
ದೇಶಾದ್ಯಂತ ಕಾತರ ಮೂಡಿಸಿರೋ ಸಲ್ಮಾನ್ ಖಾನ್ ಹಾಗೂ ಸುದೀಪ್ ಅಭಿನಯದ ಬಹುನಿರೀಕ್ಷಿತ ದಬಾಂಗ್-3 ಸಿನಿಮಾ ಇದೇ ಡಿಸೆಂಬರ್ 20ಕ್ಕೆ ತೆರೆಗೆ ಅಪ್ಪಳಿಸಲಿದೆ.
ಇದ್ರಿಂದ ಸಿನಿಮಾ ಪ್ರಚಾರದ ಅಬ್ಬರವೂ ಸಹ ಜೋರಾಗಿದೆ. ಬಾಲಿವುಡ್‍ನ ಸೂಪರ್ ಸ್ಟಾರ್ ಸಲ್ಲು ದಬಾಂಗ್ 3 ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ.
'ದಬಾಂಗ್ -3' ಬಿಟ್ಟು ಕ್ರಿಕೆಟ್ ಸ್ಟಾರ್‌ಗಳ ಕಾಣಿಸಿಕೊಂಡ ಸುದೀಪ್-ಸಲ್ಲುಭಾಯ್!
ಅದ್ರಂತೆ ಇಂದು [ಮಂಗಳವಾರ] ಬೆಂಗಳೂರಿನಲ್ಲೂ ಸಹ ಸಲ್ಲು ಭಾಯ್ ದಬಾಂಗ್-3 ಸಿನಿಮಾ ಪ್ರಚಾರ ಮಾಡಿದ್ರು. ಈ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಹಾಗೂ ಸಲ್ಮಾನ್ ಖಾನ್ ಭೇಟಿಯಾದರು.
ಈ ಬಗ್ಗೆ ಬಿಜೆಪಿಯ ಯುವ ನಾಯಕ ಬಿ.ವೈ. ವಿಜಯೇಂದ್ರ ತಮ್ಮ ಫೇಸ್ ಬುಕ್ ಹಾಗೂ ಟ್ವಿಟ್ಟರ್ ನಲ್ಲಿ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ.
ಇನ್ನು ದಬಾಂಗ್ 3ನಲ್ಲಿ ಕಿಚ್ಚ ಸುದೀಪ್ ಖಡಕ್ ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಲ್ಲು ಕರ್ನಾಟಕದಲ್ಲೂ ಸಹ ಸಿನಿಮಾ ಪ್ರಚಾರ ಮಾಡಿದ್ರು. ಈ ಸಿನಿಮಾ ಕನ್ನಡಕ್ಕೂ ಡಬ್ ಆಗಿದ್ದು, ಸಲ್ಮಾನ್ ಖಾನ್ ಕನ್ನಡದಲ್ಲೇ ಹೇಗೆಲ್ಲಾ ಡೈಲಾಗ್ ಹೊಡೆದಿದ್ದಾರೆ ಎನ್ನುವುದು ಕನ್ನಡಿಗರಲ್ಲಿ ಭಾರೀ ಕುತೂಹಲ ಮೂಡಿಸಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.