ಆಸ್ಪತ್ರೆಯಲ್ಲಿರುವ ವಿಜಯಲಕ್ಷ್ಮಿಗೆ ನಟನಿಂದ ಲೈಂಗಿಕ ಕಿರುಕುಳ

Published : Mar 10, 2019, 05:28 PM IST
ಆಸ್ಪತ್ರೆಯಲ್ಲಿರುವ ವಿಜಯಲಕ್ಷ್ಮಿಗೆ ನಟನಿಂದ ಲೈಂಗಿಕ ಕಿರುಕುಳ

ಸಾರಾಂಶ

ಅನಾರೋಗ್ಯಕ್ಕೆ ತುತ್ತಾಗಿರುವ ನಟಿ ವಿಜಯಲಕ್ಷ್ಮೀ ಅವರಿಗೆ  ಆರ್ಥಿಕ ನೆರವು ನೀಡುವ ನೆಪದಲ್ಲಿ ನಟನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ.

ಬೆಂಗಳೂರು [ಮಾ. 10] ಇದು ನಿಜಕ್ಕೂ  ಆಘಾತಕಾರಿ ಸುದ್ದಿ. ನಟಿ ವಿಜಯಲಕ್ಷ್ಮೀಗೆ  ಸ್ಯಾಂಡಲ್ ವುಡ್ ನಟನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ.  ಹಣಕಾಸಿನ ನೆರವು ನೀಡುವ ನೆಪದಲ್ಲಿ ಕಿರುಕುಳ ನೀಡುರುವ ಆರೋಪದ ಮೇಲೆ ದೂರು ದಾಖಲಾಗಿದೆ.

ನಟ ರವಿ ಪ್ರಕಾಶ್ ಮೇಲೆ ಆರೋಪ ಬಂದಿದೆ.  ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ರವಿ ಪ್ರಕಾಶ್ ವಿರುದ್ಧ ದೂರು ದಾಖಲಾಗಿದೆ.  ಮಲ್ಯ ಆಸ್ಪತ್ರೆಯಲ್ಲಿ ವಿಜಯಲಕ್ಷ್ಮಿ ಚಿಕಿತ್ಸೆ ಪಡೆಯುತ್ತಿದ್ದ  ವೇಳೆ ಒಂದು ಲಕ್ಷ ರೂ. ಸಹಾಯ ಮಾಡಿದ್ದ ನಟ ರವಿ ಪ್ರಕಾಶ ನಂತರ ಪದೇ ಪದೇ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಬಗ್ಗೆ ದೂರು ದಾಖಲಾಗಿದೆ.

ವಿಜಯಲಕ್ಷ್ಮಿ  ಮಲ್ಯ ಆಸ್ಪತ್ರೆಯಿಂದ ಜಯದೇವ ಆಸ್ಪತ್ರೆಗೆ ಶಿಫ್ಟ್ ಆಗಿದ್ದರು. ಆಸ್ಪತ್ರೆಯಿಂದ ವಿಡಿಯೋ ಮಾಡಿ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರೋ ನಟಿ ವಿಜಯಲಕ್ಷ್ಮೀ ತಮ್ಮ ನೋವು ಹೊರ ಹಾಕಿದ್ದಾರೆ.  ವಿಜಯಲಕ್ಷ್ಮೀ ಅಕ್ಕ ಉಷಾದೇವಿ ದೂರು ನೀಡಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಗಂಡನ ಜೊತೆ ಜಾಲಿಯಾಗಿ ಮೆಲ್ಬೋರ್ನ್‌ ಸುತ್ತಾಡಿ ಬಂದ ಸೋನಲ್‌!
ಬಸ್‌ ಅಪಘಾತದಿಂದ ಪವಾಡಸದೃಶ್ಯವಾಗಿ ಪಾರಾದ 'ರಾಧಾ ಮಿಸ್‌' ಶ್ವೇತಾ ಪ್ರಸಾದ್‌!