
ಬೆಂಗಳೂರು (ಜ.9): ಹುಲಿ, ಕಾಂತಾರ, ದುನಿಯಾ, ಇಂತಿ ನಿನ್ನ ಪ್ರೀತಿಯ ಸೇರಿದಂತೆ ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದ್ದ ರಾಜ್ಯದ ಪ್ರಖ್ಯಾತ ಪೋಷಕ ನಟ ಹಾಗೂ ಬಹುಭಾಷಾ ತಾರೆ ಕಿಶೋರ್ ಕುಮಾರ್ ಅವರನ್ನು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ರಾಜ್ಯ ಸರ್ಕಾರ ನೇಮಿಸಿದೆ. ಮಾರ್ಚಚ್ 1 ರಿಂದ 8ರವರೆಗೆ ಬೆಂಗಳೂರಿನಲ್ಲಿ ಈ ಚಲನಚಿತ್ರೋತ್ಸವ ನಡೆಯಲಿದೆ. FIAPF ನಿಂದ ಗುರುತಿಸಲ್ಪಟ್ಟ BIFFes, ಕಾರ್ಯಾಗಾರಗಳು, ವಿಚಾರ ಸಂಕಿರಣಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜಾಗತಿಕ ಮತ್ತು ಭಾರತೀಯ ಸಿನಿಮಾ ಪರಂಪರೆಯನ್ನು ಸಂಭ್ರಮಿಸಲಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು"ಸರ್ವ ಜನಾಂಗದ ಶಾಂತಿಯ ತೋಟ" ಎಂಬ ಥೀಮ್ ಅನ್ನು ಚಿತ್ರೋತ್ಸವಕ್ಕೆ ಘೋಷಿಸಿದ್ದರು.
ಈ ಬಗ್ಗೆ ಮಾಹಿತಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, '16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿರುವ ಖ್ಯಾತ ನಟ ಕಿಶೋರ್ ಕುಮಾರ್. ಜಿ ಅವರಿಗೆ ಅಭಿನಂದನೆಗಳು. "ಸರ್ವ ಜನಾಂಗದ ಶಾಂತಿಯ ತೋಟ" ಎಂಬ ಘೋಷವಾಕ್ಯದಡಿ ಈ ಬಾರಿಯ ಚಲನಚಿತ್ರೋತ್ಸವವನ್ನು ಆಯೋಜಿಸಲಾಗುತ್ತಿದ್ದು, ಈ ಸಾಲುಗಳಿಗೆ ಬದ್ಧವಾಗಿರುವ ಕಿಶೋರ್ ಅವರ ಮುಂದಾಳತ್ವದಲ್ಲಿ ಬೆಂಗಳೂರು ಚಲನಚಿತ್ರೋತ್ಸವ ಅತ್ಯಂತ ಯಶಸ್ವಿಯಾಗಲಿದೆ ಎಂಬ ಪೂರ್ಣ ವಿಶ್ವಾಸವಿದೆ' ಎಂದು ಬರೆದುಕೊಂಡಿದ್ದಾರೆ.
ಮಂಕುಬೂದಿಯ ಭ್ರಮೆಯಲ್ಲಿ ಮಂತ್ರಾಕ್ಷತೆ ಹಂಚುತ್ತಿರುವವರೂ ಹಿಂದೂ ವಿರೋಧಿಗಳಲ್ಲವೇ? ಕಿಶೋರ್ ಪ್ರಶ್ನೆ
ಮಾರ್ಚ್ 1 ರಿಂದ 8, 2025 ರವರೆಗೆ ನಡೆಯಲಿರುವ 16 ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವು ಬೆಂಗಳೂರಿನ 13 ಚಿತ್ರಮಂದಿರಗಳಲ್ಲಿ ನಡೆಯಲಿದೆ. ಬೆಲ್ಜಿಯಂನಲ್ಲಿರುವ ಅಂತರರಾಷ್ಟ್ರೀಯ ಚಲನಚಿತ್ರ ನಿರ್ಮಾಪಕರ ಸಂಘಗಳ ಒಕ್ಕೂಟ (FIAPF) ದಿಂದ ಅಂತರರಾಷ್ಟ್ರೀಯವಾಗಿ ಗುರುತಿಸಲ್ಪಟ್ಟ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವು ಭಾರತ ಮತ್ತು ಪ್ರಪಂಚದಾದ್ಯಂತದ ಅತ್ಯುತ್ತಮ ಚಲನಚಿತ್ರಗಳನ್ನು ಪ್ರದರ್ಶಿಸುತ್ತದೆ. ಇದು ಕಾರ್ಯಾಗಾರಗಳು, ವಿಚಾರ ಸಂಕಿರಣಗಳು ಮತ್ತು ಸಿನೆಮಾಕ್ಕೆ ಮೀಸಲಾದ ವಿವಿಧ ಕಾರ್ಯಕ್ರಮಗಳನ್ನು ಸಹ ಒಳಗೊಂಡಿದೆ.
ಲಾಗಿನ್ ಐಡಿ ಕೊಟ್ಟಿದ್ದಕ್ಕೆ ಮಹುವಾ ಉಚ್ಛಾಟನೆಯಾದ್ರೆ, ದೇಶದ ಆಸ್ತಿ ಸ್ನೇಹಿತನಿಗೆ ಕೊಟ್ಟವನನ್ನು ಏನು ಮಾಡಬೇಕು?
ಸರ್ವ ಜನಾಂಗದ ಶಾಂತಿಯ ತೋಟ ಥೀಮ್‌ನಲ್ಲಿ ನಡೆಯಲಿದೆ ಫೆಸ್ಟಿವಲ್: ಆಯೋಜನಾ ಸಮಿತಿಯ ಅಧ್ಯಕ್ಷತೆ ವಹಿಸಿರುವ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಉತ್ಸವದ ದಿನಾಂಕಗಳು ಮತ್ತು ಥೀಮ್ "ಸರ್ವ ಜನಾಂಗದ ಶಾಂತಿಯ ತೋಟ"ವನ್ನು ಘೋಷಿಸಿದರು. ಪ್ರಸಿದ್ಧ ಚಲನಚಿತ್ರಗಳನ್ನು ಪ್ರದರ್ಶಿಸಲು ಮತ್ತು ಜಾಗತಿಕ ಚಲನಚಿತ್ರೋದ್ಯಮದ ಪ್ರಮುಖ ವ್ಯಕ್ತಿಗಳನ್ನು ಈ ಕಾರ್ಯಕ್ರಮಕ್ಕೆ ಕರೆತರುವ ಪ್ರಯತ್ನಗಳ ಬಗ್ಗೆ ಮಾತನಾಡಿದರು. ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವು ಅಂತರರಾಷ್ಟ್ರೀಯ ಮನ್ನಣೆಯನ್ನು ಗಳಿಸಿದೆ, ಬೆಂಗಳೂರನ್ನು ಸಿನಿಮಾ ಸಂಸ್ಕೃತಿಯ ಕೇಂದ್ರವಾಗಿ ಸ್ಥಾಪಿಸಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.