ಪರಸಂಗದ ಗೆಂಡೆತಿಮ್ಮ ಸಿನಿಮಾದ 'ಮರಕಣಿ' ರೀಟಾ ಅಂಚನ್‌ ನಿಧನ

By Santosh Naik  |  First Published Nov 14, 2024, 10:25 PM IST

ಕನ್ನಡ ಚಿತ್ರರಂಗದ ಖ್ಯಾತ ನಟಿ ರೀಟಾ ರಾಧಾಕೃಷ್ಣ ಆಂಚನ್ ನಿಧನರಾಗಿದ್ದಾರೆ. ಪರಸಂಗದ ಗೆಂಡೆತಿಮ್ಮ ಸಿನಿಮಾದ ಮರಕಣಿ ಪಾತ್ರದ ಮೂಲಕ ಅವರು ಜನಪ್ರಿಯರಾಗಿದ್ದರು. ಬಹುಭಾಷಾ ನಟಿಯಾಗಿದ್ದ ಅವರು ಕಲಾತ್ಮಕ ಮತ್ತು ಪ್ರಾಯೋಗಿಕ ಸಿನಿಮಾಗಳಲ್ಲಿ ಹೆಚ್ಚಾಗಿ ನಟಿಸಿದ್ದರು.


ಬೆಂಗಳೂರು (ನ.14): ಕನ್ನಡದ ಕಲ್ಟ್‌ ಕ್ಲಾಸಿಕ್‌ ಚಿತ್ರಗಳಲ್ಲಿ ಒಂದಾದ ಪರಸಂಗದ ಗೆಂಡೆತಿಮ್ಮ ಸಿನಿಮಾದಲ್ಲಿ ಮರಕಣಿ ಪಾತ್ರದಲ್ಲಿ ನಟಿಸಿದ್ದ ರೀಟಾ ರಾಧಾಕೃಷ್ಣ ಆಂಚನ್‌ ಬುಧವಾರ ನಿಧನರಾದರು. ಅವರಿಗೆ 68 ವರ್ಷ ವಯಸ್ಸಾಗಿತ್ತು. ಕನ್ನಡ ಮಾತ್ರವಲ್ಲದೆ ಹಿಂದಿ, ಪಂಜಾಬಿ ಹಾಗೂ ಗುಜರಾತಿ ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದ ರೀಟಾ ಅಂಚನ್‌ ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರು ಏನ್‌ ಎನಾದರ್‌, ಬದ್ನಾಂ, ಗರ್ಲ್ ಜವಾನ್ ಹೋಗಯಾ, ಆತ್ಮ, ಫರ್ಜ್ ಊರ್ ಪ್ಯಾರ್ ಮತ್ತು ಪರಸಂಗದ ಗೆಂಡೆತಿಮ್ಮ, ವಿಶು ಕುಮಾರ್ ಅವರ ಕೋಸ್ಟಲ್‌, ಗಿರೀಶ್ ಕಾರ್ನಾಡ್ ಅವರ ಕನಕಾಂಬರ ಮುಂತಾದ ಅನೇಕ ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಇವೆಲ್ಲಕ್ಕಿಂತ ಮುಖ್ಯವಾಗಿ 1978ರಲ್ಲಿ ಲೋಕೇಶ್‌ ಮುಖ್ಯಭೂಮಿಕೆಯಲ್ಲಿದ್ದ ಪರಸಂಗದ ಗೆಂಡೆತಿಮ್ಮ ಸಿನಿಮಾದ ಮರಕಣಿ ಪಾತ್ರದಿಂದಲೇ ಇವರು ಪ್ರಸಿದ್ಧರಾಗಿದ್ದರು. ಈ ಸಿನಿಮಾದ ನಟನೆಗಾಗಿ ಅವರು ಸಾಕಷ್ಟು ಪ್ರಶಸ್ತಿಗಳನ್ನೂ ಪಡೆದುಕೊಂಡಿದ್ದರು.ಬಹುಭಾಷಾ ನಟಿಯಾಗಿರುವ ಇವರು ಕಲಾತ್ಮಕ ಮತ್ತು ಪ್ರಯೋಗಾತ್ಮಕ ಸಿನಿಮಾಗಳಲ್ಲಿ ಹೆಚ್ಚಾಗಿ ನಟಿಸಿದ್ದರು.

ಬಿಲ್ಲವರ ಸಂಘದ ಮಾಜಿ ಅಧ್ಯಕ್ಷ ಮತ್ತು ಟಾಟಾ ಕಂಪನಿಯಲ್ಲಿ ಹಿರಿಯ ಅಧಿಕಾರಿ. ಟಿ.ಅಂಚನ್ ಅವರ ಪುತ್ರಿಯಾಗಿರು ರೀಟಾ ಅಂಚನ್ ವಿವಾಹವಾದ ಬಳಿಕ ರಾಧಾಕೃಷ್ಣ ಮಂಚಿಗಯ್ಯ ಅವರೊಂದಿಗೆ ಬೆಂಗಳೂರಿನಲ್ಲಿ ನೆಲೆಸಿದ್ದರು.ರಾಧಾಕೃಷ್ಣ ಮಂಚಿಗಯ್ಯ  ಅವರ ತಾಯಿ ವನಿತಾ ಅಂದರೆ ರೀಟಾ ಅಂಚನ್‌ ಅವರ ಅತ್ತೆ ಮೈಸೂರು ಮಹಾರಾಜ ಒಡೆಯರ್‌ ಕುಟುಂಬದವರು. ಅವರ ಅಗಲಿಕೆ ಅಭಿಮಾನಿಗಳಿಗೆ ನೋವು ತಂದಿದೆ. ಪತಿ, ಪುತ್ರ, ಪುತ್ರಿ ಹಾಗೂ ಕುಟುಂಬಸ್ಥರನ್ನು ರೀಟಾ ಅಂಚನ್‌ ಅಗಲಿದ್ದಾರೆ.

ಇದು ಬೆಂಗಳೂರಿನ 'ಬಿಲಿಯನೇರ್‌ ಸ್ಟ್ರೀಟ್‌', 67.5 ಕೋಟಿಗೆ ಸೇಲ್‌ ಆಗಿದೆ ಇಲ್ಲಿನ ಒಂದು ಸೈಟ್‌!

' ನಿಮ್ಮೆಲ್ಲರಿಗೂ ಇವರ ಜೀವನದ ಕಥೆಯನ್ನು ಪರಿಚಯಿಸಬೇಕೆಂಬ ನನ್ನ ಕನಸು ನನಸಾಗಲಿಲ್ಲ. 'ಪರಸಂಗದ ಗೆಂಡೆತಿಮ್ಮ' ಖ್ಯಾತಿಯ ಶ್ರೀಮತಿ ರೀಟಾ ಅಂಚನ್ ರಾಧಾಕೃಷ್ಣ ಅವರು ನೆನ್ನೆ (13/11/2024) ರಂದು ನಮ್ಮನ್ನು ದೈಹಿಕವಾಗಿ ಅಗಲಿದ್ದಾರೆ.. ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ಅವರ ಕುಟುಂಬಕ್ಕೆ ಕೊಡಲಿ' ಎಂದು ನಿರ್ದೇಶಕ ಹಾಗೂ ಕನಸುಗಳ ಕಾರ್ಖಾನೆ ಯೂಟ್ಯೂಬ್‌ನ ರಘುರಾಮ್‌ ಬರೆದುಕೊಂಡಿದ್ದಾರೆ.

Tap to resize

Latest Videos

undefined

'ಗಂಡನೊಂದಿಗೆ ಹೀಗೆ ವರ್ಕ್ಔಟ್ ಮಾಡಿದ್ರೆ ನನ್ನಂತೆ ಫಿಟ್ ಆಗ್ತೀರಿ..‌' ವಿಡಿಯೋ ಮಾಡಿ ತೋರಿಸಿದ‌ ಜ್ಯೋತಿ ರೈ!

 

click me!