ಅಯೋಧ್ಯೆ ತೀರ್ಪು ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಹಿಂದೂ ಹಾಗೂ ಮುಸ್ಲಿಂ ಬಾಂಧವರು ಸಂಭ್ರಮಾಚರಣೆ ನಡೆಸಿದ್ದಾರೆ. ರಾಮನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಹಾಗೂ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಗೌರವಿಸಿದ್ದಾರೆ.
ಮೈಸೂರು(ನ.09): ಅಯೋಧ್ಯೆ ತೀರ್ಪು ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಹಿಂದೂ ಹಾಗೂ ಮುಸ್ಲಿಂ ಬಾಂಧವರು ಸಂಭ್ರಮಾಚರಣೆ ನಡೆಸಿದ್ದಾರೆ. ರಾಮನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಹಾಗೂ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಗೌರವಿಸಿದ್ದಾರೆ.
ಏಳು ದಶಕಗಳ ಅಯೊಧ್ಯೆ ರಾಮಭೂಮಿ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ವಿವಾದಿತ 2.77 ಎಕರೆ ಜಾಗವನ್ನು ರಾಮಲಲ್ಲಾಗೆ ವಹಿಸಿ ಸುಪ್ರೀಂ ತೀರ್ಪು ನೀಡಿದೆ. ಯಾರ ಭಾವನೆಗೂ ಧಕ್ಕೆಯಾಗದಂತೆ ಬಾಬರಿ ಮಸೀದಿಗೂ ಅಯೋಧ್ಯೆಯಲ್ಲೇ ಪ್ರತ್ಯೇಕ ಜಾಗವನ್ನು ಕಲ್ಪಿಸುವಂತೆ ಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ.
undefined
ಬಾಬರ್ ಅಯೋಧ್ಯೆ(5 ಎಕರೆ)ಯಲ್ಲೇ ಇರಲಿದ್ದಾನೆ: ಸಹೋದರರ ನಂಬಿಕೆ ಮುಖ್ಯ ಎಂದ ಸುಪ್ರೀಂ!
ಸಿಹಿ ಹಂಚಿ ಸಂಭ್ರಮ:
ಅಯೋಧ್ಯೆ ತೀರ್ಪು ಪ್ರಕಟವಾದ ಹಿನ್ನಲೆಯಲ್ಲಿ ಮೈಸೂರಿನಲ್ಲಿ ಸಂತಸ ಮನೆ ಮಾಡಿದೆ. ಹಿಂದೂ ಮುಸ್ಲಿಂ ಬಾಂಧವರು ಸಂಭ್ರಮಾಚರಿಸಿದ್ದು, ಒಕ್ಕೊರಲಿನಿಂದ ಕೋರ್ಟ್ ತೀರ್ಪನ್ನು ಗೌರವಿಸಿ, ಸ್ವಾಗತಿಸಿದ್ದಾರೆ. ರಾಮನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಹಾಗೂ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಗಿದೆ.
ಶಾಸಕ ಎಸ್.ಎ.ರಾಮದಾಸ್ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಸಲಾಗಿದ್ದು, ಮೈಸೂರಿನ ವಿದ್ಯಾರಣ್ಯಪುರಂನಲ್ಲಿ ಶಾಸಕ ರಾಮದಾಸ್ ಕಚೇರಿ ಮುಂಭಾಗ ಸಂಭ್ರಮ ಆಚರಿಸಲಾಗಿದೆ.
ರಾಮನಿಗೆ ದೊರೆತ ಅಯೋಧ್ಯೆ: ಶತಮಾನಗಳ ನಂಬಿಕೆಗೆ ಸುಪ್ರೀಂ ತೀರ್ಪಿನ ನೈವೇದ್ಯೆ!
ಮುಸ್ಲಿಂ ಮಹಿಳೆಯರೂ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ. ಹಿಂದೂ ಮುಸ್ಲಿಂ ಬಾಯ್ ಬಾಯ್ ಎಂದು ಸಂದೇಶ ರವಾನೆಯಾಗಿದ್ದು, ಜನ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದಾರೆ.
ಸೋಲು, ಗೆಲುವು ಅಲ್ಲ, ವಿವಾದ ತೀರ್ಮಾನವಾಗಿದ್ದೇ ಸಂತಸ ಎಂದ್ರು ಸಿದ್ದಗಂಗಾ ಶ್ರೀ
7 ದಶಕಗಳ ಅಯೋಧ್ಯೆ ರಾಮ ಜನ್ಮ ಭೂಮಿ ವಿವಾದಕ್ಕೆ ಇಂದು ತೆರೆ ಬಿದ್ದಿದ್ದು, ಸುಪ್ರೀಂ ಇಂದು ಐತಿಹಾಸಿಕ ತೀರ್ಪು ಪ್ರಕಟಿಸಿದೆ. ವಿವಾದಿತ 2.77 ಎಕರೆ ಜಾಗವನ್ನು ರಾಮಲಲ್ಲಾಗೆ ವಹಿಸಿ ಸುಪ್ರೀಂ ತೀರ್ಪು ನೀಡಿದೆ. ಯಾರ ಭಾವನೆಗೂ ಧಕ್ಕೆಯಾಗದಂತೆ ಬಾಬರಿ ಮಸೀದಿಗೂ ಅಯೋಧ್ಯೆಯಲ್ಲೇ ಪ್ರತ್ಯೇಕ ಜಾಗವನ್ನು ಕಲ್ಪಿಸುವಂತೆ ಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ.