ಅನಿರುದ್ಧ್ ಮ್ಯೂಸಿಕ್ ಹಬ್ಬ, 60 ನಿಮಿಷದಲ್ಲೇ ಟಿಕೆಟ್ ಸೋಲ್ಡ್ ಔಟ್!

Published : Apr 12, 2025, 01:51 PM ISTUpdated : Apr 12, 2025, 02:13 PM IST
ಅನಿರುದ್ಧ್ ಮ್ಯೂಸಿಕ್ ಹಬ್ಬ, 60 ನಿಮಿಷದಲ್ಲೇ ಟಿಕೆಟ್ ಸೋಲ್ಡ್ ಔಟ್!

ಸಾರಾಂಶ

ಅನಿರುದ್ಧ್ ರವಿಚಂದರ್ ಅವರ ಸಂಗೀತ ಸಂಜೆಗೆ ಕಾದಿದ್ದ ಸಿಲಿಕಾನ್ ಸಿಟಿಯ ಮಂದಿ, ವೇಗವಾಗಿ ಟಿಕೆಟ್‌ಗಳನ್ನು ಖರೀದಿಸಿದ್ದಾರೆ. ಬೀಸ್ಟ್ ಮ್ಯೂಸಿಕ್ ಮೂಡ್ ಗೆ ಸಿಲಿಕಾನ್ ಸಿಟಿ ಮಂದಿ ಯಾವ ರೀತಿ ಕುತೂಹಲಕಾರಿಯಾಗಿ ಕಾಯುತ್ತಿದ್ದಾರೆ..

60 ನಿಮಿಷ 16 ಸಾವಿರ ಟಿಕೆಟ್ ಸೋಲ್ಡ್ ಔಟ್…ಮೇ.31ಕ್ಕೆ ಕೆವಿಎನ್ ಪ್ರಸ್ತುತ ಬೆಂಗಳೂರಿನಲ್ಲಿ ಅನಿರುದ್ಧ್ ರವಿಚಂದರ್ ಸಂಗೀತ ಸಂಜೆ!
ಕೆವಿಎನ್ ಪ್ರಸ್ತುತ ಬೆಂಗಳೂರಿನಲ್ಲಿ ಅನಿರುದ್ಧ್ ಮ್ಯೂಸಿಕ್ ಹಬ್ಬ..60 ನಿಮಿಷದಲ್ಲೇ ಟಿಕೆಟ್ ಸೋಲ್ಡ್ ಔಟ್!
ಭಾರತದಲ್ಲೇ ಮೊದಲ ಬಾರಿಗೆ ಅನಿರುದ್ಧ್ ಹುಕುಂ ಟೂರ್, ಬೆಂಗಳೂರಿನಲ್ಲಿ ಜನನಾಯಗನ್ ಮ್ಯೂಸಿಕ್ ಡೈರೆಕ್ಟರ್ ಕನ್ಸರ್ಟ್..

ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರಸ್ತುತಪಡಿಸುತ್ತಿರುವ ಅನಿರುದ್ಧ್ ರವಿಚಂದರ್ ಮ್ಯೂಸಿಕ್ ಹಬ್ಬ ಬೆಂಗಳೂರಿನಲ್ಲಿ ಮೇ 31ರಂದು ನಡೆಯಲಿದೆ. ದುಬೈ, ಆಸ್ಟ್ರೇಲಿಯಾ. ಅಮೆರಿಕ, ಪ್ಯಾರಿಸ್, ಸ್ವಿಟ್ಜರ್ಲ್ಯಾಂಡ್ ಮುಂತಾದ ದೇಶಗಳಲ್ಲಿ ಅತ್ಯಂತ ಯಶಸ್ವಿಯಾಗಿ ನಡೆದ ಇದೇ ಹುಕುಂ ಟೂರ್ ಮೊತ್ತ ಮೊದಲ ಬಾರಿಗೆ ಭಾರತಕ್ಕೆ ಬರುತ್ತಿದೆ. ಅದೂ ಕೂಡ ನಮ್ಮ ಬೆಂಗಳೂರಿಗೆ. ಅನಿರುದ್ಧ್ ಮೊದಲ ಬಾರಿಗೆ ಸಿಲಿಕಾನ್ ಸಿಟಿಯಲ್ಲಿ ಮ್ಯೂಸಿಕ್ ಜಾತ್ರೆ ಮಾಡಲು ರೆಡಿಯಾಗಿದ್ದಾರೆ.

ಡಾ ರಾಜ್‌ಕುಮಾರ್ 19ನೇ ಪುಣ್ಯ ತಿಥಿ, ಕುಟುಂಬಸ್ಥರಿಂದ ಸಮಾಧಿಗೆ ಪೂಜೆ

ಮೇ 31ರಂದು ಟೆರಾಫಾರ್ಮ್ ಅರೇನಾದಲ್ಲಿ ನಡೆಯುವ ಮ್ಯೂಸಿಕ್ ಕನ್ಸರ್ಟ್ ಈಗಾಗಲೇ ಬೃಹತ್ ದಾಖಲೆ ಕ್ರಿಯೇಟ್ ಮಾಡಿದೆ. ಬೆಂಗಳೂರಿನಲ್ಲಿ ನಡೆಯಲಿರುವ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಮ್ಯೂಸಿಕ್ ಕನ್ಸರ್ಟ್ ನ್ನು ಕೆವಿಎನ್ ಸಂಸ್ಥೆ ಪ್ರಸ್ತುಪಡಿಸಿದೆ. ವಿಶೇಷ ಅಂದರೆ ʼಅನಿರುದ್ಧ್ ಅವರ ಹುಕುಂ ಟೂರ್ ಬೆಂಗಳೂರು ಅವತರಣಿಕೆಯ 16 ಸಾವಿರಕ್ಕೂ ಅಧಿಕ ಟಿಕೆಟ್‌ಗಳು ಕೇವಲ 60 ನಿಮಿಷದಲ್ಲೇ ಮಾರಾಟವಾಗಿದೆʼ ಅಂತ ಕೆವಿಎನ್ ಸಂಸ್ಥೆ ನಿರ್ಮಾತೃ ವೆಂಕಟ ಕೆ ನಾರಾಯಣ ಖಚಿತಪಡಿಸಿದ್ದಾರೆ.

ಅನಿರುದ್ಧ್ ರವಿಚಂದರ್ ಅವರ ಸಂಗೀತ ಸಂಜೆಗೆ ಕಾದಿದ್ದ ಸಿಲಿಕಾನ್ ಸಿಟಿಯ ಮಂದಿ, ವೇಗವಾಗಿ ಟಿಕೆಟ್‌ಗಳನ್ನು ಖರೀದಿಸಿದ್ದಾರೆ. ಬೀಸ್ಟ್ ಮ್ಯೂಸಿಕ್ ಮೂಡ್ ಗೆ ಸಿಲಿಕಾನ್ ಸಿಟಿ ಮಂದಿ ಯಾವ ರೀತಿ ಕುತೂಹಲಕಾರಿಯಾಗಿ ಕಾಯುತ್ತಿದ್ದಾರೆ ಎಂಬುವುದು ಗೊತ್ತಾಗುತ್ತಿದೆ. ಮನೋರಂಜನೆ ವಿಷಯವಾಗಿ ಮತ್ತೊಂದಿಷ್ಟು ಸರ್ಪ್ರೈಸ್ಗಳು ಕೆವಿಎನ್ ಸಂಸ್ಥೆಯ ಕಡೆಯಿಂದ ಬರುವ ನಿರೀಕ್ಷೆಗಳಿವೆ.  ಇನ್ನು ಹೆಚ್ಚಿನ ಮಾಹಿತಿಗಳಿಗಾಗಿ ಕೆವಿಎನ್ ಪ್ರೊಡಕ್ಷನ್ಸ್ ಸಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಿ.

ಅಪ್ಪಾಜಿ ಜೊತೆ ಮನೆಯವ್ರೆಲ್ಲಾ ಒಂದೇ ರೂಮಿನಲ್ಲಿ ಮಲಗ್ತಿದ್ವಿ: ರಾಘವೇಂದ್ರ ರಾಜ್‌ಕುಮಾರ್

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

'ಹೊಟ್ಟೆಗೆ ಹಿಟ್ಟಿಲ್ಲದೇ ಬದುಕಬಲ್ಲೆ, ಆದ್ರೆ 'ಅದಿಲ್ಲದೇ' ಬದುಕಲಾರೆ: ಮದುವೆ ಬೆನ್ನಲ್ಲೇ ಸಮಂತಾ ಹಳೆಯ ಹೇಳಿಕೆ ವೈರಲ್!
ಬಿಗ್ ಬಜೆಟ್ '45' ಅದ್ದೂರಿ ಇವೆಂಟ್, ಕರ್ನಾಟಕದ ಏಳು ಜಿಲ್ಲೆಗಳ ಚಿತ್ರಮಂದಿರದಲ್ಲಿ ಇವೆಂಟ್ ನೇರ ಪ್ರಸಾರ!