
ಮಲ್ಪೆ[ಮೇ.12]: ಇಲ್ಲಿನ ಮೀನುಗಾರಿಕಾ ಬಂದರಿನಲ್ಲಿ ಶನಿವಾರ 1.2 ಟನ್(1200 ಕೆ.ಜಿ) ತೂಕದ ತೊರಕೆ ಮೀನು ದಿವ್ಯಾಂಶಿ ಎಂಬ ಹೆಸರಿನ ಬೋಟ್ ಬಲೆಗೆ ಬಿದ್ದಿತ್ತು. ಈ ಬೃಹತ್ ಗಾತ್ರದ ಮೀನು ಸಿಗುವುದು ಬಹಳ ಅಪರೂಪವಾಗಿದೆ.
ಬಲೆಗೆ ಸಿಕ್ಕ ಈ ಗಜಗಾತ್ರದ ಮೀನನ್ನು ದಡಕ್ಕೆ ಎಳೆಯಲು ಮೀನುಗಾರರು ಹರಸಾಹಸ ಪಡಬೇಕಾಯಿತು. ಕೊನೆಗೆ ಕ್ರೈನ್‌ನ ಸಹಾಯದಿಂದ ಬೋಟ್‌ನಿಂದ ಎತ್ತಿ ಮಲ್ಪೆ ಬಂದರಿಗೆ ಸಾಗಿಸಲಾಯಿತು. ತೊರಕೆ ಮೀನು ಅತ್ಯಂತ ರುಚಿ ಇರುತ್ತದೆ ಎನ್ನುತ್ತಾರೆ ಮೀನುಗಾರರು.
ಉಡುಪಿಯ ಮಾರುಕಟ್ಟೆಗೆ ಈ ಮೀನು .60 ಸಾವಿರಕ್ಕೆ ಮಾರಾಟವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.