
ಬೆಂಗಳೂರು(ಸೆ.07): ಡ್ರಗ್ಸ್ ಆರೋಪ ಸಾಬೀತಾದರೆ ನಟಿ ರಾಗಿಣಿ ಅವರಿಗೆ ಚಿತ್ರರಂಗದಿಂದ ನಿಷೇಧ ಶಿಕ್ಷೆ ಎದುರಾಗುವ ಸಾಧ್ಯತೆ ಇದೆ. ಈ ಕುರಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಚರ್ಚೆ ಆಗಿದೆ ಎನ್ನಲಾಗಿದ್ದು, ಡ್ರಗ್ಸ್ ಜಾಲದಲ್ಲಿ ರಾಗಿಣಿ ಪಾತ್ರ ಇರುವುದು ಸಾಕ್ಷ್ಯಸಮೇತ ಸಾಬೀತಾದರೆ ಅವರನ್ನು ಚಿತ್ರರಂಗದಿಂದ ದೂರ ಇಡುವ ನಿರ್ಧಾರ ಕೈಗೊಳ್ಳಲು ನಿರ್ಧರಿಸಲಾಗಿದೆ.
ಆದರೆ, ಈ ಕುರಿತು ಪ್ರತಿಕ್ರಿಯೆ ನೀಡಲು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್.ಜೈರಾಜ್ ನಿರಾಕರಿಸಿದ್ದು, ಈ ಹಂತದಲ್ಲಿ ನಾನು ಆ ಬಗ್ಗೆ ಮಾತನಾಡುವುದಿಲ್ಲ ಎಂದಿದ್ದಾರೆ.
ರಾಗಿಣಿ ದ್ವಿವೇದಿ ಸಿಸಿಬಿ ಕಸ್ಟಡಿ ಇಂದು ಮುಕ್ತಾಯ; ಮತ್ತೆ ಪೊಲೀಸ್ ವಶಕ್ಕೆ ಸಾಧ್ಯತೆ?
ಚಿತ್ರರಂಗದ ವ್ಯವಸ್ಥೆಯಿಂದ ದೂರ: ಚಲನಚಿತ್ರ ವಾಣಿಜ್ಯ ಮಂಡಳಿಯ ನಿರ್ಮಾಪಕರ ವಲಯದ ಉಪಾಧ್ಯಕ್ಷ ಉಮೇಶ್ ಬಣಕಾರ್ ‘ಕನ್ನಡಪ್ರಭ’ ಜತೆ ಮಾತನಾಡಿ, ‘ನಾವು ಯಾರನ್ನೂ ಬ್ಯಾನ್ ಮಾಡುವ ನಿರ್ಧಾರ ತೆಗೆದುಕೊಂಡಿಲ್ಲ. ಯಾಕೆಂದರೆ ನಮಗೆ ಬ್ಯಾನ್ ಮಾಡುವ ಅಧಿಕಾರ ಇಲ್ಲ. ಆದರೆ, ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ಅವರ ವಿಚಾರದಲ್ಲಿ ತನಿಖೆ ನಡೆಯುತ್ತಿದೆ. ತನಿಖೆಯ ಹಂತದಲ್ಲಿ ನಾವು ಯಾವುದೇ ರೀತಿಯ ನಿರ್ಧಾರವನ್ನು ತೆಗೆದುಕೊಳ್ಳಲು ಆಗುವುದಿಲ್ಲ.
ನಡುರಾತ್ರಿ ಆಫ್ರಿನ್ ಪ್ರಜೆಗಳ ಡಿಜೆ ಪಾರ್ಟಿ: ಆಯೋಜಕನ ಬಂಧನ ..
ಒಂದು ವೇಳೆ ಅವರ ಮೇಲಿನ ಆರೋಪ ಸಾಬೀತಾದರೆ ಆಗ ಅವರ ಮೇಲೆ ಯಾವ ರೀತಿಯ ಕ್ರಮ ಕೊಗೊಳ್ಳಬೇಕು ಎನ್ನುವ ನಿರ್ಧಾರ ತೆಗೆದುಕೊಳ್ಳುತ್ತೇವೆ. ಆರೋಪಿ ಎಂದಾದ ಮೇಲೆ ಅವರೊಂದಿಗೆ ಹೊಸ ಸಿನಿಮಾಗಳನ್ನು ಮಾಡುವುದಿಲ್ಲ. ಸಿನಿಮಾ ಕಾರ್ಯಕ್ರಮಗಳಿಗೆ ಕರೆಯುವುದಿಲ್ಲ. ಆದರೆ, ಅವರು ಒಪ್ಪಿಕೊಂಡಿರುವ ಒಂದೆರಡು ಚಿತ್ರಗಳು ಇವೆ. ಆ ಚಿತ್ರಗಳಿಗೆ ಅವರು ಕೆಲಸ ಮಾಡಬಹುದು. ಉಳಿದಂತೆ ಅವರನ್ನು ಚಿತ್ರರಂಗದ ವ್ಯವಸ್ಥೆಯಿಂದ ದೂರ ಇಡುತ್ತೇವೆ. ಇದು ವಾಣಿಜ್ಯ ಮಂಡಳಿಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಧಾರ’ಎಂದು ಸ್ಪಷ್ಟನೆ ನೀಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.