ಕೊರೋನಾ ಕಾಟ: 'ಸಿನಿಮಾ- ಧಾರಾವಾಹಿ ಚಿತ್ರೀಕರಣಕ್ಕೆ ಅನುಮತಿ ಕಡ್ಡಾಯ'

By Kannadaprabha NewsFirst Published Oct 30, 2020, 7:46 AM IST
Highlights

ಕೊರೋನಾ ಸೋಂಕು ಹಿನ್ನೆಲೆಯಲ್ಲಿ ವಾರ್ತಾ ಇಲಾಖೆ ಚಿತ್ರೀಕರಣ ನಡೆಸುವ ಸಂದರ್ಭದಲ್ಲಿ ಯಾವ ನಿಯಮಗಳನ್ನು ಪಾಲನೆ ಮಾಡಬೇಕು ಎಂಬ ಮಾರ್ಗಸೂಚಿ ನೀಡಿದೆ. ಆದರೆ, ಈ ಮಾರ್ಗಸೂಚಿಗಳನ್ನು ಅನುಸರಿಸುತ್ತಿಲ್ಲ ಎಂಬ ಆರೋಪ ಕೇಳಿ ಬಂದಿವೆ. ಈ ಬಗ್ಗೆ ಪರಿಶೀಲನೆ ಮಾಡುವುದಕ್ಕೆ ಸೂಚಿಸಲಾಗಿದೆ ಎಂದ ಮಂಜುನಾಥ ಪ್ರಸಾದ್‌ 

ಬೆಂಗಳೂರು(ಅ.30): ನಗರದಲ್ಲಿ ಸಿನಿಮಾ ಹಾಗೂ ಕಿರುತೆರೆ ಧಾರಾವಾಹಿಗಳ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಬಿಬಿಎಂಪಿಯಿಂದ ಅನುಮತಿ ಪಡೆಯಬೇಕು ಹಾಗೂ ಚಿತ್ರಿಕರಣ ಸ್ಥಳದಲ್ಲಿ ಮಾಸ್ಕ್‌ ಹಾಗೂ ಸಾಮಾಜಿಕ ಅಂತರ ನಿಯಮ ಪಾಲನೆ ಮಾಡಬೇಕು ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಹೇಳಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಸೋಂಕು ಹಿನ್ನೆಲೆಯಲ್ಲಿ ವಾರ್ತಾ ಇಲಾಖೆ ಚಿತ್ರೀಕರಣ ನಡೆಸುವ ಸಂದರ್ಭದಲ್ಲಿ ಯಾವ ನಿಯಮಗಳನ್ನು ಪಾಲನೆ ಮಾಡಬೇಕು ಎಂಬ ಮಾರ್ಗಸೂಚಿ ನೀಡಿದೆ. ಆದರೆ, ಈ ಮಾರ್ಗಸೂಚಿಗಳನ್ನು ಅನುಸರಿಸುತ್ತಿಲ್ಲ ಎಂಬ ಆರೋಪ ಕೇಳಿ ಬಂದಿವೆ. ಈ ಬಗ್ಗೆ ಪರಿಶೀಲನೆ ಮಾಡುವುದಕ್ಕೆ ಸೂಚಿಸಲಾಗಿದೆ ಎಂದರು. 

ಪತ್ರಕರ್ತೆಯಾಗಿ ತೆರೆ ಮೇಲೆ ಬರ್ತಿದ್ದಾರೆ ಕೃಷಿ ತಾಪಂಡ..! ಕಿಶೋರ್‌ ಪೊಲೀಸ್‌ ಪಾತ್ರದಲ್ಲಿ

ಪಾಲಿಕೆ ವ್ಯಾಪ್ತಿಯಲ್ಲಿ ಸಭೆ ಸಮಾರಂಭ ನಡೆಸುವುದಕ್ಕೆ ಬಿಬಿಎಂಪಿ ಅನುಮತಿ ಪಡೆಯಲಾಗುತ್ತದೆ. ಅದೇ ರೀತಿ ನಗರದಲ್ಲಿ  ಚಿತ್ರೀಕರಣ ನಡೆಸುವ ಕುರಿತು ಸಂಬಂಧ ಪಟ್ಟ ಪಾಲಿಕೆ ಅಧಿಕಾರಿಗಳಿಂದ ಅನುಮತಿ ಪಡೆಯಬೇಕು ಎಂದು ತಿಳಿಸಿದರು.
 

click me!