
ಸವಣೂರು[ಜು.22]: ರಿಯಾಲಿಟಿ ಶೋನಿಂದ ಪ್ರಖ್ಯಾತರಾಗಿರುವ ಗಾಯಕ ಹನುಮಂತ ಲಮಾಣಿ ಅವರು ನೇತ್ರದಾನ ಮಾಡುವ ಬಗ್ಗೆ ಘೋಷಿಸಿದ್ದಾರೆ.
ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ತಾಲೂಕು ಮಟ್ಟದ ಪತ್ರಿಕಾ ದಿನಾಚರಣೆ ಅಂಗವಾಗಿ ಹುಬ್ಬಳ್ಳಿ ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆ ಸಹಯೋಗದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಅವರು ನೇತ್ರದಾನ ವಾಗ್ದಾನ ಪತ್ರಕ್ಕೆ ಸಹಿ ಹಾಕಿದರು.
ಈ ವೇಳೆ ಮಾತನಾಡಿದ ಅವರು, ನಾನು ನೇತ್ರದಾನ ವಾಗ್ದಾನ ಪತ್ರಕ್ಕೆ ಸಹಿ ಹಾಕುವ ಮೂಲಕ ನನ್ನ ಮರಣಾನಂತರ ಕಣ್ಣುಗಳನ್ನು ದಾನವಾಗಿ ನೀಡಲು ಒಪ್ಪಿಗೆ ಸೂಚಿಸಿದ್ದೇನೆ. ಇಂತಹ ಕಾರ್ಯದಲ್ಲಿ ಸರ್ವರೂ ಪಾಲ್ಗೊಂಡಲ್ಲಿ ಮಾತ್ರ ಅಂಧರ ಬಾಳಿಗೆ ಬೆಳಕು ನೀಡಿದಂತಾಗುತ್ತದೆ. ಹಾಗಾಗಿ ಅಂಧತ್ವ ನಿವಾರಣೆಗೆ ಮುಂದಾಗಬೇಕು ಎಂದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.