
ಶಿಮ್ಲಾ[ಜು.16]:: ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯಲ್ಲಿ ಕಟ್ಟಡವೊಂದು ಕುಸಿದು ಬಿದ್ದು 14 ಜನರು ಸಾವನ್ನಪ್ಪಿ, 17 ಸೇನಾ ಸಿಬ್ಬಂದಿ ಸೇರಿದಂತೆ 28 ಜನರು ಗಾಯಗೊಂಡ ಘಟನೆ ನಹಾನ್- ಕುಮಾರಹಟ್ಟಿರಸ್ತೆಯಲ್ಲಿ ಭಾನುವಾರ ನಡೆದಿದೆ.
ನಾಲ್ಕು ಅಂತಸ್ತುಗಳ ಈ ಕಟ್ಟಡದಲ್ಲಿ ಕೆಳಮಹಡಿಗಳಲ್ಲಿ ವಾಸದ ಮನೆಗಳಿದ್ದರೆ, ಮೇಲಿನ ಮಹಡಿಯಲ್ಲಿ ರೆಸ್ಟೋರೆಂಟ್ ಇದ್ದು, ಅಲ್ಲಿಯೇ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಿಕ್ಕಿಹಾಕಿಕೊಂಡ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಇನ್ನು ಸಾವನ್ನಪಿದವರಲ್ಲಿ 13 ಜನರು ಸೇನಾ ಸಿಬ್ಬಂದಿಗಳಾಗಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿದವರ ಪತ್ತೆ ಕಾರ್ಯ ಮುಂದುವರೆದಿದ್ದು, ಘಟನಾ ಸ್ಥಳಕ್ಕೆ ಸಿಎಂ ಜೈ ರಾಮ್ ಠಾಕೂರ್ ಭೇಟಿ ನೀಡಿ ತನಿಖೆಗೆ ಆದೇಶಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.