ಡಿಕೆಶಿಗೆ ಜೈಕಾರ ಹಾಕುತ್ತಿದ್ದವಗೆ ತನ್ವೀರ್ ಸೇಠ್ ಕಪಾಳ ಮೋಕ್ಷ

By Kannadaprabha News  |  First Published Nov 8, 2019, 9:19 AM IST

ಮೈಸೂರು ರೈಲ್ವೆ ನಿಲ್ದಾಣದಲ್ಲಿ ಡಿ.ಕೆ. ಶಿವಕು ಮಾರ್ ರನ್ನು ಸ್ವಾಗತಿಸಲು ಕಾರ್ಯಕರ್ತರು ಆಗಮಿಸಿದ್ದರು. ಈ ವೇಳೆ ಡಿಕೆಶಿಗೆ ಜೈಕಾರ ಹಾಕುತ್ತಿದ್ದ ಕಾರ್ಯಕರ್ತಗೆ ಕಪಾಳಮೋಕ್ಷ ಮಾಡಲಾಗಿದೆ. 


ಮೈಸೂರು[ನ.08] : ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಸ್ವಾಗತಿಸಲು ಆಗಮಿಸಿದ್ದ ಕಾರ್ಯಕರ್ತನೊಬ್ಬನಿಗೆ ಶಾಸಕ ತನ್ವೀರ್ ಸೇಠ್ ಕಪಾಳಮೋಕ್ಷ ಮಾಡಿದ ಘಟನೆ ಗುರುವಾರ ನಡೆದಿದೆ. 

ರೈಲ್ವೆ ನಿಲ್ದಾಣದಲ್ಲಿ ಡಿ.ಕೆ. ಶಿವಕು ಮಾರ್ ರನ್ನು ಸ್ವಾಗತಿಸಲು ಕಾರ್ಯಕರ್ತರು ಆಗಮಿಸಿದ್ದರು. ಈ ವೇಳೆ ಡಿಕೆಶಿಗೆ ಜೈಕಾರ ಹಾಕುತ್ತಿದ್ದ ವೇಳೆ ಫೋನ್‌ನಲ್ಲಿ ಮಾತನಾಡುತ್ತಿದ್ದ ತನ್ವೀರ್ ಸೇಠ್, ಜೈಕಾರ ನಿಲ್ಲಿಸುವಂತೆ ಕೋರಿದರು. 

Tap to resize

Latest Videos

undefined

ಆದರೂ ಜೈಕಾರ ಕೂಗಿದ ಕಾರ್ಯಕರ್ತನಿಗೆ ಕಪಾಳ ಮೋಕ್ಷ ಮಾಡಿದರು. ಅಲ್ಲದೇ ರೈಲ್ವೆ ನಿಲ್ದಾಣದೊಳಗೆ ಜೈಕಾರ ಹಾಕದಂತೆಯೂ ಸೂಚಿಸಿದರು ಎನ್ನಲಾಗಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅಕ್ರಮ ಹಣ ಸಂಗ್ರಹಣೆ ಪ್ರಕರಣದಲ್ಲಿ ಜೈಲು ಸೇರಿದ್ದ ಡಿಕೆ ಶಿವಕುಮಾರ್ ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ತೆರಳಿದ್ದು, ಅಲ್ಲಿ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಮುಖಂಡರು ಡಿಕೆ ಶಿವಕುಮಾರ್ ಅವರನ್ನು ಅದ್ದೂರಿಯಾಗಿ ಸ್ವಾಗತಿಸಿದರು. 

click me!