ಚಾಮುಂಡಿ ಬೆಟ್ಟಕ್ಕೆ ರೋಪ್‌ವೇ ಮಾಡಬೇಕೆಂಬ ಸರ್ಕಾರದ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಪರಿಸರವಾದಿಗಳ ಹೋರಾಟಕ್ಕೆ ರಾಜಮನೆತನದಿಂದಲೂ ಬೆಂಬಲ ವ್ಯಕ್ತವಾಗಿದೆ.
ವರದಿ: ಮಧು.ಎಂ.ಚಿನಕುರಳಿ, ಏಷ್ಯಾನೆಟ್ ಸುವರ್ಣ ನ್ಯೂಸ್
ಮೈಸೂರು (ಎ.10): ಮೈಸೂರಿಗೆ ಮುಕುಟ ಪ್ರಾಯವಾಗಿರೋದು ನಾಡ ದೇವತೆ ತಾಯಿ ಚಾಮುಂಡೇಶ್ವರಿ ನೆಲೆಸಿರುವ ಚಾಮುಂಡಿಬೆಟ್ಟ. ಹಸಿರು ಹೊದ್ದಂತಿರುವ ಚಾಮುಂಡಿ ಬೆಟ್ಟಕ್ಕೆ ರೋಪ್‌ವೇ ಮಾಡಬೇಕೆಂಬ ಸರ್ಕಾರದ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಪರಿಸರವಾದಿಗಳ ಹೋರಾಟಕ್ಕೆ ಈಗ ರಾಜಬಲ ಬಂದಿದೆ.
ಮೈಸೂರಿನ ಚಾಮುಂಡಿ ಬೆಟ್ಟ ದಕ್ಷಿಣ ಭಾರತದ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದು. ಕೇವಲ ಮೈಸೂರು ಹಾಗೂ ರಾಜ್ಯದ ವಿವಿಧ ಜಿಲ್ಲೆಗಳ ಭಕ್ತರು ಮಾತ್ರವಲ್ಲ ದೇಶ ವಿದೇಶಗಳಿಂದ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆಯಲು ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಾರೆ. ದೇವಸ್ಥಾನಕ್ಕೆ ತೆರಳಲು ಮೆಟ್ಟಿಲು ಹಾಗೂ ಬಸ್ ವ್ಯವಸ್ಥೆ ಇದೆ. ಖಾಸಗಿ ಬೈಕ್ ಕಾರು ಸೇರಿದಂತೆ ಎಲ್ಲಾ ವಾಹನಗಳ ಮೂಲಕ ಚಾಮುಂಡಿಬೆಟ್ಟಕ್ಕೆ ತೆರಳಬಹುದಾಗಿದೆ.
ZERODHA BMI CHALLENGE ಈ ಕಂಪನಿಯಲ್ಲಿ ಬೋನಸ್ ಬೇಕಾದರೆ ದೇಹದ ತೂಕ ಇಳಿಸಿಕೊಳ್ಳಬೇಕು!
ಇದರ ಮಧ್ಯೆ ಸರ್ಕಾರ ಚಾಮುಂಡಿ ಬೆಟ್ಟಕ್ಕೆ ರೋಪ್‌ವೇ ಮಾಡಲು ಮುಂದಾಗಿತ್ತು. ಇದಕ್ಕಾಗಿ ಚಾಮುಂಡಿ ಬೆಟ್ಟದ ಮರಗಳನ್ನು ಕಡಿಯಬೇಕು. ಇದು ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಹಲವು ಪ್ರತಿಭಟನೆಗಳು ಸಹಾ ನಡೆದಿದ್ದವು. ಇದೀಗ ಈ ಹೋರಾಟಕ್ಕೆ ರಾಜ ಬಲ ಬಂದಿದೆ.
ಚಾಮುಂಡಿ ಬೆಟ್ಟಕ್ಕೆ ರೋಪ್‌ವೇ ಅಗತ್ಯವಿಲ್ಲವೆಂದು ರಾಜಮನೆತನದ ಪ್ರಮೋದದೇವಿ ಒಡೆಯರ್ ಅಭಿಪ್ರಾಯ ಪಟ್ಟಿದ್ದಾರೆ. ಅಷ್ಟೇ ಅಲ್ಲ ಚಾಮುಂಡಿ ಬೆಟ್ಟ ಧಾರ್ಮಿಕ ಕೇಂದ್ರ ಅದನ್ನು ಪ್ರವಾಸಿ ತಾಣ ಮಾಡಬೇಡಿ ಅಂತಾ ಮನವಿ ಮಾಡಿದ್ದಾರೆ. ಇದು ಚಾಮುಂಡಿ ಬೆಟ್ಟಕ್ಕೆ ರೋಪ್‌ವೇ ಬೇಡ ಅನ್ನುತ್ತಿರುವ ಚಾಮುಂಡಿಬೆಟ್ಟ ಉಳಿಸಿ ಸಮಿತಿಗೆ ಆನೆಬಲ ಬಂದಂತಾಗಿದೆ.
Uttara Kannada ಪ್ರೇಮಿಗಳಿಬ್ಬರ ಜೀವನಕ್ಕೆ ಕಂಟಕವಾಯ್ತು ಕುಡಿತದ ಚಟ!
ಪ್ರಮೋದದೇವಿ ಒಡೆಯರ್ ಅವರ ಮಾತಿನಿಂದ ಹೋರಾಟಗಾರರಿಗೆ ಆನೆ ಬಲ ಬಂದಂತಾಗಿದೆ. ಹೋರಾಟವನ್ನು ಮತ್ತೊಂದು ಹೆಜ್ಜೆ ಮುಂದೆ ತೆಗೆದುಕೊಂಡು ಹೋಗಲು ನಿರ್ಧರಿಸಲಾಗಿದೆ. ಮೈಸೂರು ಜಿಲ್ಲೆಯಲ್ಲಿರುವ ವಿವಿಧ ಕ್ಷೇತ್ರದ ಗಣ್ಯರ ಮೂಲಕ ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆಯಲು ಚಾಮುಂಡಿಬೆಟ್ಟ ಉಳಿಸಿ ಸಮಿತಿ ನಿರ್ಧರಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಸಿಎಂ ಜೊತೆ ಮಾತನಾಡಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಚಾಮುಂಡಿ ಬೆಟ್ಟ ಉಳಿಸಿ ಸಮಿತಿ ದಿನೇದಿನೇ ತನ್ನ ಹೋರಾಟವನ್ನು ಚುರುಕುಗೊಳಿಸಿದೆ ಇತ್ತ ಸರ್ಕಾರ ಸಹ ಇದುವರೆಗೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಒಟ್ಟಾರೆ ನಾಡ ದೇವತೆ ತಾಯಿ ಚಾಮುಂಡೇಶ್ವರಿ ದೇವಸ್ಥಾನ ಇರುವ ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ವಿಚಾರ ಸರ್ಕಾರಕ್ಕೆ ಕಬ್ಬಿಣದ ಕಡಲೆಯಂತಾಗಿರೋದು ಸತ್ಯ.