ಅಮೆರಿಕದಲ್ಲಿ ಮತ್ತೆ ಗುಂಡಿನ ಮೊರೆತ: 11 ಜನರನ್ನು ಬಲಿ ಪಡೆದ ಆಗುಂತಕ!

Published : Oct 28, 2018, 11:22 AM IST
ಅಮೆರಿಕದಲ್ಲಿ ಮತ್ತೆ ಗುಂಡಿನ ಮೊರೆತ: 11 ಜನರನ್ನು ಬಲಿ ಪಡೆದ ಆಗುಂತಕ!

ಸಾರಾಂಶ

ಅಮೆರಿಕದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು! ಪಿಟ್ಸ್ ಬರ್ಗ್ ನಗರದಲ್ಲಿ ಬಂದೂಕುಧಾರಿಯಿಂದ ಗುಂಡಿನ ದಾಳಿ! ದುರ್ಘಟನೆಯಲ್ಲಿ 11 ಜನರ ದುರ್ಮರಣ! ರಾಬರ್ಟ್ ಬೊವರ್ಸ್ ಗುಂಡಿನ ದಾಳಿ ನಡೆಸಿದ ಆರೋಪಿ! ಪೊಲೀಸರು, ದಾಳಿಕೋರನ ಮಧ್ಯೆ ಭಾರೀ ಗುಂಡಿನ ಕಾಳಗ! ದಾಳಿಕೋರನನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರು

ಪಿಟ್ಸ್ ಬರ್ಗ್(ಅ.28): ಅಮೆರಿಕದ ಪಿಟ್ಸ್ ಬರ್ಗ್ ನಗರದ ಸಿನ್ ಗಾಗ್ ಭೀಕರ ಗುಂಡಿನ ದಾಳಿ ನಡೆದಿದ್ದು, ದಾಳಿಯಲ್ಲಿ 11 ಜನ ಮೃತಪಟ್ಟಿದ್ದಾರೆ. 

ಯಹೂದಿ ಪ್ರಾರ್ಥನಾ ಮಂದಿರದ ಬಳಿ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 11 ಮಂದಿ ಮೃತಪಟ್ಟು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. 

ದಾಳಿ ನಡೆಸಿದ ವ್ಯಕ್ತಿಯನ್ನು ರಾಬರ್ಟ್ ಬೊವರ್ಸ್ ಎಂದು ಗುರುತಿಸಲಾಗಿದ್ದು, ಪೊಲೀಸರು ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ವೇಳೆ ಸ್ಥಳಕ್ಕಾಗಮಿಸಿದ್ದ ಪೊಲೀಸರು ಹಾಗೂ ಬಂದೂಕುಧಾರಿ ನಡುವೆ ಭಾರೀ ಗುಂಡಿನ ಕಾಳಗ ನಡೆದಿತ್ತು. ಕಾಳಗದಲ್ಲಿ ದಾಳಿಕೋರ ಗಂಭೀರವಾಗಿ ಗಾಯಗೊಂಡಿದ್ದಾನೆ ಎನ್ನಲಾಗಿದೆ.

ಗುಂಡಿನ ದಾಳಿ ನಡೆಸುವ ವೇಳೆ ಆರೋಪಿ ಎಲ್ಲಾ ಯಹೂದಿಗಳು ಸಾಯಲೇಬೇಕೆಂದು ಕೂಗಾಡಿದ್ದಾನೆಂದು ಹೇಳಲಾಗುತ್ತಿದೆ. ಘಟನೆ ಕುರಿತಂತೆ ಎಫ್'ಬಿಐ ತನಿಖೆ ನಡೆಸುತ್ತಿದ್ದು, ದಾಳಿಯ ಹಿಂದಿನ ಉದ್ದೇಶ ಕುರಿತಂತೆ ಈ ವರೆಗೂ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹ ಲಕ್ಷ್ಮೀ ಅಡಿ 1.24 ಕೋಟಿ ಸ್ತ್ರೀಯರಿಗೆ ₹1.54 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಡ್ರಗ್ಸ್‌ ಆರ್ಭಟಕ್ಕೆ ಮದ್ಯ ಮಾರಾಟವೇ ಕುಸಿತ!