
ಚೆನ್ನೈ: ಆಸ್ಕರ್ ಪ್ರಶಸ್ತಿ ಪುರಸ್ಕೃತ ದಿ ಎಲಿಫ್ಯಾಂಟ್ ವಿಸ್ಪರ್ಸ್ ಸಾಕ್ಷ್ಯಚಿತ್ರಕ್ಕೆ ಪ್ರೇರಣೆಯಾಗಿದ್ದ ಬೆಳ್ಳಿ ಅವರನ್ನು ಮೊದಲ ಸರ್ಕಾರಿ ಮಹಿಳಾ ಕಾವಡಿಯಾಗಿ ತಮಿಳುನಾಡು ಸರ್ಕಾರ ನೇಮಕ ಮಾಡಿದೆ. ಸರ್ಕಾರ ತನ್ನ ಹೇಳಿಕೆಯಲ್ಲಿ,ಬೆಳ್ಳಿ ಅವರು ಆನೆ ಮರಿಗಳನ್ನು ಸಾಕಿ-ಸಲಹಿದ ಪರಿಗೆ ಅವರನ್ನು ರಾಜ್ಯದ ಮೊದಲ ಮಹಿಳಾ ಕಾವಡಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದೆ. ಹೀಗಾಗಿ ತಾತ್ಕಾಲಿಕ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಬೆಳ್ಳಿ, ಈಗ ರಾಜ್ಯದ ಮೊದಲ ಸರ್ಕಾರಿ ಮಹಿಳಾ ಕಾವಡಿಯಾಗಿ ನೇಮಕಗೊಂಡಿದ್ದಾರೆ. ಇವರು ನೀಲಗಿರಿ ಜಿಲ್ಲೆಯಲ್ಲಿರುವ ಮುದುಮಲೈ ಹುಲಿ ಅಭಯಾರಣ್ಯದಲ್ಲಿರುವ ತೆಪ್ಪಕಾಡು ಆನೆ ಬಿಡಾರದಲ್ಲಿ ಕೆಲಸ ನಿರ್ವಹಿಸಲಿದ್ದಾರೆ. ಇವರಿಗೆ ಮುಖ್ಯಮಂತ್ರಿ ಸ್ಟಾಲಿನ್ ನೇಮಕ ಪತ್ರ ವಿತರಣೆ ಮಾಡಿದ್ದಾರೆ.
ದಿ ಎಲೆಫೆಂಟ್ ವಿಸ್ಪರ್ಸ್ ಬಗ್ಗೆ
ಮುದುಮಲೈ ಹುಲಿ ಸಂರಕ್ಷಿತ ಪ್ರದೇಶದ ಆನೆ ಸಾಕಾಣಿಕೆ ಶಿಬಿರದಲ್ಲಿ ಬೊಮ್ಮನ್ ಮತ್ತು ಬೆಳ್ಳಿ ದಂಪತಿ ಕೆಲಸ ಮಾಡುತ್ತಿದ್ದಾರೆ. 2017ರಲ್ಲಿ ಇವರು ತೆಂಕಣಿಕೊಟ್ಟೈ ಪ್ರದೇಶದಲ್ಲಿ ತಾಯಿಯಿಂದ ಬೇರ್ಪಟ್ಟ ಗಂಡು ಆನೆ ಮರಿಯನ್ನು ಕರೆತಂದು ಸಾಕಿದರು. ಬಳಿಕ 2018ರಲ್ಲಿ ಸತ್ಯಮಂಗಲಂ ಪ್ರದೇಶದಲ್ಲಿ ತಾಯಿಯಿಂದ ಬೇರ್ಪಟ್ಟ ಮತ್ತೊಂದು ಆನೆ ಮರಿಯನ್ನು ಇವರು ಮುದುಮಲೈ ಶಿಬಿರಕ್ಕೆ ಕರೆತಂದು ಸಾಕಿದರು. ಮುದ್ದಾದ ಮರಿಗಳಿಗೆ ರಘು ಮತ್ತು ಬೊಮ್ಮಿ ಎಂದು ಹೆಸರಿಟ್ಟಿದ್ದರು. ಎರಡು ಪುಟ್ಟ ಮರಿಗಳನ್ನು ಬೊಮ್ಮನ್ ಮತ್ತು ಬೆಳ್ಳಿ ದಂಪತಿ ತಮ್ಮ ಮಕ್ಕಳಂತೆ ಮುದ್ದಾಗಿ ಬೆಳೆಸಿದರು. ಇವರ ಸ್ಫೂರ್ತಿದಾಯಕ ಜೀವನವನ್ನು ಸೆರೆ ಹಿಡಿದು ಆಸ್ಕರ್ ಅಂಗಳಕ್ಕೆ ಕೊಂಡೊಯ್ದಿದ್ದು ನಿರ್ದೇಶಕಿ ಕಾರ್ತಿಕಿ ಗೊನ್ಸಾಲ್ವಿಸ್.
ಆಸ್ಕರ್ ವಿಜೇತ 'ಎಲಿಫೆಂಟ್ ವಿಸ್ಪರರ್ಸ್' ಬೊಮ್ಮನ್-ಬೆಳ್ಳಿ ದಂಪತಿ ಭೇಟಿಯಾದ ಎಂ ಎಸ್ ಧೋನಿ
ಆಸ್ಕರ್ ಮುಡಿಗೇರಿಸಿಕೊಂಡ ಬಳಿಕ ನಿರ್ದೇಶಕಿ ಕಾರ್ತಿಕಿ ಗೊನ್ಸಾಲ್ವಿಸ್ ಮತ್ತು ನಿರ್ಮಾಪಕಿ ಗುನೀತ್ ಮೊಂಗಾ ಎಲಿಫೆಂಟ್ ವಿಸ್ಪರರ್ಸ್ ನ ರಿಯಲ್ ಹೀರೋಗಳಾದ ಬೊಮ್ಮನ್ ಮತ್ತು ಬೆಳ್ಳಿ ದಂಪತಿ ಕೈಗೆ ಪ್ರಶಸ್ತಿ ಇಟ್ಟು ಸಂಭ್ರಮಿಸಿದ್ರು. ಪ್ರತಿಷ್ಠಿತ ಪ್ರಶಸ್ತಿಯನ್ನು ಹಿಡಿದು ಬೊಮ್ಮನ್ ಮತ್ತು ಬೆಳ್ಳಿ ದಂಪತಿ ಸಂತೋಷ ವ್ಯಕ್ತಪಡಿಸಿದ್ದರು.
ಆನೆಯ ತಾಳ್ಮೆ ಪರೀಕ್ಷಿಸಿದ ಯುವತಿಯ ಎತ್ತಿ ಎಸೆದ ಗಜೇಂದ್ರ.. ವೈರಲ್ ವೀಡಿಯೋ
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.