
ಗುವಾಹಟಿ[ಜು.15]: ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಭಾನುವಾರ ಇನ್ನಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿಇದೆ. ರಾಜ್ಯದೆಲ್ಲೆಡೆ ಸುಮಾರು 26.5 ಲಕ್ಷ ಜನರು ಸಂತ್ರಸ್ತರಾಗಿದ್ದಾರೆ. ಪ್ರವಾಹಕ್ಕೆ ತುತ್ತಾದ 28 ಜಿಲ್ಲೆಗಳ ಪೈಕಿ ಬರ್ಪೆಟಾ ಜಿಲ್ಲೆಯಲ್ಲಿ ಅತಿ ಹಚ್ಚಿನ ಹಾನಿ ಸಂಭವಿಸಿದ್ದು, 7.35 ಲಕ್ಷ ಮಂದಿ ಸಂತ್ರಸ್ತರಾಗಿದ್ದಾರೆ.
ಅಸ್ಸಾಂನೆಲ್ಲಡೆ ಇನ್ನಷ್ಟು ಮಳೆ ಸುರಿಯುವ ಸಾಧ್ಯತೆ ಇದ್ದು, ಬ್ರಹ್ಮಪುತ್ರ ನದಿಯ ಪ್ರವಾಹ ಇನ್ನಷ್ಟುಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕಾಜಿರಂಗ ನ್ಯಾಷನಲ್ ಪಾರ್ಕ್ನ ಶೇ.70ರಷ್ಟುಭಾಗ ನೀರಿನಲ್ಲಿ ಮುಳುಗಡೆ ಆಗಿದ್ದು, ಪ್ರಾಣಿಗಳು ಅಪಾಯಕ್ಕೆ ಸಿಲುಕಿವೆ. 3,181 ಗ್ರಾಮಗಳು ನೀರಿನಲ್ಲಿ ಮುಳಗಡೆ ಆಗಿದ್ದು, 87,607 ಹೆಕ್ಟೇರ್ ಬೆಳೆ ಹಾನಿ ಸಂಭವಿಸಿದೆ.
ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ತಾಯಿ, ಮಗುವನ್ನು ಕಾಪಾಡಿದ 11ರ ಪೋರ!
ಇದೇ ವೇಳೆ ಪ್ರವಾಹ ಪರಿಸ್ಥಿತಿ ಎದುರಿಸಲು ಕೇಂದ್ರ ಸರ್ಕಾರ 590 ಕೋಟಿ ರು.ಗಳನ್ನು ಬಿಡುಗಡೆ ಮಾಡಿದ್ದು, ಪರಿಹಾರ ಕಾರ್ಯಾರಚರಣೆ ಹಣದ ಕೊರತೆ ಇಲ್ಲ ಎಂದು ಮುಖ್ಯ ಕಾರ್ಯದರ್ಶಿ ಕುಮಾರ್ ಸಂಜಯ್ ಕೃಷ್ಣ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.