‘ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಸರ್ಕಾರ’

Published : Oct 14, 2019, 09:23 AM IST
‘ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಸರ್ಕಾರ’

ಸಾರಾಂಶ

ರಾಜ್ಯದಲ್ಲಿ ಶೀಘ್ರವೇ ಮತ್ತೆ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಭವಿಷ್ಯ ನುಡಿಯಲಾಗಿದೆ. 

ಟಿ.ನರಸೀಪುರ [ಅ.14]:  ಆಡಳಿತರೂಢ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಸಮರ್ಥ ವಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಕಾರ್ಯ ನಿರ್ವಹಿಸುವ ಮೂಲಕ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ಅಧಿಕಾರಕ್ಕೆ ತರುವುದು ಖಚಿತ ಎಂದು ತಾಪಂ ಮಾಜಿ ಉಪಾಧ್ಯಕ್ಷ ಬಿ.ಮರಯ್ಯ ಹೇಳಿದರು.

ತಾಲೂಕು ಕಚೇರಿ ಆವರಣದಲ್ಲಿ ಅ.14ರಂದು ಡಾ.ಬಿ.ಆರ್‌. ಅಂಬೇಡ್ಕರ್‌ ಪುತ್ಥಳಿ ಅನಾವರಣಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗಮಿಸುವ ಹಿನ್ನೆಲೆಯಲ್ಲಿ ಪಟ್ಟಣದ ಕಬಿನಿ ಅತಿಥಿ ಗೃಹದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು, ಮೊದಲ ಅಧಿವೇಶನದಲ್ಲೇ ಬಿಜೆಪಿ ಸರ್ಕಾರದ ವಿರುದ್ಧ ಗುಡುಗಿರುವ ಸಿದ್ದರಾಮಯ್ಯ ಮತ್ತೊಮ್ಮೆ ತಮ್ಮ ಹೋರಾಟದ ಮೂಲಕ ಕಾಂಗ್ರೆಸ್ಸನ್ನು ಅಧಿಕಾರಕ್ಕೆ ತರಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕಳೆದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲೇ ಅಂಬೇಡ್ಕರ್‌ ಪುತ್ಥಳಿ ನಿರ್ಮಾಣವಾಗಬೇಕಿತ್ತು. ತಾಂತ್ರಿಕ ಸಮಸ್ಯೆಗಳಿಂದ ವಿಳಂಬವಾಗಿತ್ತಾದರೂ ಈಗ ಲೋಕಾರ್ಪಣೆಗೆ ಸಜ್ಜಾಗಿದ್ದು, ಅ.14 ರಂದು ಅನಾವರಣಗೊಳ್ಳುತ್ತಿರುವುದರಿಂದ ಸಮಾರಂಭದಲ್ಲಿ ಭಾಗವಹಿಸಲು ಸಿದ್ದರಾಮಯ್ಯ ಆಗಮಿಸುತ್ತಿದ್ದಾರೆ. ವಿಪಕ್ಷ ನಾಯಕರಾದ ನಂತರ ಪಟ್ಟಣಕ್ಕೆ ಬರುತ್ತಿರುವುದರಿಂದ ಹೊಸ ತಿರುಮಕೂಡಲು ವೃತ್ತದಲ್ಲಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಗುವುದು ಎಂದರು.

ಹಿರಿಯ ಕಾಂಗ್ರೆಸ್‌ ಮುಖಂಡ ಪಿ.ಸ್ವಾಮಿನಾಥ್‌ಗೌಡ, ಗ್ರಾಪಂ ಮಾಜಿ ಅಧ್ಯಕ್ಷ ಕರಿಯಪ್ಪ, ಎ.ಜೆ. ವೆಂಕಟೇಶ್‌, ಮಾಜಿ ಉಪಾಧ್ಯಕ್ಷ ಪುಟ್ಟು, ಮಾಜಿ ಸದಸ್ಯೆ ನಾಗರತ್ನ, ಮುಖಂಡರಾದ ರಾಮ, ಸೋಮಣ್ಣ ಇದ್ದರು.

PREV
click me!

Recommended Stories

ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ
ಮೈಸೂರಿನ ಪುಟ್ಟ ರಾಜಕುಮಾರನ ಹುಟ್ಟುಹಬ್ಬ: ವಿಶೇಷ ಫೋಟೊಗಳನ್ನು ಶೇರ್ ಮಾಡಿದ ಮಹಾರಾಣಿ