
ಲಕ್ನೋ: ಉತ್ತರ ಪ್ರದೇಶದ ರಾಯಬರೇಲಿಯಲ್ಲಿರುವ ಎನ್’ಟಿಪಿಸಿ ಘಟಕದಲ್ಲಿ ಬಾಯ್ಲರ್ ಅವಘಡ ಸಂಭವಿಸಿದ್ದು 12 ಮಂದಿ ಮೃತಪಟ್ಟಿದ್ದಾರೆ, ಹಾಗೂ ನೂರಕ್ಕಿಂತಲೂ ಹೆಚ್ಚು ಕಾರ್ಮಿಕರು ಗಾಯಗೋಂಡಿದ್ದಾರೆಂದು ಹೇಳಲಾಗಿದೆ.
ರಾಯಬರೇಲಿಯ ಉಂಚಹಾರ್’ನಲ್ಲಿರುವ ಕೇಂದ್ರ ಸರ್ಕಾರ ಸ್ವಾಮ್ಯದ ಎನ್’ಟಿಪಿಸಿಯ 1550 ಮೆ.ವ್ಯಾ ಸಾಮರ್ಥ್ಯದ ಈ ಘಟಕದಲ್ಲಿ ಇಂದು ಸಂಜೆ ಸ್ಫೋಟ ಸಂಭವಿಸಿದೆ.
500 ಮೆ.ವ್ಯಾ. ಬಾಯ್ಲರ್ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಹಲವಾರು ಕಾರ್ಮಿಕರು ಈಗಲೂ ಸಿಲುಕಿಕೊಂಡಿದ್ದಾರೆಂದು ಹೇಳಲಾಗಿದೆ. ಮೃತರ ಸಂಖ್ಯೆ ಇನ್ನೂ ಹೆಚ್ಚಳವಾಗುವ ಆತಂಕವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.
ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯು ದುರ್ಘಟನಾ ಸ್ಥಳಕ್ಕೆ ಧಾವಿಸಿ ಕಾರ್ಮಿಕರ ರಕ್ಷಣೆಗೆ ಸರ್ವಪ್ರಯತ್ನ ನಡೆಸುತ್ತಿದೆ ಎಮದು ಅಧಿಕಾರಿಗಳು ಹೇಳಿದ್ದಾರೆ..
ಈ ನಡುವೆ 3-ದಿನಗಳ ಮೊರಿಶಿಯಸ್ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕಾರ್ಮಿಕರ ರಕ್ಷಣೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದ್ದಾರೆ.
ಕಲ್ಲಿದ್ದಲು ಆಧಾರಿತ ಈ ಘಟಕಕ್ಕೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುತ್ರ ಫೆರೋಜ್ ಗಾಂಧಿ ಹೆಸರನ್ನು ಇಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.