
ಬೆಂಗಳೂರು, [ಸೆ.28]: ಕೆಲ ತಿಂಗಳುಗಳ ಹಿಂದೆ ರಾಜ್ಯದಲ್ಲಿ ಸಾಲ ಬಾಧೆ ತಾಳಲಾರದೆ ರೈತರ ಸರಣಿ ಆತ್ಮಹತ್ಯೆಗಳು ನಡೆದಿದ್ದವು. ಈಗಲೂ ಸಹ ರೈತರ ಆತ್ಮಹತ್ಯೆ ಮುಂದುವರೆದಿದೆ.
2018ರ ಏಪ್ರಿಲ್ ನಿಂದ ಆಗಸ್ಟ್ ತಿಂಗಳ ವರೆಗಿನ ಅವಧಿಯಲ್ಲಿ ಅತಿ ಹೆಚ್ಚು ರೈತರು ಪ್ರಾಣ ಕಳೆದುಕೊಂಡಿದ್ದು, ಏಪ್ರಿಲ್ ನಿಂದ ಆಗಸ್ಟ್ ತಿಂಗಳ ವರೆಗಿನ ಈ 5 ತಿಂಗಳಲ್ಲಿ ಬರೋಬ್ಬರಿ 283 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಏಪ್ರಿಲ್ ನಿಂದ ಆಗಸ್ಟ್ ವರೆಗಿನ ಅವಧಿಯಲ್ಲಿ ಪ್ರತಿ 12 ತಾಸಿಗೆ ಅಂದರೆ ಅರ್ಧ ದಿನಕ್ಕೊಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಯಾವ ಯಾವ ಜಿಲ್ಲೆಯಲ್ಲಿ ಎಷ್ಟು ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವುದನ್ನು ನೋಡುವುದಾದರೆ, ಉತ್ತರ ಕರ್ನಾಟದ ಜಿಲ್ಲೆಗಳಲ್ಲಿಯೇ ಅತಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಳಗಾವಿ-34, ವಿಜಯಪುರ-21, ಕಲಬುರಗಿ-19, ಹಾವೇರಿ-18, ಧಾರವಾಡ ಮತ್ತು ಚಿಕ್ಕಮಗಳೂರು ಜಿಲ್ಲೆ ಕ್ರಮವಾಗಿ 17 ಜನ ರೈತರು ಸಾವನ್ನಪ್ಪಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.