ಕಾಡಿನ ಮಧ್ಯೆ ಸಣ್ಣತನ, ದ್ರೋಹ ಮತ್ತು ಪ್ರತೀಕಾರ: ರಿಪ್ಪನ್ ಸ್ವಾಮಿ ಸಿನಿಮಾ ವಿಮರ್ಶೆ

Published : Aug 30, 2025, 06:03 PM IST
Vijay Raghavendra

ಸಾರಾಂಶ

ಸಿನಿಮಾ ನಾಯಕ ಎಂದರೆ ಒಳ್ಳೆಯವನೇ ಆಗಿರಬೇಕು ಎಂಬ ಸಿದ್ಧಸೂತ್ರವನ್ನು ಈ ಸಿನಿಮಾ ಒಡೆದು ಹಾಕಿದೆ. ಇಲ್ಲಿ ಒಳ್ಳೆಯದು, ಕೆಟ್ಟದ್ದು ಅನ್ನುವುದು ಪರಿಸ್ಥಿತಿಗೆ ಬಿಟ್ಟಿದ್ದು. 

ರಾಜೇಶ್ ಶೆಟ್ಟಿ

ಒಮ್ಮೆಯೂ ನಗದ, ಯಾರಿಗೂ ಅಂಜದ, ಒಬ್ಬರಿಗೂ ಕರುಣೆ ತೋರದ, ಆಗದವರು ಯಾರೇ ಆದರೂ ಸದೆಬಡಿಯುವ, ಹಸಿ ಮಾಂಸವನ್ನು ಭಕ್ಷಿಸುವ, ಕಣ್ಣಲ್ಲೇ ರಕ್ತ ಹೀರುವ, ಘನಗಂಭೀರ ಪಾತ್ರವನ್ನು ವಿಜಯ ರಾಘವೇಂದ್ರ ಅವರು ನಿಭಾಯಿಸಿರುವ ರೀತಿಯೇ ಈ ಸಿನಿಮಾದ ಆಧಾರ. ಈ ಸಿನಿಮಾದಲ್ಲಿ ವಿಜಯ್‌ ರಾಘವೇಂದ್ರ ನಟಿಸಿದ್ದಾರೆ ಅನ್ನುವುದಕ್ಕಿಂತ ವಿಜೃಂಭಿಸಿದ್ದಾರೆ. ಅಲ್ಲದೇ ಇಂಥದ್ದೊಂದು ಪಾತ್ರದಲ್ಲಿ ನಟಿಸುವ ಧೈರ್ಯ ತೋರಿರುವುದಕ್ಕೆ ಅವರು ನಿಜಕ್ಕೂ ಅಭಿನಂದನಾರ್ಹರು.

ಸಿನಿಮಾ ನಾಯಕ ಎಂದರೆ ಒಳ್ಳೆಯವನೇ ಆಗಿರಬೇಕು ಎಂಬ ಸಿದ್ಧಸೂತ್ರವನ್ನು ಈ ಸಿನಿಮಾ ಒಡೆದು ಹಾಕಿದೆ. ಇಲ್ಲಿ ಒಳ್ಳೆಯದು, ಕೆಟ್ಟದ್ದು ಅನ್ನುವುದು ಪರಿಸ್ಥಿತಿಗೆ ಬಿಟ್ಟಿದ್ದು. ಅವರವರಿಗೆ ಎದುರಾಗುವ ಪರಿಸ್ಥಿತಿಗೆ ತಕ್ಕಂತೆ ಇಲ್ಲಿ ಒಳ್ಳೆಯತನ, ಕೆಟ್ಟತನ ಪ್ರಕಟವಾಗುತ್ತಾ ಹೋಗುತ್ತದೆ. ಅಷ್ಟರ ಮಟ್ಟಿಗೆ ಇದೊಂದು ಬರಹಗಾರನ ಸಿನಿಮಾ. ಹಸಿರು ತುಂಬಿರುವ ದಟ್ಟ ಕಾಡಿನಂಥಾ ಊರಿನಲ್ಲಿ ನಡೆಯುವ ಕತೆ ಇದು. ಒಂದು ಸಾವಿನಿಂದ ಕತೆ ಆರಂಭವಾಗುತ್ತದೆ. ಆ ಸಾವು ಏಕಾಯಿತು, ಹೇಗಾಯಿತು ಎಂಬುದನ್ನು ಬಿಡಿಸುತ್ತಾ ಕತೆ ಸಾಗುತ್ತದೆ.

ಚಿತ್ರ: ರಿಪ್ಪನ್ ಸ್ವಾಮಿ
ನಿರ್ದೇಶನ: ಕಿಶೋರ್ ಮೂಡುಬಿದಿರೆ
ತಾರಾಗಣ: ವಿಜಯ ರಾಘವೇಂದ್ರ, ಅಶ್ವಿನಿ ಚಂದ್ರಶೇಖರ್‌, ಪ್ರಕಾಶ್‌ ತುಮಿನಾಡು, ವಜ್ರಧೀರ್ ಜೈನ್

ಅಲ್ಲಿಂದ ಮುಂದೆ ಮನುಷ್ಯನ ಸಣ್ಣತನಗಳ ಪರಿಚಯ, ಬಾಲ್ಯದ ಗಾಯ, ದ್ರೋಹದ ಕ್ರೌರ್ಯ ಒಂದೊಂದಾಗಿ ಅನಾವರಣಗೊಳ್ಳುತ್ತಾ ಹೋಗುತ್ತದೆ. ಒಂದೊಂದೇ ತಿರುವುಗಳನ್ನಿಟ್ಟಿರುವ ನಿರ್ದೇಶಕರು ಅಂತಿಮವಾಗಿ ಮುಳ್ಳನ್ನು ಮುಳ್ಳಿನಿಂದಲೇ ತೆಗೆದು ಕೊನೆಯ ದಾಳ ಉರುಳಿಸುತ್ತಾರೆ ಸಿನಿಮಾ ವಿಭಿನ್ನವಾಗಿ ಮೂಡಿಬಂದಿದೆ. ಆದರೆ ಪಾತ್ರಗಳ ಆಳವನ್ನು, ಘಟನೆಗಳ ತೀವ್ರತೆಯನ್ನು ಕಟ್ಟಿಕೊಡುವಲ್ಲಿ ಗಾಢತೆ ಪ್ರಾಪ್ತವಾಗಿಲ್ಲ. ಮೇಲು ಮೇಲಕ್ಕೆ ಕತೆ ನಡೆಯುತ್ತಿರುವಂತೆ ಭಾಸವಾಗುತ್ತದೆ. ಅದರ ಹೊರತಾಗಿ ಇದೊಂದು ವಿಶಿಷ್ಟ ಮಾದರಿಯ, ವಿಭಿನ್ನ ದಾರಿಯ ಸಿನಿಮಾ. ಅದಕ್ಕಾಗಿ ತಂಡಕ್ಕೆ ಮೆಚ್ಚುಗೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

'ಅಖಂಡ 2' ಫಸ್ಟ್ ರಿವ್ಯೂ ವೈರಲ್.. ಹುಚ್ಚೆಬ್ಬಿಸುವಂತಿವೆ ಬಾಲಯ್ಯ ಮಾಸ್ ಡೈಲಾಗ್‌ಗಳು, ಚಿತ್ರದ ಮೈನಸ್ ಏನು?
ಪ್ರೇಮವೋ, ದ್ವೇಷವೋ, ಥ್ರಿಲ್ಲರೋ?: ಇಲ್ಲಿದೆ ಅನೇಕ ತಿರುವುಗಳ 'ಫ್ಲರ್ಟ್' ಸಿನಿಮಾ ವಿಮರ್ಶೆ