
ಮೈಸೂರು (ಸೆ.23): ದಸರಾ ಆರಂಭದ ಬೆನ್ನಲ್ಲಿಯೇ ಚಾಮುಂಡಿ ಬೆಟ್ಟದ ಶಿವಾರ್ಚಕ ಮಂಗಳವಾರ ನಿಧರಾಗಿದ್ದಾರೆ. ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸೋಮವಾರ ಅದ್ದೂರಿ ಚಾಲನೆ ಸಿಕ್ಕಿತ್ತು. ಇದರ ನಡುವೆಯೇ ಈ ಅವಗಢ ಸಂಭವಿಸಿದೆ. ಚಾಮುಂಡಿ ಬೆಟ್ಟದ ಶಿವಾರ್ಚಕರಾಗಿದ್ದ ವಿ. ರಾಜು ಹಠಾತ್ ನಿಧನರಾಗಿದ್ದಾರೆ. ಶಿವಾರ್ಚಕ ವಿ.ರಾಜು ಮೃತಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ ತಾಯಿ ಚಾಮುಂಡಿ ದೇವಿ ದರ್ಶನ ಕೆಲ ಕಾಲ ನಿರ್ಬಂಧ ಮಾಡಲಾಗಿದೆ. ಸೋಮವಾರ ತಡರಾತ್ರಿ ಚಾಮುಂಡಿ ಬೆಟ್ಟದ ಶಿವಾರ್ಚಕ ವಿ,ರಾಜು ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಈ ಕಾರಣದಿಂದಾಗಿ ಇಂದು ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ತಾಯಿ ಚಾಮುಂಡಿ ದೇವಿ ದರ್ಶನ ಇರೋದಿಲ್ಲ. ಮಧ್ಯಾಹ್ನದವರೆಗೂ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಮಧ್ಯಾಹ್ನ ಸಂಸ್ಕಾರ ಮುಗಿದ ಬಳಿಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ವರದಿಯಾಗಿದೆ.
ಇದರಿಂದಾಗಿ ಮೈಸೂರು ದಸರಾ ಸಂಭ್ರಮದ ನಡುವೆಯೇ ಚಾಮುಂಡಿ ಬೆಟ್ಟದಲ್ಲಿ ಸೂತಕದ ಛಾಯೆ ಆವರಿಸಿದೆ. ಚಾಮುಂಡೇಶ್ವರಿ ದೇವಾಲಯದ ಶಿವಾರ್ಚಕರು ನಿಧನರಾದ ಹಿನ್ನೆಲೆಯಲ್ಲಿ ಭಕ್ತರಿಗೆ ದೇವಿ ದರ್ಶನವನ್ನು ತಾತ್ಕಾಲಿಕವಾಗಿ ನಿರ್ಬಂಧ ಮಾಡಲಾಗಿದೆ.
ಆಗಿದ್ದೇನು: ಹಲವು ದಿನಗಳಿಂದ ರಾಜು ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗಿದ್ದು, ಈ ಹಿಂದೆ ಅಪಘಾತವಾಗಿ ಆರೋಗ್ಯ ಸಮಸ್ಯೆ ಎದುರಾಗಿತ್ತು. ರಾತ್ರಿ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ.
ಬ್ರಹ್ಮಚಾರಿಣಿ ಅಲಂಕಾರ: ನವರಾತ್ರಿ ಎರಡನೇ ದಿನವಾದ ಇಂದು ತಾಯಿ ಚಾಮುಂಡೇಶ್ವರಿಯನ್ನು 'ಬ್ರಹ್ಮಚಾರಿಣಿ' ಅವತಾರದಲ್ಲಿ ಅಲಂಕರಿಸಲಾಗಿದೆ.
ಖಾಸಗಿ ದರ್ಬಾರ್: ಅರಮನೆಯಲ್ಲಿ ಎರಡನೇ ದಿನದ ಖಾಸಗಿ ದರ್ಬಾರ್ ನಡೆಯುತ್ತಿದ್ದು, ಪಟ್ಟದ ಆನೆ, ಕುದುರೆ ಮತ್ತು ಹಸುಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಲಾಯಿತು.
ಇಂದಿನ ಕಾರ್ಯಕ್ರಮಗಳು: ಬೆಳಿಗ್ಗೆ 8 ಗಂಟೆಗೆ ರಂಗೋಲಿ ಸ್ಪರ್ಧೆ, 10:30ಕ್ಕೆ ಪ್ರಭಾತ ಕವಿಗೋಷ್ಠಿ ಮತ್ತು 11 ಗಂಟೆಗೆ ಮಹಿಳಾ ದಸರಾ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಸಂಜೆ 7 ಗಂಟೆಗೆ ಯುವ ದಸರಾದಲ್ಲಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಲೈವ್ ಕಾನ್ಸರ್ಟ್ ಇರಲಿದೆ.