4G ಡೌನ್‌ಲೋಡ್ ಸ್ಪೀಡ್: ಮೊದಲ ಸ್ಥಾನದಲ್ಲಿ ರಿಲಯನ್ಸ್ ಜಿಯೋ!

By Suvarna News  |  First Published May 13, 2021, 9:00 PM IST
  • ನಿಕಟ ಸ್ಪರ್ಧಿಗಿಂತ ಜಿಯೋ ಮೂರು ಪಟ್ಟು ಅಧಿಕ ಡೌಲ್‌ಲೋಡ್ ವೇಗ
  • ಅಪ್‌ಲೋಡ್ ವೇಗದಲ್ಲಿ ವೋಡಾಫೋನ್‌ಗೆ ಮೊದಲ ಸ್ಥಾನ
  • ಡೇಟಾ ಬಿಡುಗಡೆ ಮಾಡಿದ ಟ್ರಾಯ್

ನವದೆಹಲಿ(ಮೇ.13): ರಿಲಯನ್ಸ್ ಜಿಯೋ, ಪ್ರತಿ ಸೆಕೆಂಡ್‌ಗೆ 20.1 ಮೆಗಾಬೈಟ್ ಡೇಟಾ ಡೌನ್‌ಲೋಡ್‌ ಪ್ರಮಾಣದಲ್ಲಿ 4ಜಿ ಸ್ಪೀಡ್ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ. ಏಪ್ರಿಲ್ ತಿಂಗಳ ಅಪ್‌ಲೋಡ್ ವೇಗದ ವಿಭಾಗದಲ್ಲಿ ವೊಡಾಫೋನ್ 6.7 Mbpsನೊಂದಿಗೆ ಇತರೆ ಕಂಪೆನಿಗಳಿಗಿಂತ ಮುಂಚೂಣಿಯಲ್ಲಿದೆ ಎಂದು ದೂರಸಂಪರ್ಕ ನಿಯಂತ್ರಕ ಸಂಸ್ಥೆ ಟ್ರಾಯ್‌ನ ಇತ್ತೀಚಿನ ಮಾಹಿತಿ ತಿಳಿಸಿದೆ.

ಸ್ಪೆಕ್ಟ್ರಂ ಹರಾಜು: ಜಿಯೋದಿಂದ ಅತ್ಯಧಿಕ 57122 ಕೋಟಿ ರೂ. ಸ್ಪೆಕ್ಟ್ರಂ ಖರೀದಿ!

Tap to resize

Latest Videos

ತನ್ನ ಅತ್ಯಂತ ನಿಕಟ ಸ್ಪರ್ಧಿ ವೊಡಾಫೋನ್‌ಗಿಂತಲೂ ಮೂರು ಪಟ್ಟು ಅಧಿಕ ಡೌಲ್‌ಲೋಡ್ ವೇಗವನ್ನು ರಿಲಯನ್ಸ್ ಜಿಯೋ ಹೊಂದಿದೆ.

ವೊಡಾಫೋನ್ ಮತ್ತು ಐಡಿಯಾ ಸೆಲ್ಯುಲರ್‌ಗಳು ತಮ್ಮ ಮೊಬೈಲ್ ಉದ್ಯಮಗಳನ್ನು ವೊಡಾಫೋನ್ ಐಡಿಯಾ ಲಿಮಿಟೆಡ್ ಎಂಬ ಹೆಸರಿನಲ್ಲಿ ವಿಲೀನಗೊಳಿಸಿದ್ದರೂ, ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರಿ (ಟ್ರಾಯ್) ಈಗಲೂ ಎರಡೂ ಸಂಸ್ಥೆಗಳ ಪ್ರತ್ಯೇಕ ನೆಟ್‌ವರ್ಕ್ ವೇಗದ ದತ್ತಾಂಶಗಳನ್ನು ಬಿಡುಗಡೆ ಮಾಡುತ್ತಿದೆ.

2G ಮುಕ್ತ ಭಾರತಕ್ಕೆ ಹೊಸ ಜಿಯೋಫೋನ್ 2021 ಆಫರ್; 1,999ಕ್ಕೆ ಜಿಯೋಫೋನ್!.

ಏಪ್ರಿಲ್‌ನಲ್ಲಿ ವೊಡಾಫೋನ್ 7Mbps ಡೌನ್‌ಲೋಡ್ ವೇಗವನ್ನು ದಾಖಲಿಸಿದೆ ಎಂದು ಟ್ರಾಯ್ ಮೇ 11ರಂದು ನೀಡಿರುವ ಮಾಹಿತಿ ತಿಳಿಸಿದೆ. ಇದರ ಬಳಿಕ ಐಡಿಯಾ 5.8 Mbps ಮತ್ತು ಏರ್‌ಟೆಲ್ 5Mbps ಡೌನ್‌ಲೋಡ್ ವೇಗದೊಂದಿಗೆ ನಂತರದ ಸ್ಥಾನಗಳಲ್ಲಿವೆ.

ಅಪ್‌ಲೋಡ್ ವಿಭಾಗದಲ್ಲಿ 6.7 Mbpsನೊಂದಿಗೆ ವೊಡಾಫೋನ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ 6.1 Mbps ಇರುವ ಐಡಿಯಾ ಇದೆ. ಜಿಯೋ 4.2 Mbps ಮತ್ತು ಏರ್‌ಟೆಲ್ 3.9 Mbps ಹೊಂದಿವೆ.

ಡೌನ್‌ಲೋಡ್ ವೇಗವು ಗ್ರಾಹಕರು ಅಂತರ್ಜಾಲದಿಂದ ಮಾಹಿತಿಗಳನ್ನು ಪಡೆದುಕೊಳ್ಳಲು ನೆರವಾಗುತ್ತದೆ. ಅಪ್‌ಲೋಡ್ ವೇಗವು ತಮ್ಮ ಸಂಪರ್ಕದಲ್ಲಿರುವವರಿಗೆ ಚಿತ್ರಗಳು ಮತ್ತು ವಿಡಿಯೋಗಳನ್ನು ತ್ವರಿತವಾಗಿ ರವಾನಿಸಲು ನೆರವಾಗುತ್ತದೆ.

ಮೈಸ್ಪೀಡ್ ಆಪ್‌ನ ಸಹಾಯದೊಂದಿಗೆ ದೇಶಾದ್ಯಂತ ರಿಯಲ್ ಟೈಮ್ ಆಧಾರದಲ್ಲಿ ದತ್ತಾಂಶಗಳನ್ನು ಸಂಗ್ರಹಿಸುವ ಟ್ರಾಯ್, ಅದರ ಮೂಲಕ ಸರಾಸರಿ ವೇಗವನ್ನು ಲೆಕ್ಕ ಹಾಕುತ್ತದೆ.

click me!