Shreerastu Shubhamastu Serial: ಶೂಟಿಂಗ್​ ವೇಳೆ ಅವಘಡ: ಕೆರೆಗೆ ಬಿದ್ದ ಶ್ರೀರಸ್ತು ಶುಭಮಸ್ತು ಪೂರ್ಣಿ! ಶಾಕಿಂಗ್​ ವಿಡಿಯೋ ವೈರಲ್​

Published : May 24, 2025, 04:33 PM IST
Shreerastu Shubhamastu Poorni Shooting

ಸಾರಾಂಶ

ಶ್ರೀರಸ್ತು ಶುಭಮಸ್ತು ಧಾರಾವಾಹಿಯ ಶೂಟಿಂಗ್ ವೇಳೆ ನಟಿ ಲಾವಣ್ಯ ಭಾರದ್ವಾಜ್ ಕೆರೆಗೆ ಬೀಳುವ ಹಂತದಲ್ಲಿದ್ದಾಗ ಸಹನಟ ನಿತಿನ್ ಅದ್ವಿ ರಕ್ಷಿಸಿದ್ದಾರೆ. ಈ ಘಟನೆಯನ್ನು ನಿತಿನ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. 

ಶೂಟಿಂಗ್ ಸಮಯದಲ್ಲಿ ಅವಘಡ ಸಂಭವಿಸುವುದು ಹೊಸ ವಿಷಯವೇನಲ್ಲ. ಅದು ಸಿನಿಮಾ ಶೂಟಿಂಗ್​ ಆಗಿರಬಹುದು. ಸೀರಿಯಲ್​ ಶೂಟಿಂಗೇ ಆಗಿರಬಹುದು. ಇದಾಗಲೇ ಕೆಲವರು ಶೂಟಿಂಗ್​ ಸಮಯದಲ್ಲಿ ಪ್ರಾಣವನ್ನೂ ಕಳೆದುಕೊಂಡಿರುವುದು ಇದೆ. ಮತ್ತೆ ಕೆಲವೊಮ್ಮೆ ಗಂಭೀರವಾಗಿ ಗಾಯಗೊಂಡಿರುವ ಘಟನೆಗಳು ನಡೆದಿವೆ. ತೆರೆಯ ಮೇಲೆ ಒಂದು ದೃಶ್ಯವನ್ನು ತೋರಿಸುವಾಗ ಅದರ ಹಿಂದೆ ನಟ-ನಟಿಯರು ಎಷ್ಟೆಲ್ಲಾ ಸರ್ಕಸ್​ ಮಾಡಿರುತ್ತಾರೆ. ಎಷ್ಟೋ ಸಂದರ್ಭದಲ್ಲಿ ಜೀವಕ್ಕೆ ಅಪಾಯ ತಂದುಕೊಂಡಿರುವ ಉದಾಹರಣೆಗಳೂ ಸಾಕಷ್ಟು ಇವೆ. ಅದರಲ್ಲಿಯೂ ಆ್ಯಕ್ಷನ್​ ದೃಶ್ಯಗಳನ್ನು ಮಾಡುವಾಗ ನಟ-ನಟಿಯರಿಗೆ ಗಂಭೀರ ಸ್ವರೂಪದ ಗಾಯಗಳಾಗುವ ಸುದ್ದಿಗಳೂ ಆಗ್ಗಾಗ್ಗೆ ಬರುತ್ತಲೇ ಇರುತ್ತವೆ. ಆದರೆ ಒಂದು ಚಿತ್ರ ಯಶಸ್ಸು ಆಗಬೇಕಾದರೆ ನಟರು ಇವೆಲ್ಲಾ ಮಾಡುವುದು ಅನಿವಾರ್ಯವೇ. ಇಷ್ಟು ಮಾಡಿದ ಮೇಲೂ ಚಿತ್ರ ಯಶಸ್ವಿ ಆಗಿಯೇ ಆಗುತ್ತದೆ ಎಂದೂ ಹೇಳುವುದು ಕಷ್ಟ. ಇದು ಸಿನಿಮಾದ ಮಾತಾದರೆ, ಇಂದು ಸೀರಿಯಲ್​ಗಳೂ ಯಾವ ಸಿನಿಮಾಕ್ಕೂ ಕಮ್ಮಿ ಏನಿಲ್ಲ. ಸಿನಿಮಾಗಳ ಮಾದರಿಯಲ್ಲಿಯೇ ದೃಶ್ಯಗಳ ಶೂಟಿಂಗ್​ ನಡೆಯುತ್ತದೆ.

ಇದೀಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದೆ. ಶ್ರೀರಸ್ತು ಶುಭಮಸ್ತು ಸೀರಿಯಲ್​ ಪೂರ್ಣಿ ಅರ್ಥಾತ್​ ಲಾವಣ್ಯ ಭಾರದ್ವಾಜ್​ ಅವರು ಕೆರೆಯಲ್ಲಿ ಬೀಳುವ ಹಂತದಲ್ಲಿ ಇದ್ದಾಗ ಕೂದಲೆಳೆ ಅಂತರದಿಂದ ಪಾರಾಗಿರುವ ಘಟನೆ ನಡೆದಿದೆ. ಲಾವಣ್ಯ ಅವರು ತೆಲುಗು ಸೀರಿಯಲ್​ನಲ್ಲಿಯೂ ಕೆಲಸ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಧಾರಾವಾಹಿ ಒಂದರ ಶೂಟಿಂಗ್​ ವೇಳೆ ಅವರು ಕೆರೆಯಲ್ಲಿ ಆಯತಪ್ಪಿ ಬಿದ್ದಾಗ ಆ ಸೀರಿಯಲ್​ ನಾಯಕ ನಿತಿನ್ ಅದ್ವಿ ಅವರು ಕೈಹಿಡಿದು ಎಳೆದಿದ್ದರಿಂದ ಅನಾಹುತ ತಪ್ಪಿದೆ. ಈ ವಿಷಯವನ್ನು ಖುದ್ದು ನಿತಿನ್​ ಅವರು ಶೇರ್​ ಮಾಡಿಕೊಂಡಿದ್ದಾರೆ. ಶೂಟಿಂಗ್​ ವೇಳೆ ಆಗಿದ್ದೇನು, ನಂತರ ತೆರೆಯ ಮೇಲೆ ಬಂದಿದ್ದೇನು ಎನ್ನುವುದನ್ನು ಅವರು ಇದರಲ್ಲಿ ಶೇರ್ ಮಾಡಿದ್ದಾರೆ. ಶೂಟಿಂಗ್​ ಸಮಯದಲ್ಲಿ ಮೈಯೆಲ್ಲಾ ಕಣ್ಣಾಗಿ ಇರಬೇಕು. ಇಲ್ಲದಿದ್ದರೆ ಇಂಥ ಅನಾಹುತಗಳು ಸಂಭವಿಸುತ್ತವೆ ಎನ್ನುವುದಾಗಿ ನಟ ಹೇಳಿದ್ದಾರೆ.

ಈ ಶೂಟಿಂಗ್​ ನೋಡಿದರೆ ತೆರೆಯ ಹಿಂದೆ ನಟ-ನಟಿಯರು ಎಷ್ಟೊಂದು ಸರ್ಕಸ್​ ಮಾಡುತ್ತಾರೆ ಎನ್ನುವುದನ್ನು ನೋಡಬಹುದು. ಒಂದು ಸಿನಿಮಾ ಅಥವಾ ಸೀರಿಯಲ್​ ಎಷ್ಟರಮಟ್ಟಿಗೆ ಸಕ್ಸಸ್​ ಆಗುತ್ತದೆಯೆಂದು ಹೇಳುವುದು ಕಷ್ಟ. ಹಾಗೆಂದು ಯಾವುದೇ ನಿರ್ದೇಶಕರು ತಮ್ಮ ಸರ್ವ ಪ್ರಯತ್ನವನ್ನೂ ಮಾಡಲೇಬೇಕು. ಅದಕ್ಕಾಗಿಯೇ ವೀಕ್ಷಕರಿಗೆ ಇಷ್ಟವಾಗುವಂಥ ಹೊಸ ಹೊಸ ರೋಚಕತನವನ್ನು ತೋರಿಸಲಾಗುತ್ತದೆ. ವೀಕ್ಷಕರಿಗೆ ರೋಚಕತೆ ಮುಂದಿಡಲು ಇಂಥ ಕೆಲವು ಕಠಿಣ ದೃಶ್ಯಗಳಿಗೆ ನಟ-ನಟಿಯರು ಒಗ್ಗಿಕೊಳ್ಳಲೇಬೇಕು. ಅವರಿಗೆ ಈ ರೀತಿಯ ಶೂಟಿಂಗ್​ ಮಾಡುವಾಗ ಎಲ್ಲ ರೀತಿಯ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆಯಾದರೂ ಕೆಲವೊಮ್ಮೆ ಆ್ಯಕ್ಷನ್​ ಶೂಟಿಂಗ್​ ಮಾಡುವುದು ಸುಲಭದ ಮಾತಲ್ಲ ಎನ್ನುವುದೂ ಅಷ್ಟೇ ದಿಟ.

ಇನ್ನು ಲಾವಣ್ಯ ಭಾರದ್ವಾಜ್​ ಅವರ ಬಗ್ಗೆ ಹೇಳುವುದಾದರೆ, ಇವರು ಅಮೃತಧಾರೆಯ ನಾಯಕಿ ಭೂಮಿಕಾಳ ಸಹೋದರ ಜೀವನ್​ ಆಗಿ ನಟಿಸುತ್ತಿದ್ದ ಶಶಿ ಪತ್ನಿ. ಸದ್ಯ ಲಾವಣ್ಯ ಅವರು ಶ್ರೀರಸ್ತು ಶುಭಮಸ್ತುವಿನಲ್ಲಿ ಅವಿಯ ಪತ್ನಿ ಪೂರ್ಣಿಯಾಗಿ ನಟಿಸುತ್ತಿದ್ದಾರೆ. ರಿಯಲ್​ ಪತಿ-ಪತ್ನಿ ಇದಾಗಲೇ ಹಲವಾರು ರೀಲ್ಸ್​ಗಳನ್ನು ಮಾಡುವ ಮೂಲಕ ಅಭಿಮಾನಿಗಳಿಗೆ ರಂಜಿಸುತ್ತಲೇ ಇರುತ್ತದೆ. ಇನ್ನು ಈ ಜೋಡಿಯ ಕುರಿತು ಇಂಟರೆಸ್ಟಿಂಗ್​ ವಿಷ್ಯವೂ ಇದೆ. ಕೆಲ ದಿನಗಳ ಹಿಂದಷ್ಟೇ ಶಶಿ ಮತ್ತು ಲಾವಣ್ಯ ಅವರು ತಮ್ಮ ಎರಡನೆಯ ಮದುವೆ ವಾರ್ಷಿಕೋತ್ಸವವನ್ನು ಆಚರಿಸಿಕೊಂಡರು. ಮದುವೆಯಾದ ಮೇಲೆ ಹನಿಮೂನ್​ಗೆ ಹೋಗಲು ಸಾಧ್ಯವಾಗದಿದ್ದ ಹಿನ್ನೆಲೆಯಲ್ಲಿ ಇದೀಗ ಆ ಆಸೆಯನ್ನು ಜೋಡಿ ಮನಾಲಿಗೆ ಹೋಗಿ ತೀರಿಸಿಕೊಂಡಿದೆ.

 

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

'ಬಂದವ್ರಿಗೆ ದಾರಿಕೊಡಿ, ಹೋಗೋರಿಗೆ ದಾರಿಬಿಡಿ..'ಜೀ ಕನ್ನಡ ವೇದಿಕೆಯಲ್ಲಿ ಹೇಳಿದ್ದ ಮಾತನ್ನೇ ಬಿಗ್‌ಬಾಸ್‌ನಲ್ಲಿ ಮರೆತ್ರಾ ಗಿಲ್ಲಿ ನಟ!
'ನನಗೆ ಡೈವೋರ್ಸ್‌ ಸಿಗೋದು ಪಕ್ಕಾ..' ನ್ಯಾಷನಲ್‌ ಕ್ರಶ್‌ ಗಿರಿಜಾ ಓಕ್‌ ಫೋಟೋಗೆ ಫ್ಯಾನ್ಸ್ ರಿಯಾಕ್ಷನ್‌