
ನ್ಯೂಯಾರ್ಕ್(ಸೆ.24): 3 ವರ್ಷದ ಮಲ ಮಗಳನ್ನು ಈಜುಕೊಳದಲ್ಲಿ ಎಸೆದು ಕೊಂದ ಪಾಪಿ ತಂದೆಗೆ 100 ವರ್ಷಗಳ ಕಠಿಣ ಶಿಕ್ಷೆ ವಿಧಿಸಲಾಗಿದೆ.
ಅಗಸ್ಟ್ 12, 2015ರಲ್ಲಿ ಮೆಕ್ಸಿಕೋದ ಮಿಚೋಕನ್ ನಗರದ ಹೋಟೆಲೊಂದರಲ್ಲಿ ಜೋಸ್ ಡೇವಿಡ್ ಎನ್ನೋ ವ್ಯಕ್ತಿ ತನ್ನ ಮಲಮಗಳನ್ನು ಈಜು ಕೊಳದಲ್ಲಿ ಮುಳುಗಿಸಿ ಹತ್ಯೆಗೈದಿದ್ದ. ಈ ಘಟನೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದವು. ಸಿಸಿಟಿವಿಯಲ್ಲಿ ದೃಶ್ಯಗಳನ್ನು ನೋಡಿದ ಮಗುವಿನ ತಾಯಿ ದೂರು ದಾಖಲಿಸಿದ್ದಳು. ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ ಪೊಲೀಸರು ಅರೋಪಿ ವಿರುದ್ಧ ಚಾರ್ಜ್‌ಶೀಟ್ ದಾಖಲಿಸಿದ್ದರು.
ಸುದೀರ್ಘ ವಿಚಾರಣೆ ಬಳಿಕ ಕೋರ್ಟ್ ಇದೀಗ ತೀರ್ಪು ನೀಡಿದೆ. ನ್ಯಾಯಾಲಯ ಮಗಳನ್ನು ಕೊಂದ ಅಪ್ಪನಿಗೆ 100 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.