
ಬೆಂಗಳೂರು (ಆ. 14): ‘ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೇ ಸಿಗಲಿ’ ಎಂದು ಆಗ್ರಹಿಸಿ ಸರ್ಕಾರದ ಗಮನ ಸೆಳೆಯಲು ಕರ್ನಾಟಕ ರಣಧೀರ ಪಡೆ ಆ.14 ಮತ್ತು 15 ರಂದು ಬೆಳಗ್ಗೆ 10 ಕ್ಕೆ ಆನಂದರಾವ್ ವೃತ್ತದ ಗಾಂಧಿ ಪ್ರತಿಮೆ ಬಳಿ ‘ಉಪವಾಸ ಸತ್ಯಾಗ್ರಹ ಮತ್ತು ಅ ಹೋರಾತ್ರಿ ಧರಣಿ’ ಹಮ್ಮಿಕೊಂಡಿದೆ.
ಕನ್ನಡಿಗರಿಗೆ ಗುಡ್ ನ್ಯೂಸ್ : ಉದ್ಯೋಗ ಮೀಸಲಿಗೆ ಸಿಎಂ ಸ್ಪಂದನೆ
ಇಲ್ಲಿನ ಉದ್ಯೋಗಗಳು ಸ್ಥಳೀಯರಿಗೆ ಸಿಗಬೇಕು. ಬಹುರಾಷ್ಟ್ರೀಯ ಕಂಪನಿ, ಬ್ಯಾಂಕ್ ಮತ್ತಿತರ ಉದ್ಯಮಗಳು ಕನ್ನಡಿಗರಿಗೆ ಕೆಲಸ ಕೊಡಲು ಹಿಂದೇಟು ಹಾಕುತ್ತಿವೆ. ಈ ಕುರಿತು ಹಿಂದೆ ಸಾಕಷ್ಟು ಬಾರಿ ಮನವಿ, ಅಭಿಯಾನ ಮಾಡಿದರೂ ಸರ್ಕಾರಗಳು ಭರವಸೆ ನೀಡಿ ಸುಮ್ಮನಾಗಿವೆ. ಹೀಗಾಗಿ ಪ್ರಸ್ತುತ ಧರಣಿ ಹಮ್ಮಿಕೊಳ್ಳಲಾಗಿದೆ.
ಕನ್ನಡಿಗರ ಉದ್ಯೋಗ : ಸರೋಜಿನಿ ಮಹಿಷಿ ವರದಿ ಶಿಫಾರಸುಗಳೇನು?
ನಟ ಉಪೇಂದ್ರ, ನಿರ್ದೇಶಕ ನಾಗತೀಹಳ್ಳಿ ಚಂದ್ರಶೇಖರ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ. ಎಸ್.ಜಿ.ಸಿದ್ಧರಾಮಯ್ಯ, ಹೋರಾಟಗಾರರಾದ ವಾಟಾಳ್ ನಾಗರಾಜ್, ಕರವೇ ನಾರಾಯಣ ಹಾಗೂ ವಿವಿಧ ಗಣ್ಯರು ಧರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.