
ಬೆಂಗಳೂರು: ಕನ್ನಡ ರಂಗಭೂಮಿಗೆ ಬೆಳ್ಳಂಬೆಳಗ್ಗೆ ಆಘಾತಕಾರಿ ಸುದ್ದಿ ಬಂದಿದೆ. ರಂಗಭೂಮಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಯುವ ಕಲಾವಿದ ಮುರಳಿ ಎಂಬಾತ ಆತ್ಮ*ಹತ್ಯೆಗೆ ಶರಣಾಗಿರುವ ದುರ್ಘಟನೆ ಸಂಭವಿಸಿದೆ. ಬೆಂಗಳೂರಿನ ಸಾರಕ್ಕಿ ಸಮೀಪದ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದ್ದು, ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ಮುರಳಿ ಅವರು ರಂಗಭೂಮಿಯಲ್ಲಿ ಸಕ್ರಿಯರಾಗಿದ್ದು, ಕೆಲ ಕಿರುಚಿತ್ರಗಳಲ್ಲಿ ನಟಿಸುವ ಮೂಲಕವೂ ಗಮನಸೆಳೆದಿದ್ದರು. ಕಲೆಯ ಮೇಲಿನ ಅಪಾರ ಆಸಕ್ತಿ ಹೊಂದಿದ್ದ ಅವರು, ತಮ್ಮ ಅಭಿನಯದ ಮೂಲಕ ಸ್ನೇಹಿತರು ಹಾಗೂ ಸಹ ಕಲಾವಿದರ ಮನಸ್ಸಿನಲ್ಲಿ ವಿಶೇಷ ಸ್ಥಾನ ಗಳಿಸಿದ್ದರು.
ಇನ್ನೂ ಅವರ ಆತ್ಮ*ಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ವೈಯಕ್ತಿಕ ಕಾರಣಗಳೇ ಇದಕ್ಕೆ ಕಾರಣವೋ ಅಥವಾ ಬೇರೆ ಯಾವುದೇ ಒತ್ತಡಗಳಿದೆಯೋ ಎಂಬುದರ ಕುರಿತು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಘಟನೆ ರಂಗಭೂಮಿ ವಲಯದಲ್ಲಿ ಆಘಾತ ಮೂಡಿಸಿದೆ. ಮುರಳಿ ಅವರ ಅಕಾಲಿಕ ನಿಧನಕ್ಕೆ ಸಹ ಕಲಾವಿದರು, ಸ್ನೇಹಿತರು ಮತ್ತು ಹಿತೈಷಿಗು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ರಂಗಭೂಮಿ ಕಲಾವಿದ ವೆಂಕಟೇಶ್ ಪ್ರಸಾದ್ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಭಾವನಾತ್ಮಕವಾಗಿ ಬರೆದುಕೊಂಡು, ಗೆಳೆಯನನ್ನು ಕಳೆದುಕೊಂಡ ನೋವನ್ನು ಹಂಚಿಕೊಂಡಿದ್ದಾರೆ. "ಇಷ್ಟು ಸಣ್ಣ ವಯಸ್ಸಿನ, ಸುಂದರ ಮುಖದ ರಂಗಭೂಮಿ ಗೆಳೆಯ ...ಇಂದು ಬೆಳಿಗ್ಗೆ ನಮ್ಮೆಲ್ಲರನ್ನೂ ಬಿಟ್ಟು ಹೊರಟ..😓 ತಾನೇ ತನ್ನ ದಾರಿಯಲ್ಲಿ...😥 ಒಂದು ನಿಮಿಷ ನಮ್ಮಲ್ಲಿ ಯಾರಿಗಾದರೂ ತನ್ನ ನೋವು ಹೇಳಿಕೊಂಡಿದ್ದರೆ ಏನಾದರೂ ಪರಿಹಾರ ಮಾಡಬಹುದಿತ್ತು...ನಮಗೂ ಅವನ ನೋವೇನಿತ್ತು ಅರ್ಥವಾಗದೇ ಹೋಯಿತು..ಈ ಪಾಪ ಪ್ರಜ್ಞೆ ಕೊನೆಯವರೆಗೂ ಕಾಡದೇ ಬಿಡದು...ಹೋಗಿ ಬಾ ಮುರಳಿ.." ಎಂದು ಬರೆದುಕೊಂಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.