದೆ.

ಮಂಡ್ಯ ಜಿಲ್ಲೆ ಪಾಂಡವಪುರ (Pandavapura) ಪಟ್ಟಣದ ಕ್ರೀಡಾಂಗಣದಲ್ಲಿ ನವೆಂಬರ್ 25, 26, 27 ಮೂರು ದಿನಗಳ‌ ಕಾಲ ಕನ್ನಡ ರಾಜ್ಯೋತ್ಸವ (Kannada Rajyotsava) ಹಾಗೂ ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ ಪುನೀತೋತ್ಸವ (Punitotsava) ಕಾರ್ಯಕ್ರಮ ನಡೆಯಲಿದೆ. ಮೇಲುಕೋಟೆ ಶಾಸಕ ಪುಟ್ಟರಾಜು (puttaraju)‌ ಕಾರ್ಯಕ್ರಮವನ್ನು ಆಯೋಜನೆ ಮಾಡುತ್ತಿದ್ದಾರೆ. ಡಾ. ರಾಜ್ ಕುಟುಂಬದ ಮಾರ್ಗದರ್ಶನದಲ್ಲಿ ಅದ್ದೂರಿ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಮೂರು ದಿನಗಳ ಕಾಲ ಪಾಂಡವಪುರ ಜನತೆಗೆ ಭರಪೂರ ಮನರಂಜನೆ (entertainment) ಸಿಗಲಿದೆ.

ಜೇಮ್ಸ್‌ನಲ್ಲಿ ಅಪ್ಪು ಜಾಗದಲ್ಲಿ ಜ್ಯೂನಿಯರ್ ನಟನೆ?: ರಿವಿಲ್ ಆಯ್ತು ಸೀಕ್ರೆಟ್

ಈ ಕಾರ್ಯಕ್ರಮಕ್ಕೆ ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್, ಅಶ್ವಿನಿ ಪುನೀತ್ ರಾಜ್‍ಕುಮಾರ್ ಸೇರಿದಂತೆ ರಾಜ್ ಕುಟುಂಬದ (Raj Family) ಬಹುತೇಕ ಸದಸ್ಯರು ಭಾಗಿಯಾಗಲಿದ್ದಾರೆ. ಇದಲ್ಲದೇ ಸ್ಯಾಂಡಲ್‌ವುಡ್‌ನ ಖ್ಯಾತ ನಟ-ನಟಿಯರು ಆಗಮಿಸುತ್ತಿದ್ದು ಅಭಿಮಾನಿಗಳನ್ನು ರಂಜಿಸಲಿದ್ದಾರೆ. ಜೊತೆಗೆ ಖ್ಯಾತ ಗಾಯಕರಾದ (Singers) ವಿಜಯ ಪ್ರಕಾಶ್, ಅನನ್ಯ ಭಟ್ ಹಾಗೂ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮೂರು ದಿನಗಳ ಕಾಲ ಮ್ಯೂಸಿಕಲ್ ನೈಟ್ (ಸಂಗೀತ ರಾತ್ರಿ) ನಡೆಸಿಕೊಡಲಿದ್ದಾರೆ.
 

PREV
Read more Articles on
click me!

Recommended Stories

ರೈತರ ಬೆಳೆಗಳಿಗೆ ಮಾರುಕಟ್ಟೆ ಕಲ್ಪಿಸಲು 'ಅಂತಾರಾಷ್ಟ್ರೀಯ ಸ್ಯಾಂಡ್‌ವಿಚ್ ಸ್ನಾತಕೋತ್ತರ ಕೋರ್ಸ್': ಸಿಎಂ ಸಿದ್ದರಾಮಯ್ಯ
'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ