
ನವದೆಹಲಿ[ಮಾ.15]: ಮೊಬೈಲ್ ಫೋನ್ ಹಾಗೂ ಫೋನ್‌ಗೆ ಬಳಸುವ ಕೆಲವು ಬಿಡಿ ಭಾಗಗಳ ಮೇಲಿನ ಜಿಎಸ್‌ಟಿ ದರಗಳನ್ನು ಶೇ.12ರಿಂದ ಶೇ.18ಕ್ಕೆ ಏರಿಕೆ ಮಾಡಲು ಜಿಎಸ್‌ಟಿ ಮಂಡಳಿ ಶನಿವಾರ ತೀರ್ಮಾನ ಕೈಗೊಂಡಿದೆ. ಪರಿಷ್ಕೃತ ದರ ಏ.1ರಿಂದ ಜಾರಿ ಆಗಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಇದೇ ವೇಳೆ, 2018-19ನೇ ಸಾಲಿನಲ್ಲಿ 2 ಕೋಟಿಗಿಂತ ಕಡಿಮೆ ವಹಿವಾಟು ನಡೆಸುವ ಕಂಪನಿಗಳು ವಿಳಂಬವಾಗಿ ವಾರ್ಷಿಕ ತೆರಿಗೆ ಪಾವತಿ ವಿವರ ಸಲ್ಲಿಕೆ ಮಾಡಿದ್ದಕ್ಕೆ ವಿಧಿಸಿರುವ ದಂಡವನ್ನು ಮನ್ನಾ ಮಾಡಲು ಜಿಎಸ್‌ಟಿ ಮಂಡಳಿ ನಿರ್ಧರಿಸಿದೆ.
ಇದೇ ವೇಳೆ ಜಿಎಸ್‌ಟಿ ನೆಟ್ವರ್ಕ್ ಸಮರ್ಥ್ಯವನ್ನು ಹೆಚ್ಚಿಸುವ ನಿಟ್ಟಿನಿಂದ ಹೆಚ್ಚಿನ ಮಾನವ ಸಂಪನ್ಮೂಲ ಬಳಕೆ ಮಾಡುವಂತೆ ಜಿಎಸ್‌ಟಿ ಮಂಡಳಿ ಜಿಎಸ್‌ಟಿ ಸಾಫ್ಟ್ವೇರ್ ಅಭಿವೃದ್ಧಿಪಡಿಸಿದ ಇಸ್ಫೋಸಿಸ್ಗೆ ಸೂಚನೆ ನೀಡಿದೆ.
ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್‌ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.