
ನವದೆಹಲಿ (ಜೂ. 26): ದೇಶದ ಹಲವು ಪ್ರದೇಶಗಳಲ್ಲಿ ಆಹಾರ ಪದಾರ್ಥಗಳ ಕಲಬೆರಕೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟಗಳ ಪ್ರಾಧಿಕಾರ (ಎಫ್‌ಎಸ್ಎಸ್‌ಎಐ)ವು, ಆಹಾರ ಕಲಬೆರಕೆ ಪ್ರಕರಣಗಳ ದೋಷಿಗಳಿಗೆ ಕಠಿಣವಾದ ದಂಡ ಹಾಗೂ ಜೈಲು ಶಿಕ್ಷೆ ವಿಧಿಸುವ ಕುರಿತಾದ ಕಾನೂನು ಜಾರಿಗೊಳಿಸುವ ಪ್ರಸ್ತಾಪವನ್ನು ಮಾಡಿದೆ.
ಅಲ್ಲದೆ ಆಹಾರ ಉತ್ಪಾದಕರಿಗೆ, ಗುಣಮಟ್ಟದ ಆಹಾರ ಪದಾರ್ಥ ಉತ್ಪಾದನೆಗೆ ನೆರವಾಗಲು ನಿಧಿಯೊಂದನ್ನು ಸ್ಥಾಪಿಸುವಂತೆಯೂ ಸಲಹೆ ನೀಡಿದೆ. ಈಗಾಗಲೇ ಆಹಾರ ಕಲಬೆರಕೆ ತಡೆಯುವ ಕುರಿತು ಹಲವು ಕಾನೂನುಗಳು ಇದ್ದು, ಇದರ ಜೊತೆಗೆ ಇದೀಗ ಉದ್ದೇಶಪೂರ್ವಕವಾಗಿಯೇ ಆಹಾರ ಪದಾರ್ಥಗಳಿಗೆ ಕಲಬೆರಕೆ ಮಾಡುವ ವ್ಯಕ್ತಿಗಳು ಅಥವಾ ಉದ್ಯಮಗಳಿಗೆ 10 ಲಕ್ಷ ರು. ದಂಡದ ಜೊತೆಗೆ ಕನಿಷ್ಠ 7 ವರ್ಷದಿಂದ ಗರಿಷ್ಠ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸುವ ಹೊಸ ಅಂಶಗಳನ್ನು ಕಾಯ್ದೆಗೆ ಸೇರಿಸುವಂತೆ ಪ್ರಾಧಿಕಾರ ಶಿಫಾರಸು ಮಾಡಿದೆ.
ಇತ್ತೀಚಿನ ದಿನಗಳಲ್ಲಿ ಆಹಾರ ಕಲಬೆರಕೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಾಧಿಕಾರ ಈ ಕಠಿಣ ನಿಯಮ ಜಾರಿಗೆ ಪ್ರಸ್ತಾಪ ಸಲ್ಲಿಸಿದೆ. ಈ ಪ್ರಸ್ತಾಪದ ಕುರಿತು ಪ್ರಾಧಿಕಾರವು ರಾಜ್ಯ ಸರ್ಕಾರಗಳ ಅಭಿಪ್ರಾಯವನ್ನು ಆಹ್ವಾನಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.