Mahesh Babu: ಮಹೇಶ್ ಬಾಬುಗೆ ಶಾಕ್ ನೀಡಿದ ಇಡಿ, ಟಾಲಿವುಡ್ ಪ್ರಿನ್ಸ್ ಮಾಡಿದ ತಪ್ಪೇನು?

Published : Apr 22, 2025, 11:26 AM ISTUpdated : Apr 22, 2025, 12:02 PM IST
Mahesh Babu: ಮಹೇಶ್ ಬಾಬುಗೆ ಶಾಕ್ ನೀಡಿದ ಇಡಿ, ಟಾಲಿವುಡ್ ಪ್ರಿನ್ಸ್ ಮಾಡಿದ ತಪ್ಪೇನು?

ಸಾರಾಂಶ

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಮಹೇಶ್ ಬಾಬುಗೆ ಇಡಿ ನೋಟಿಸ್ ಜಾರಿ ಮಾಡಿದೆ. ಸುರಾನ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್‌ ಜಾಹೀರಾತಿಗೆ ₹3.4 ಕೋಟಿ ಪಡೆದಿದ್ದಕ್ಕೆ ಏ. 28 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಈ ಸಂಸ್ಥೆಗಳ ವಿರುದ್ಧ ವಂಚನೆ ಆರೋಪ ಕೇಳಿಬಂದಿದ್ದು, ಇಡಿ ದಾಳಿ ನಡೆಸಿತ್ತು.

ಟಾಲಿವುಡ್ ಸೂಪರ್ ಸ್ಟಾರ್ ಪ್ರಿನ್ಸ್ ಮಹೇಶ್ ಬಾಬು ಅವರಿಗೆ ಜಾರಿ ನಿರ್ದೇಶನಾಲಯ ಶಾಕ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.
ಮನಿಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್​ನ ಸ್ಟಾರ್ ನಟ ಮಹೇಶ್ ಬಾಬುಗೆ (Mahesh Babu) ಜಾರಿ ನಿರ್ದೇಶನಾಲಯ (ಇಡಿ) ನೋಟಿಸ್ ಕೊಟ್ಟಿದೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ, ಸುರಾನ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ ಪ್ರಕರಣದಲ್ಲಿ ಇದೇ 28ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ನಲ್ಲಿ ತಿಳಿಸಲಾಗಿದೆ. ಈ ಸಂಸ್ಥೆಯ ಪ್ರಚಾರಕ್ಕಾಗಿ ಮಹೇಶ್ ಬಾಬು ಅವರು 3.4 ಕೋಟಿ ರೂ.ಗಳನ್ನು ತೆಗೆದುಕೊಂಡಿದ್ದರು ಎನ್ನಲಾಗಿದೆ.

ಸದ್ಯ ಆಂಗ್ಲಪತ್ರಿಕೆಯೊಂದು ವರದಿ ಮಾಡಿರುವಂತೆ, 'ಸಾಯಿ ಸೂರ್ಯ ಡೆವಲಪರ್ಸ್ ಮತ್ತು ಸುರಾನಾ ಗ್ರೂಪ್ ಪ್ರಾರಂಭಿಸಿದ ರಿಯಲ್ ಎಸ್ಟೇಟ್ ಯೋಜನೆಗಳನ್ನು ಪ್ರಚಾರ ಮಾಡಲು ಮಹೇಶ್ ಅನುಮೋದನೆ ನೀಡಿದ್ದರು. ಮಹೇಶ್ ಬಾಬು ಈ ಜಾಹಿರಾತು ಒಪ್ಪಂದಕ್ಕಾಗಿ 5.9 ಕೋಟಿ ರೂ.ಗಳನ್ನು ಪಡೆದಿದ್ದು, ಈ ಪೈಕಿ ಚೆಕ್ ಮೂಲಕ 3.4 ಕೋಟಿ ರೂ.ಗಳು ಮತ್ತು ನಗದು ಮೂಲಕ 2.5 ಕೋಟಿ ರೂ.ಗಳನ್ನು ಪಡೆದಿದ್ದಾರೆ. ಈಗ, ನಗದು ಪಾವತಿ ಇಡಿ ಪರಿಶೀಲನೆಗೆ ಒಳಪಟ್ಟಿದೆ. ಈ ಕಾರಣಕ್ಕೆ ನಟ ಮಹೇಶ್ ಬಾಬುಗೆ ನೊಟೀಸ್ ನೀಡಿದ್ದು ವಿಚಾರಣೆ ಎದುರಿಸುವಂತಾಗಿದೆ. 

ರಾಜಮೌಳಿ-ಮಹೇಶ್ ಬಾಬು ಚಿತ್ರದಲ್ಲಿ ರೋಚಕ ಬೋಟ್ ಆಕ್ಷನ್? ಪ್ರಿಯಾಂಕಾ ಚೋಪ್ರಾ ಕಥೆ..?

ಏನಿದು ವಂಚನೆ ಆರೋಪ?
ಸುರಾನ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ ಸಂಸ್ಥೆಗಳ ವಿರುದ್ಧ ಇದೀಗ ವಂಚನೆ ಆರೋಪ ಕೇಳಿಬಂದಿದ್ದು, ತೆಲಂಗಾಣ ಪೊಲೀಸರು ಭಾಗ್ಯನಗರ ಪ್ರಾಪರ್ಟೀಸ್ ಲಿಮಿಟೆಡ್‌ನ ನರೇಂದ್ರ ಸುರಾನ ಮತ್ತು ಸಾಯಿ ಸೂರ್ಯ ಡೆವಲಪರ್ಸ್‌ನ ಸತೀಶ್ ಚಂದ್ರ ಗುಪ್ತಾ ವಿರುದ್ಧ ಹಲವು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಈ ಇಬ್ಬರು ಅನಧಿಕೃತ ಲೇಔಟ್‌ಗಳಲ್ಲಿ ಪ್ಲಾಟ್‌ಗಳನ್ನು ಮಾರಾಟ ಮಾಡುವ ಮೂಲಕ, ಒಂದೇ ಪ್ಲಾಟ್‌ಗಳನ್ನು ಹಲವು ಬಾರಿ ಮರುಮಾರಾಟ ಮಾಡುವ ಮೂಲಕ ಮತ್ತು ನೋಂದಣಿಗಳ ಬಗ್ಗೆ ಸುಳ್ಳು ಭರವಸೆಗಳನ್ನು ನೀಡುವ ಮೂಲಕ ಖರೀದಿದಾರರನ್ನು ವಂಚಿಸಿದ್ದಾರೆ ಎಂಬ ಆರೋಪವಿದೆ.

ಈಗ ಇಡಿ ಶೋಧ:
ಏಪ್ರಿಲ್ 16ರಂದು ಇಡಿ ಅಧಿಕಾರಿಗಳು ಹೈದರಾಬಾದ್‌ನಲ್ಲಿ ಶೋಧ ನಡೆಸಿದ್ದರು. ಸುರಾನ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ ಕಚೇರಿಗಳು ಹಾಗೂ ಈ ಕಂಪನಿಗಳ ಮುಖ್ಯಸ್ಥರ ಮನೆಗಳ ಮೇಲೆ ದಾಳಿ ನಡೆಸಿತ್ತು. ಇದಾದ ಬೆನ್ನಲ್ಲೇ ಇಡಿ ಆಧಿಕಾರಿಗಳು ಮಹೇಶ್ ಬಾಬುಗೆ ನೋಟಿಸ್ ಜಾರಿ ಮಾಡಿದ್ದು, ಏಪ್ರಿಲ್ 28ರ ಬೆಳಿಗ್ಗೆ 10:30ಕ್ಕೆ ಮಹೇಶ್ ಬಾಬು ಹೈದರಾಬಾದ್​ನಲ್ಲಿ ವಿಚಾರಣೆಗೆ ಹಾಜರಾಗಬೇಕಿದೆ.

ಹಿಂದಿ ಬಾಕ್ಸ್ ಆಫೀಸ್ ಗಳಿಕೆಯಲ್ಲೂ 'ಛಾವಾ' ಕಮಾಲ್ .. ರಶ್ಮಿಕಾ-ವಿಕ್ಕಿ ಜೋಡಿಗೆ ಜೈ!

ಇದು ಸಂಕಷ್ಟ ತಂದ ಜಾಹಿರಾತು:
ಮಹೇಶ್ ಬಾಬು ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಸಾಯಿಸೂರ್ಯ ಡೆವಲಪರ್ಸ್ ಜಾಹೀರಾತಿನಲ್ಲಿ ನಟಿಸಿದ್ದರು. ಇದೇ ಜಾಹಿರಾತು ವಿಚಾರವಾಗಿ ಇದೀಗ ಮಹೇಶ್ ಬಾಬು ಅವರಿಗೆ ಸಂಕಷ್ಟ ಎದುರಾಗಿದೆ. ಈ ಕಾರಣಕ್ಕೆ ನಟ ಮಹೇಶ್ ಬಾಬು ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. 
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

'ಬಂದವ್ರಿಗೆ ದಾರಿಕೊಡಿ, ಹೋಗೋರಿಗೆ ದಾರಿಬಿಡಿ..'ಜೀ ಕನ್ನಡ ವೇದಿಕೆಯಲ್ಲಿ ಹೇಳಿದ್ದ ಮಾತನ್ನೇ ಬಿಗ್‌ಬಾಸ್‌ನಲ್ಲಿ ಮರೆತ್ರಾ ಗಿಲ್ಲಿ ನಟ!
'ನನಗೆ ಡೈವೋರ್ಸ್‌ ಸಿಗೋದು ಪಕ್ಕಾ..' ನ್ಯಾಷನಲ್‌ ಕ್ರಶ್‌ ಗಿರಿಜಾ ಓಕ್‌ ಫೋಟೋಗೆ ಫ್ಯಾನ್ಸ್ ರಿಯಾಕ್ಷನ್‌