ಉಪ ಚುನಾವಣೆ : ಹುಣಸೂರು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಫಿಕ್ಸ್?

By Kannadaprabha NewsFirst Published Oct 23, 2019, 11:42 AM IST
Highlights

ರಾಜ್ಯದಲ್ಲಿ ಶೀಘ್ರ ಉಪ ಚುನಾವಣೆ ನಡೆಯಲಿದ್ದು, ಈ ನಿಟ್ಟಿನಲ್ಲಿ ವಿವಿಧ ಪಕ್ಷಗಳಲ್ಲಿ ಚುನಾವಣಾ ತಯಾರಿ ನಡೆಯುತ್ತಿದೆ. ಇದೀಗ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬಲವರ್ಧನೆಗೆ ಇದೀಗ ಹುಣಸೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸಿ.ಪಿ ಯೋಗೇಶ್ವರ್ ಸ್ಪರ್ಧೆ ಮಾಡುವ ಸಾಧ್ಯತೆ ಇದೆ. 

ರಾಮನಗರ [ಅ.23]:   ರಾಜ್ಯದಲ್ಲಿ ಶೀಘ್ರ ಉಪ ಚುನಾವಣೆ ನಡೆಯಲಿದ್ದು, ವಿವಿಧ ಪಕ್ಷಗಳಲ್ಲಿ ಅಭ್ಯರ್ಥಿ ಆಯ್ಕೆ ಹಾಗೂ ಚುನಾವಣಾ ತಯಾರಿ ಜೋರಾಗಿದೆ. 

ಇನ್ನು ಎಚ್. ವಿಶ್ವನಾಥ್ ಅನರ್ಹತೆಯಿಂದ ತೆರವಾದ ಹುಣಸೂರು ಕ್ಷೇತ್ರ ಉಪಚುನಾವಣೆ ನಡೆಯಲಿದ್ದು, ಬಿಜೆಪಿಯಿಂದ ಸಿ.ಪಿ ಯೋಗೇಶ್ವರ್ ಅಭ್ಯರ್ಥಿಯಾಗುವ ಸಾಧ್ಯತೆ ಇದೆ. 

ರಾಮನಗರ ಜಿಲ್ಲೆ ಚನ್ನಪಟ್ಟಣದ ಕ್ಷೇತ್ರದ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಈಗಾಗಲೇ ಹುಣಸೂರು ಕ್ಷೇತ್ರದ ಪ್ರವಾಸ ನಡೆಸುತ್ತಿದ್ದು, ಕ್ಷೇತ್ರ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಜೊತೆಗೆ ಗುಪ್ತವಾಗಿ ಮಾತುಕತೆ ನಡೆಸುತ್ತಿದ್ದಾರೆ. 

ಈಗಾಗಲೇ ಐದಾರು ಭಾರಿ ಹುಣಸೂರು ಕ್ಷೇತ್ರದಾದ್ಯಂತ ಪ್ರವಾಸ ನಡೆಸಿದ್ದು,  ಈಗಾಗಲೇ ಅಭ್ಯರ್ಥಿಯಾಗುವ ಬಗ್ಗೆ ಡಿಸಿಎಂ ಅಶ್ವತ್ಥ್ ನಾರಾಯಣ್ ಕೂಡ ಸಿಗ್ನಲ್ ನೀಡಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಎಲ್ಲಾ ಕಡೆಗೂ ಸಲ್ಲುವ ವ್ಯಕ್ತಿ ಎನಿಸಿಕೊಳ್ಳುತ್ತಿರುವ ಯೋಗೇಶ್ವರ್ ಇದೀಗ ಉಪಚುನಾವಣೆ ಅಭ್ಯರ್ಥಿಯಾಗುವ ಸಾಧ್ಯತೆ ಇದ್ದು, ಅತೃಪ್ತರ ವಿಚಾರದಲ್ಲಿಯೂ ಕೂಡ ಪ್ರಮುಖ ಪಾತ್ರ ವಹಿಸಿ ಬಿಜೆಪಿ ಸರ್ಕಾರ ರಚನೆ ಮಾಡುವಲ್ಲಿ ಮಹತ್ವದ ಸ್ಥಾನ ನಿರ್ವಹಿಸಿದ್ದರು. 

ಈ ನಿಟ್ಟಿನಲ್ಲಿ ಸಿ.ಪಿ. ಯೊಗೇಶ್ವರ್ ಅವರನ್ನು ಕಣಕ್ಕೆ ಇಳಿಸಿ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಬಲವರ್ಧನೆಗೆ ಪ್ಲಾನ್ ಮಾಡಲಾಗುತ್ತಿದೆ. 

click me!