ಜಿಯೋ ಬಳಕೆದಾರರಿಗೆ ಹೊಸ ಯೋಜನೆ : ಡಿಸ್ನಿ+ ಹಾಟ್‌ಸ್ಟಾರ್‌ ಗೆ ಮುಕ್ತ ಪ್ರವೇಶ

By Suvarna NewsFirst Published Aug 31, 2021, 9:48 PM IST
Highlights
  • ಹೊಸ ಪ್ಲಾನ್‌ನಿಂದ ಜಿಯೋ ಬಳಕೆದಾರರು ಈಗ ಎಲ್ಲ ವಿಡಿಯೋಗಳನ್ನು ನೋಡಬಹುದು
  • ಬಹು ವ್ಯಾಲಿಡಿಟಿಯ ಜಿಯೋ ಯೋಜನೆಗಳನ್ನು ಆಯ್ಕೆ ಮಾಡುವ ಅವಕಾಶ
  • ಜಿಯೋ ಗ್ರಾಹಕರಿಗೆ ಮತ್ತಷ್ಟು ಲಾಭ ಸೇರಿ ಹೊಸ ಯೋಜನೆ

ನವದೆಹಲಿ(ಆ.31):  ಭಾರತದ ಟೆಲಿಕಾಂ ಆಪರೇಟರ್ ಜಿಯೋ ಹೊಸ ಶ್ರೇಣಿಯ ಪ್ರಿಪೇಯ್ಡ್ ಯೋಜನೆಗಳನ್ನು ಆರಂಭಿಸಿದೆ.  ಡಿಸ್ನಿ+ ಹಾಟ್‌ಸ್ಟಾರ್‌ ನಲ್ಲಿರುವ ಎಲ್ಲಾ ವಿಷಯಗಳನ್ನು ನೋಡುವ ಅವಕಾಶವನ್ನು ಈ ಪ್ಲಾನ್‌ಗಳು ಒಳಗೊಂಡಿರಲಿದೆ. ಇದರಿಂದ ಜಿಯೋ ಗ್ರಾಹಕರಿಗೆ ಮತ್ತಷ್ಟು ಲಾಭವಾಗಲಿದೆ.

ಪ್ರಾದೇಶಿಕ ಭಾಷೆಗಳಿಗೆ ಜಿಯೋಮೀಟ್ ಸಪೋರ್ಟ್, ಶೀಘ್ರವೇ ಕನ್ನಡದಲ್ಲೂ ಲಭ್ಯ

Latest Videos

ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಯೋಜನೆ ಮತ್ತು ಕೊಡುಗೆಗಳನ್ನು ಪರಿಷ್ಕರಿಸುತ್ತಿರುವ ಜಿಯೋ, ಹಿಂದಿನದಕ್ಕಿಂತ ಹೆಚ್ಚಿ ವಿಷಯಗಳನ್ನು ನೋಡುವ ಅವಕಾಶವನ್ನು ಹೊಂದಿರುವ ಡಿಸ್ನಿ+ ಹಾಟ್‌ಸ್ಟಾರ್‌ನ 1 ವರ್ಷದ ಚಂದಾದಾರಿಕೆಯನ್ನು ನೀಡುವುದರ ಜೊತೆಗೆ ಅನಿಯಮಿತ ಧ್ವನಿ, ಡೇಟಾ, ಎಸ್‌ಎಂಎಸ್, ಜಿಯೋ ಆಪ್‌ಗಳು ಮತ್ತು ಇತರ ಪ್ರಯೋಜನಗಳನ್ನು ನೀಡಲಿದೆ.

ಹಳೇ ಜಿಯೋ ಪ್ಲಾನ್‌ಗಳು:
ಮೊದಲು ಜಿಯೋ ತನ್ನ ಯೋಜನೆಗಳಲ್ಲಿ ಡಿಸ್ನಿ+ ಹಾಟ್‌ಸ್ಟಾರ್ ವಿಐಪಿ ಚಂದಾದಾರಿಕೆಯನ್ನು ನೀಡುತ್ತಿತ್ತು.ಈ ಚಂದಾದಾರಿಕೆಯಲ್ಲಿ ಲೈವ್ ಕ್ರೀಡೆಗಳು, ಹಾಟ್ ಸ್ಟಾರ್ ವಿಶೇಷಗಳು, ಬ್ಲಾಕ್ ಬಸ್ಟರ್ ಚಲನಚಿತ್ರಗಳು ಮತ್ತು ಟಿವಿ ಕಾರ್ಯಕ್ರಮಗಳಿಗೆ ಬಳಕೆದಾರರು ಪ್ರವೇಶವನ್ನು ಪಡೆಯುತ್ತಿದ್ದರು. ಇದರೊಂದಿಗೆ 3 ಭಾರತೀಯ ಭಾಷೆಗಳಲ್ಲಿ ಡಬ್ ಮಾಡಲಾದ ವಿಷಯಗಳನ್ನು ನೋಡಬಹುದಾಗಿತ್ತು.

ಹೊಚ್ಚ ಹೊಸ ಯೋಜನೆಗಳು:
ಹೊಸ ಜಿಯೋ ಯೋಜನೆಗಳು ಡಿಸ್ನಿ+ ಹಾಟ್‌ಸ್ಟಾರ್ ನಲ್ಲಿರುವ ಎಲ್ಲಾ ಹೊಸ ವಿಷಯಗಳನ್ನು ನೋಡುವ ಅವಕಾಶ ನೀಡಲಿದೆ. ಡಿಸ್ನಿ+ ಓರಿಜಿನಲ್ಸ್‌, ಡಿಸ್ನಿ ಟಿವಿ ಶೋಗಳು ಸೇರಿದಂತೆ ಇಂಗ್ಲಿಷ್ ಭಾಷೆಯಲ್ಲಿ ಅಂತರಾಷ್ಟ್ರೀಯ ಕಂಟೆಂಟ್‌ಗಳನ್ನು ನೋಡುವ ಅವಕಾಶವನ್ನು ಮಾಡಿಕೊಡಲಿದೆ. ಇದರೊಂದಿಗೆ ಮಾರ್ವೆಲ್, ಸ್ಟಾರ್ ವಾರ್ಸ್, ನ್ಯಾಷನಲ್ ಜಿಯೋಗ್ರಾಫಿಕ್, HBO, FX, ಶೋಟೈಮ್ ಮತ್ತು ಇನ್ನಷ್ಟು ವಿಷಯಗಳಿಗೆ ಮುಕ್ತ ಪ್ರವೇಶವನ್ನು ನೀಡಲಿದೆ.

ಜಿಯೋಫೋನ್ ನೆಕ್ಸ್ಟ್‌ ಖರೀದಿಗೆ ಮುಂದಿನ ವಾರದಿಂದ ಬುಕ್ಕಿಂಗ್?

ಪ್ಲಾನ್‌ 1 :ರೂ. 499
ಈ ಪ್ಲಾನ್‌ನಲ್ಲಿ ಬಳಕೆದಾರರು ಪ್ರತಿ ನಿತ್ಯ ವೇಗದ 3 GB ಡೇಟಾವನ್ನು ಪಡೆಯಲಿದ್ದಾರೆ. ಇದಲ್ಲದೇ ಅನಿಯಮಿತ ಕರೆಗಳು ಮತ್ತು ಮೇಸೆಜ್‌ ಕಳುಹಿಸುವ ಅವಕಾಶವು ದೊರೆಯಲಿದೆ. 28 ದಿನಗಳ ವ್ಯಾಲಿಡಿಟಿಯನ್ನು ಹೊಂದಿದ್ದು, ಡಿಸ್ನಿ + ಹಾಟ್ ಸ್ಟಾರ್ ಸಬ್‌ಸ್ಕ್ರಿಪ್ಶನ್ ಸಹ ಲಭ್ಯವಿರಲಿದೆ. ಇದಕ್ಕಾಗಿ ರೂ. 499 ಪಾವತಿ ಮಾಡಬೇಕಾಗಿದೆ. 

ಪ್ಲಾನ್‌ 2 :ರೂ. 666
ಈ ಪ್ಲಾನ್‌ನಲ್ಲಿ ಬಳಕೆದಾರರು ಪ್ರತಿ ನಿತ್ಯ ವೇಗದ 2 GB ಡೇಟಾವನ್ನು ಪಡೆಯಲಿದ್ದಾರೆ. ಇದಲ್ಲದೇ ಅನಿಯಮಿತ ಕರೆಗಳು ಮತ್ತು ಮೇಸೆಜ್‌ ಕಳುಹಿಸುವ ಅವಕಾಶವು ದೊರೆಯಲಿದೆ. 56 ದಿನಗಳ ವ್ಯಾಲಿಡಿಟಿಯನ್ನು ಹೊಂದಿದ್ದು, ಡಿಸ್ನಿ + ಹಾಟ್ ಸ್ಟಾರ್ ಸಬ್‌ಸ್ಕ್ರಿಪ್ಶನ್ ಸಹ ಲಭ್ಯವಿರಲಿದೆ. ಇದಕ್ಕಾಗಿ ರೂ. 666 ಪಾವತಿ ಮಾಡಬೇಕಾಗಿದೆ. 

ಪ್ಲಾನ್‌ 3 :ರೂ. 888
ಈ ಪ್ಲಾನ್‌ನಲ್ಲಿ ಬಳಕೆದಾರರು ಪ್ರತಿ ನಿತ್ಯ ವೇಗದ 2 GB ಡೇಟಾವನ್ನು ಪಡೆಯಲಿದ್ದಾರೆ. ಇದಲ್ಲದೇ ಅನಿಯಮಿತ ಕರೆಗಳು ಮತ್ತು ಮೇಸೆಜ್‌ ಕಳುಹಿಸುವ ಅವಕಾಶವು ದೊರೆಯಲಿದೆ. 84 ದಿನಗಳ ವ್ಯಾಲಿಡಿಟಿಯನ್ನು ಹೊಂದಿದ್ದು, ಡಿಸ್ನಿ + ಹಾಟ್ ಸ್ಟಾರ್ ಸಬ್‌ಸ್ಕ್ರಿಪ್ಶನ್ ಸಹ ಲಭ್ಯವಿರಲಿದೆ. ಇದಕ್ಕಾಗಿ ರೂ. 888 ಪಾವತಿ ಮಾಡಬೇಕಾಗಿದೆ. 

ಪ್ಲಾನ್‌ 4 :ರೂ. 2599 (ಒಂದು ವರ್ಷ ವ್ಯಾಲಿಡಿಟಿ)
ಈ ಪ್ಲಾನ್‌ನಲ್ಲಿ ಬಳಕೆದಾರರು ಪ್ರತಿ ನಿತ್ಯ ವೇಗದ 2 GB ಡೇಟಾವನ್ನು ಪಡೆಯಲಿದ್ದಾರೆ. ಇದಲ್ಲದೇ ಅನಿಯಮಿತ ಕರೆಗಳು ಮತ್ತು ಮೇಸೆಜ್‌ ಕಳುಹಿಸುವ ಅವಕಾಶವು ದೊರೆಯಲಿದೆ. 365 ದಿನಗಳ ವ್ಯಾಲಿಡಿಟಿಯನ್ನು ಹೊಂದಿದ್ದು, ಡಿಸ್ನಿ + ಹಾಟ್ ಸ್ಟಾರ್ ಸಬ್‌ಸ್ಕ್ರಿಪ್ಶನ್ ಸಹ ಲಭ್ಯವಿರಲಿದೆ. ಇದಕ್ಕಾಗಿ ರೂ. 2599 ಪಾವತಿ ಮಾಡಬೇಕಾಗಿದೆ. 

ಪ್ಲಾನ್‌ 5 :ರೂ. 549
ಈ ಪ್ಲಾನ್‌ನಲ್ಲಿ ಬಳಕೆದಾರರು ಪ್ರತಿ ನಿತ್ಯ ವೇಗದ 1.5 GB ಡೇಟಾವನ್ನು ಪಡೆಯಲಿದ್ದಾರೆ. 56 ದಿನಗಳ ವ್ಯಾಲಿಡಿಟಿಯನ್ನು ಹೊಂದಿದ್ದು, ಡಿಸ್ನಿ + ಹಾಟ್ ಸ್ಟಾರ್ ಸಬ್‌ಸ್ಕ್ರಿಪ್ಶನ್ ಸಹ ಲಭ್ಯವಿರಲಿದೆ. ಇದಕ್ಕಾಗಿ ರೂ. 549 ಪಾವತಿ ಮಾಡಬೇಕಾಗಿದೆ. (ಇದರಲ್ಲಿ ಉಚಿತ ಕರೆ ಸೌಲಭ್ಯವಿರುವುದಿಲ್ಲ)

 ಈ ಹೊಸ ಪ್ಲಾನ್‌ ಗಳು 01ನೇ ಸೆಪ್ಟೆಂಬರ್ 2021 ರಿಂದ ಲಭ್ಯವಿರುತ್ತದೆ. ಸಕ್ರಿಯ ಡಿಸ್ನಿ+ ಹಾಟ್‌ಸ್ಟಾರ್ ಯೋಜನೆಗಳಲ್ಲಿರುವ ಎಲ್ಲಾ ಜಿಯೋ ಗ್ರಾಹಕರು ಅಸ್ತಿತ್ವದಲ್ಲಿರುವ ಪ್ರಯೋಜನಗಳನ್ನು ಅವರ ಪ್ರಸ್ತುತ ಚಂದಾದಾರಿಕೆ ಅವಧಿ ಮುಗಿಯುವವರೆಗೆ ಆನಂದಿಸುವುದನ್ನು ಮುಂದುವರಿಸುತ್ತಾರೆ.

click me!