ಉಪ ಸಮರಕ್ಕೆ ಇನ್ನು ನಾಲ್ಕೇ ದಿನ ಬಾಕಿ, 1 ಲಕ್ಷದ 26 ಸಾವಿರ ನಗದು ಹಂಚಿಕೆ

By Suvarna Web DeskFirst Published Apr 5, 2017, 5:31 AM IST
Highlights

ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕುರುಡು ಕಾಂಚಾಣ ಕುಣಿಯುತ್ತಿದೆ. ಜೊತೆ ಬಿಜೆಪಿ ಹಾಗೂ ಕಾಂಗ್ರೆಸ್​ ಕಾರ್ಯಕರ್ತರ ಘರ್ಷಣೆಗೂ ಕಾರಣವಾಗಿದೆ.

ಮೈಸೂರು(ಎ.05): ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕುರುಡು ಕಾಂಚಾಣ ಕುಣಿಯುತ್ತಿದೆ. ಜೊತೆ ಬಿಜೆಪಿ ಹಾಗೂ ಕಾಂಗ್ರೆಸ್​ ಕಾರ್ಯಕರ್ತರ ಘರ್ಷಣೆಗೂ ಕಾರಣವಾಗಿದೆ.

ಮತದಾನಕ್ಕೆ ಇನ್ನು ನಾಲ್ಕೇ ದಿನ ಬಾಕಿ. ಆದರೆ ಅಷ್ಟರಲ್ಲೇ ಗುಂಡ್ಲುಪೇಟೆಯಲ್ಲಿ ಕಾಂಚಾಣ ಸದ್ದು ಮಾಡುತ್ತಿದೆ. ಗುಂಡ್ಲುಪೇಟೆಯ ಬರ್ಗಿ ಜಿಲ್ಲಾ ಪಂಚಾಯ್ತಿ ಕ್ಷೇತ್ರದ ಕಾಂಗ್ರೆಸ್ ಸದಸ್ಯ ಪಿ.ಚನ್ನಪ್ಪ ಹಣ ಹಂಚಿಕೆ ಆರೋಪದಲ್ಲಿ ಸಿಲುಕಿಕೊಂಡಿದ್ದಾರೆ. ಮತದಾರರಿಗೆ ಮತದಾರರಿಗೆ ಹಣ ಹಂಚಿಕೆ ಮಾಡಿದ್ದಾರೆಂದು ಬಿಜೆಪಿ ಕಾರ್ಯಕರ್ತರು ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದರು. ಪರಿಶೀಲನೆ ನಡೆಸಿದ ಅಧಿಕಾರಿಗಳು 1 ಲಕ್ಷದ 26 ಸಾವಿರ ನಗದು ಪತ್ತೆಯಾಗಿದೆ.

ಈ ಆರೋಪ ಹಿನ್ನೆಲೆಯಲ್ಲಿ ಜಿ.ಪಂ.ಸದಸ್ಯ ಪಿ.ಚನ್ನಪ್ಪರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಗುಂಡ್ಲುಪೇಟೆ ಪೊಲೀಸ್​ ಠಾಣೆ ಮುಂದೆ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಮಾಜಿ ಸಚಿವ ರೇಣುಕಾಚಾರ್ಯ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಎದುರು ಧರಣಿ ಮಾಡಿದ್ದರು.

click me!