
ನವದೆಹಲಿ(ನ.2): ನ್ಯಾಯಾಂಗ ನೇಮಕಾತಿಗೆ ಸಂಬಂಧಿಸಿ ಇತ್ತೀಚೆಗೆ ಸುಪ್ರೀಂ ಕೋರ್ಟ್‌ನಿಂದ ತೀವ್ರ ತರಾಟೆಗೊಳಪಟ್ಟಿದ್ದ ಕೇಂದ್ರ ಸರ್ಕಾರ ಸೋಮವಾರ 10 ನ್ಯಾಯಮೂರ್ತಿಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿದೆ.
ಗುವಾಹತಿ ಮತ್ತು ದೆಹಲಿ ಹೈಕೋರ್ಟ್‌ಗಳಿಗೆ 10 ನ್ಯಾಯಮೂರ್ತಿಗಳ ಹೆಸರುಗಳನ್ನು ಸೂಚಿಸಿ ಕೇಂದ್ರ ಸರ್ಕಾರ ರಾಷ್ಟ್ರಪತಿಗಳಿಗೆ ಕಡತ ರವಾನಿಸಲಾಗಿದೆ. ನ್ಯಾಯಮೂರ್ತಿಗಳ ನೇಮಕಾತಿ ವಿಳಂಬದ ಬಗ್ಗೆ ಸುಪ್ರೀಂ ಕೋರ್ಟ್ ಕೇಂದ್ರವನ್ನು ಇತ್ತೀಚೆಗೆ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಅದರಲ್ಲಿ ಕರ್ನಾಟಕ ಹೈಕೋರ್ಟ್‌ನ ಸ್ಥಿತಿಯನ್ನೂ ಉಲ್ಲೇಖಿಸಿತ್ತು. ರಾಜ್ಯ ಹೈಕೋರ್ಟ್‌ನಲ್ಲಿ 62 ನ್ಯಾಯಮೂರ್ತಿಗಳ ಹುದ್ದೆಗಳಿದ್ದು, 26 ನ್ಯಾಯಮೂರ್ತಿಗಳಷ್ಠೇ ಇದ್ದಾರೆ. ಇವರಲ್ಲಿ 8 ನ್ಯಾಯಮೂರ್ತಿಗಳು ಧಾರವಾಡ ಮತ್ತು ಕಲ್ಬುರ್ಗಿ ಪೀಠಗಳಲ್ಲಿದ್ದಾರೆ. ಮುಖ್ಯಪೀಠದಲ್ಲಿ 18 ಮಂದಿ ಕಾರ್ಯ ನಿರ್ವಹಿಸುತ್ತಿದ್ದು, ಅವರಲ್ಲಿ ನಾಲ್ವರು ಹಂಗಾಮಿಯಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.