
ಕೊಚ್ಚಿ[ಜ.07]: ಬಹುಭಾಷಾ ನಟಿ ಅಪಹರಣ ಹಾಗೂ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ಮಲಯಾಳಂ ನಟ ದಿಲೀಪ್ ಹಾಗೂ ಇತರ 9 ಮಂದಿ ಆರೋಪಿಗಳ ವಿರುದ್ಧ ವಿಚಾರಣಾಧೀನ ನ್ಯಾಯಾಲಯವೊಂದು ದೋಷಾರೋಪ ಹೊರಿಸಿದೆ.
ನಟಿ ಅಪಹರಣ ಪ್ರಕರಣ: ಮತ್ತೊಂದು ಸುದ್ದಿಯಲ್ಲಿ ನಟ ದಿಲೀಪ್
ಈ ಬಗ್ಗೆ ವಿಚಾರಣೆ ನಡೆಸಿದ ಎರ್ನಾಕುಲಂನಲ್ಲಿರುವ ಹೆಚ್ಚುವರಿ ವಿಶೇಷ ಸೆಷನ್ಸ್ ನ್ಯಾಯಾಲಯ, ಆರೋಪಿಗಳ ವಿರುದ್ಧ ದೋಷಾರೋಪ ಹೊರಿಸಿತು. ಆದರೆ, ಆರೋಪಿಗಳು ತಮ್ಮ ವಿರುದ್ಧದ ಆರೋಪಗಳನ್ನು ಅಲ್ಲಗೆಳೆದಿದ್ದಾರೆ. 2017ರ ಫೆಬ್ರವರಿಯಲ್ಲಿ ತನ್ನನ್ನು ಅಪಹರಣಗೈದು ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ನಟಿ ಆರೋಪಿಸಿದ್ದರು.
ಈ ಪ್ರಕರಣದ ಬೆನ್ನು ಹತ್ತಿದ ಪೊಲೀಸರು, ಪ್ರಮುಖ ಆರೋಪಿ ಪಲ್ಸರ್ ಸುನಿ ಸೇರಿದಂತೆ 7 ಮಂದಿ ಆರೋಪಿಗಳನ್ನು ಬಂಧಿಸಿ, ವಿಚಾರಣೆ ನಡೆಸಿದ್ದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.