'ಕಪಟ ನಾಟಕ ಸೂತ್ರಧಾರಿ'ಯ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಿದ ಡಾಲಿ ಧನಂಜಯ್!

Published : Apr 07, 2025, 05:10 PM ISTUpdated : Apr 07, 2025, 05:11 PM IST
'ಕಪಟ ನಾಟಕ ಸೂತ್ರಧಾರಿ'ಯ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಿದ ಡಾಲಿ ಧನಂಜಯ್!

ಸಾರಾಂಶ

ಬಹುಪಾಲು ಚಿತ್ರೀಕರಣ ಒಂದು ಸಾವಿರ ವರ್ಷಗಳಷ್ಟು ಪುರಾತನ ಇತಿಹಾಸ ಹೊಂದಿರುವ ಉತ್ತರಕರ್ನಾಟಕದ ದೇವಸ್ಥಾನದ ಆವರಣದಲ್ಲಿ ನಡೆದಿದೆ. ಐವತೈದು ದಿನಗಳ ಕಾಲ ಅವ್ಯಾಹತವಾಗಿ ಚಿತ್ರೀಕರಣ..

ಮತ್ತೊಂದು ಹೊಸಬರ ತಂಡ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ತಯಾರಾಗಿದೆ. ನವ ಪ್ರತಿಭೆಗಳು ಸೇರಿ ರೂಪಿಸಿರುವ `ಕಪಟ ನಾಟಕ ಸೂತ್ರಧಾರಿ' ಚಿತ್ರ ಚಿತ್ರೀಕರಣವನ್ನು ಸಂಪೂರ್ಣವಾಗಿ ಮುಗಿಸಿಕೊಂಡು ಪೋಸ್ಟ್ ಪ್ರೊಡಕ್ಷನ್ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಧೀರಜ್ ಎಂ.ವಿ ನಿರ್ದೇಶನ ಹಾಗೂ ಅಭಿರಾಮ ಅರ್ಜುನ ಬ್ಯುಸಿನೆಸ್ ಹೆಡ್ ಆಗಿ ಪಾದಾರ್ಪಣೆ ಮಾಡುತ್ತಿರುವ ಈ ಚೊಚ್ಚಲ ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನ್ನು ಡಾಲಿ ಧನಂಜಯ, ಸಂಗೀತಾ ಭಟ್, ನಿರ್ದೇಶಕರಾದ ಮಂಸೋರೆ, ಕೆ.ಎಂ ಚೈತನ್ಯ ಮುಂತಾದವರು ಸಾಮಾಜಿಕ ಜಾಲತಾಣದ ಮೂಲಕ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. 

ಈ ಪೋಸ್ಟರ್ ಮೂಲಕವೇ ಒಟ್ಟಾರೆ ಕಥನದ ಬಗ್ಗೆ ಕುತೂಹಲ ಮೂಡಿಕೊಳ್ಳುತ್ತಲೇ, ಮತ್ತೊಂದಷ್ಟು ವಿಚಾರಗಳೂ ಜಾಹೀರಾಗಿವೆ. 'ಕಪಟ ನಾಟಕ ಸೂತ್ರಧಾರಿ' ಈ ಸಮಾಜಕ್ಕೆ ಕನ್ನಡಿ ಹಿಡಿದಂಥಾ ಕಥೆಯನ್ನೊಳಗೊಂಡಿರುವ ಚಿತ್ರ. ಇಲ್ಲಿ ಹಾಸುಹೊಕ್ಕಾಗಿರುವ ತಾರತಮ್ಯ, ಶೋಷಣೆಗಳ ಕಥಾ ಎಳೆಯನ್ನೊಳಗೊಂಡಿರುವ ಈ ಸಿನಿಮಾ ಸಾಮಾಜಿಕ, ರಾಜಕೀಯ ವಿಡಂಬನಾತ್ಮಕ ಡ್ರಾಮಾ ಜಾನರಿಗೆ ಒಗ್ಗಬಹುದಾದ ಸಿನಿಮಾ. ಇದರ ಚಿತ್ರೀಕರಣ ನಡೆದ ಸ್ಥಳ ಮತ್ತು ರೀತಿಯ ವಿವರ ನೋಡಿದರೆ, ಕಥೆಯ ಬಗೆಗೊಂದು ಕುತೂಹಲ ಮೂಡಿಕೊಳ್ಳುತ್ತೆ. 

ಸೌತ್ ಸಿನಿಮಾರಂಗಕ್ಕೆ ಮಂಡಿಯೂರಿದ್ದೇಕೆ ಬಾಲಿವುಡ್? ಹಿಂದಿ ಸಿನಿಮಾರಂಗ ಎಡವಿದ್ದು ಎಲ್ಲಿ?

ಇದರ ಬಹುಪಾಲು ಚಿತ್ರೀಕರಣ ಒಂದು ಸಾವಿರ ವರ್ಷಗಳಷ್ಟು ಪುರಾತನ ಇತಿಹಾಸ ಹೊಂದಿರುವ ಉತ್ತರಕರ್ನಾಟಕದ ದೇವಸ್ಥಾನದ ಆವರಣದಲ್ಲಿ ನಡೆದಿದೆ. ಐವತೈದು ದಿನಗಳ ಕಾಲ ಅವ್ಯಾಹತವಾಗಿ ಚಿತ್ರೀಕರಣ ಮಾಡಲಾಗಿದೆ. ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಶುರುವಾಗಿದ್ದ ಈ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಅಂತಿಮ ಹಂತದಲ್ಲಿದೆ.

ವಿಶೇಷವೆಂದರೆ, ನೂರಕ್ಕೂ ಹೆಚ್ಚು ಮಂದಿ ಕಲಾವಿದರು ಈ ಚಿತ್ರದ ತಾರಾಗಣದಲ್ಲಿದ್ದಾರೆ. ಒಂದಷ್ಟು ಹೂಡಿಕೆದಾರರು ಸೇರಿ ವಿ ಎಸ್ ಕೆ ಸಿನಿಮಾಸ್ ಬ್ಯಾನರಿನಡಿಯಲ್ಲಿ ಸದರಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಮೂಲತಃ ರಂಗಭೂಮಿ ಕಲಾವಿದರಾದ ಅಭಿರಾಮ ಅರ್ಜುನ ಈ ಸಿನಿಮಾದ ಬ್ಯುಸಿನೆಸ್ ಹೆಡ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಭಿನ್ನ ಧಾಟಿಯ, ಚೆಂದದ ಸಿನಿಮಾಗಳನ್ನು ರೂಪಿಸುವ, ಪ್ರತಿಭಾನ್ವಿತ ತಂಡಕ್ಕೆ ಸಾಥ್ ಕೊಡುವ ಮಹತ್ವಾಕಾಂಕ್ಷೆಯೊಂದಿಗೇ ಅಭಿರಾಮ ಚಿತ್ರರಂಗಕ್ಕೆ ಅಡಿಯಿರಿಸಿದ್ದಾರೆ. 

Clarification: ರಿಷಬ್ ಶೆಟ್ಟಿ 'ಸಂಸಾರ'ದ ಬಗ್ಗೆ ಸ್ಪಷ್ಟೀಕರಣ, 'ಎನ್ನ ನಂಬಿ ಕುಟುಂಬ ಸಂಸಾರ' ಅಂದ್ರೇನು?

ಮೂಲತಃ ಇಂಜಿನಿಯರ್ ಆಗಿರುವ ಧೀರಜ್ ಎಂ.ವಿ ಈ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಸುನಿಲ್ ಕುಮಾರ್ ದೇಸಾಯಿ, ಮಠ ಗುರುಪ್ರಸಾದ್ ಮುಂತಾದವರ ಗರಡಿಯಲ್ಲಿ ಕಾರ್ಯನಿರ್ವಹಿಸಿರುವ ಧೀರಜ್ ಈಗಾಗಲೇ ಒಂದು ಕಿರುಚಿತ್ರಗಳನ್ನೂ ನಿರ್ದೇಶನ ಮಾಡಿದ ಅನುಭವ ಹೊಂದಿದ್ದಾರೆ. ವೀರೇಶ್ ಎನ್ ಟಿ ಎ ಛಾಯಾಗ್ರಹಣ, ಪ್ರಸನ್ನ ಕುಮಾರ್ ಎಂ.ಎಸ್ ಸಂಗೀತ ನಿರ್ದೇಶನ ಹಾಗೂ ಮುರಳಿ ಶಂಕರ್ ಸಹ ನಿರ್ದೇಶನವಿರುವ ಈ ಚಿತ್ರದಲ್ಲಿ ಹರೀಶ್ ರಂಗರಾವ್ ಕ್ರಿಯೇಟಿವ್ ಹೆಡ್ ಆಗಿ, ವರುಣ್ ಗುರುರಾಜ್ ಪ್ರೊಡಕ್ಷನ್ ಹೆಡ್ ಆಗಿ ಕಾರ್ಯನಿರ್ವಹಿಸಿದ್ದಾರೆ. ತಾರಾಗಣದ ಬಗೆಗಿನ ವಿವರಗಳನ್ನು ಚಿತ್ರತಂಡ ಶೀಘ್ರದಲ್ಲೇ ಹಂಚಿಕೊಳ್ಳಲಿದೆ.


 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ನನ್ನ ಶಿಷ್ಯನೆಂದು ಬಿಗ್ ಬಾಸ್ ಮನೆಯೊಳಗೆ ಯಾರನ್ನೂ ಕಳಿಸಿಲ್ಲ! ಕಿಚ್ಚ ಸುದೀಪ್ ಈ ಮಾತು ಹೇಳಿದ್ಯಾರಿಗೆ ಗೊತ್ತಾಯ್ತ?
ಕೊನೆಗೂ ಅದಿತಿ ರಾವ್ ಹೈದರಿ ಗುಟ್ಟು ರಟ್ಟಾಯ್ತು.. ಎಷ್ಟು ದಿನ ಅಂತ ಮುಚ್ಚಿಡೋಕಾಗುತ್ತೆ ಹೇಳಿ..!?