
ಚಿಕ್ಕಮಗಳೂರು: ಬೇರೆಯವರ ಹೆಸರಿನಲ್ಲಿ ಅಮೆಜಾನ್ ಕಂಪನಿಯಲ್ಲಿ ವಸ್ತುಗಳನ್ನು ಬುಕ್ಕಿಂಗ್ ಮಾಡಿ, ಅವುಗಳು ಬಂದ ಮೇಲೆ ನಕಲಿ ಡೆಬಿಟ್, ಕ್ರೆಡಿಟ್ ಕಾರ್ಡಗಳನ್ನು ಬಳಸಿ ಕಂಪನಿಯ ಸಿಬ್ಬಂದಿಯೇ 1.30 ಕೋಟಿ ರು.ಗೂ ಹೆಚ್ಚಿನ ಹಣ ದೋಚಿರುವ ಘಟನೆ ಬೆಳಕಿಗೆ ಬಂದಿದೆ.
ಕಂಪನಿಯ ಚಿಕ್ಕಮಗಳೂರು ವಿಭಾಗದ ವ್ಯವಸ್ಥಾಪಕರು ನೀಡಿದ ದೂರಿನ ಆಧಾರದ ಮೇಲೆ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ದರ್ಶನ್, ಸೇಲ್ಸ್ ಬಾಯ್‌ಗಳಾಗಿದ್ದ ತೇಜು, ತೀರ್ಥ, ಅನಿಲ್, ಸಚಿನ್, ಪುನೀತ್‌ರನ್ನು ಪೊಲೀಸರು ಬಂಧಿಸಿದ್ದಾರೆ.
ಬೇರೆಯವರ ಹೆಸರಿನಲ್ಲಿ ಅಮೆಜಾನ್ ಕಂಪನಿಯಲ್ಲಿ ದುಬಾರಿ ವಸ್ತುಗಳನ್ನು ಬುಕ್ ಮಾಡುತ್ತಿದ್ದ ಆರೋಪಿಗಳು, ಬಳಿಕ ಅವುಗಳನ್ನು ತಮ್ಮಲ್ಲೇ ಹಂಚಿಕೊಳ್ಳುತ್ತಿದ್ದರು. ತದನಂತರ ನಕಲಿ ಡೆಬಿಟ್, ಕ್ರೆಡಿಟ್ ಕಾರ್ಡ್‌ಗಳನ್ನು ಬಳಸಿ ಸ್ವೈಪ್ ಮಾಡುತ್ತಿದ್ದರು. ಇದರಿಂದ ಹಣ ಸಂದಾಯವಾಗಿದೆ ಎಂದು ಕಂಪನಿಯ ದತ್ತಾಂಶದಲ್ಲಿ ನಮೂದುಗೊಳ್ಳುತ್ತಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.