ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್ ಅಣೆಕಟ್ಟೆಗೆ ಒಳ ಹರಿವಿನ ಪ್ರಮಾಣ ಹೆಚ್ಚಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಲಾಶಯದಿಂದ ಕಾವೇರಿ ನದಿಗೆ 25 ಸಾವಿರ ಕ್ಯುಸೆಕ್ ನೀರನ್ನು ಬಿಡಲಾಗುತ್ತಿದೆ.
ಮಂಡ್ಯ(ಅ.24): ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್ ಅಣೆಕಟ್ಟೆಗೆ ಒಳ ಹರಿವಿನ ಪ್ರಮಾಣ ಹೆಚ್ಚಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಲಾಶಯದಿಂದ ಕಾವೇರಿ ನದಿಗೆ 25 ಸಾವಿರ ಕ್ಯುಸೆಕ್ ನೀರನ್ನು ಬಿಡಲಾಗುತ್ತಿದೆ.
ಕೆಆರ್ ಎಸ್ ಅಣೆಕಟ್ಟೆಯಲ್ಲಿ 124.80 ಅಡಿ ನೀರು ಶೇಕರಣೆಯಾಗಿದೆ. ಬುಧವಾರ ಸಂಜೆ ಜಲಾಶಯಕ್ಕೆ 19,416 ಕ್ಯುಸೆಕ್ ನೀರು ಹರಿದು ಬರುತ್ತಿತ್ತು. 25,381 ಕ್ಯುಸೆಕ್ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿದೆ.
undefined
ಬೋಟಿಂಗ್ ಸ್ಥಗಿತ:
ಕಳೆದ ವಾರವೂ ಕೂಡ ಜಲಾಶಯದಿಂದ ಕಾವೇರಿ ನದಿಗೆ 20 ಸಾವಿರಕ್ಕೂ ಹೆಚ್ಚು ಕ್ಯುಸೆಕ್ ನೀರು ಬಿಡಲಾಗುತಿತ್ತು. ಕಾವೇರಿ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿರುವುದರಿಂದ ಶ್ರೀರಂಗಪಟ್ಟಣ ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ಸ್ಥಗಿತಗೊಳಿಸಲಾಗಿದೆ.
ರಾಜ್ಯದ ಅಣೆಕಟ್ಟುಗಳು 2ನೇ ಬಾರಿ ಸಂಪೂರ್ಣ ಭರ್ತಿ: ಈಗ ಹೆಚ್ಚಿದೆ ಆತಂಕ
ನೀರು ಕಡಮೆಯಾದ ನಂತರ ಬೋಟಿಂಗ್ ಮತ್ತೆ ಪ್ರಾರಂಭಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾವೇರಿ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುತ್ತಿರುವುದರಿಂದ ನದಿಯ ಎರಡು ದಂಡೆಗಳ ತಗ್ಗು ಪ್ರದೇಶದ ಜನರು ತಮ್ಮ ಆಸ್ತಿ, ಜಾನುವಾರುಗಳನ್ನು ರಕ್ಷಣೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.
ಮಂಡ್ಯ: ಬಿರುಸಿನ ಮಳೆಗೆ ತುಂಬಿ ಹರಿದ ಒಡಕೆ ಕಟ್ಟೆ