ಕರ್ನಾಟಕ ಚಲನಚಿತ್ರ ಅಕಾಡೆಮಿ ನೂತನ ಅಧ್ಯಕ್ಷರಾಗಿ ನಟ ಸುನೀಲ್ ಪುರಾಣಿಕ್!

By Suvarna News  |  First Published Jan 2, 2020, 10:12 AM IST

ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ನಟ ಹಾಗೂ ನಿರ್ದೇಶಕ ಸುನಿಲ್‌ ಪುರಾಣಿಕ್‌ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 
 


ಬೆಂಗಳೂರಿನ ಅರೇಹಳ್ಳಿ ನಿವಾಸಿ ಸುನಿಲ್‌ ಪುರಾಣಿಕ್‌ ಅವರನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರ ಹುದ್ದೆಗೆ ನೇಮಿಸಲಾಗಿದೆ. ಈ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಪಿ. ಮಣಿವಣ್ಣನ್‌ ಆದೇಶ ನೀಡಿದ್ದಾರೆ. 

ಫಾಲ್ಕೆ ಪ್ರಶಸ್ತಿಯನ್ನು ನಮ್ರತೆಯಿಂದ ಸ್ವೀಕರಿಸಿದ 'ದಾದಾ'- ವಿಡಿಯೋ

Tap to resize

Latest Videos

undefined

ಬಹುಭಾಷಾ ಕಲಾವಿದರಾಗಿ ಗುರುತಿಸಿಕೊಂಡಿರುವ ಸುನಿಲ್ ಇದುವರೆಗೂ 25ಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಗೂ 50ಕ್ಕೂ ಹೆಚ್ಚು  ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಇವರು ಕರ್ನಾಟಕ ರಾಜ್ಯೋತ್ಸವ ಹಾಗೂ ಕಂಪೇಗೌಡ ಪ್ರಶಸ್ತಿ ಪುರಸ್ಕೃತರು.  ಸುನಿಲ್ 'ಗುರುಕುಲ' ಎಂಬ ಕನ್ನಡ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಈ ಹಿಂದೆ ಅಧ್ಯಕ್ಷರಾಗಿ ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಕಾರ್ಯ ನಿರ್ವಹಿಸುತ್ತಿದ್ದರು.

click me!