
ಸುಕ್ಮಾ : ಭದ್ರತಾ ಪಡೆ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 14 ಮಂದಿ ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಚತ್ತೀಸ್ ಗಢದ ಸುಕ್ಮಾ ಜಿಲ್ಲೆಯ ಬಸ್ತಾರ್ ಪ್ರದೇಶದಲ್ಲಿ ನಕ್ಸಲರ ಎನ್ ಕೌಂಟರ್ ನಡೆದಿದೆ.
ಚತ್ತೀಸ್ ಗಢದಲ್ಲಿ ಭದ್ರತಾ ಪಡೆ ಯೋಧರು ನಕ್ಸಲ್ ಕೂಂಬಿಂಗ್ ನಡೆಸಿದ್ದು ಈ ವೇಳೆ ಭದ್ರತಾ ಪಡೆ ಹಾಗೂ ನಕ್ಸಲರ ನಡುವೆ ಪರಸ್ಪರ ಗುಂಡಿನ ಚಕಮಕಿ ನಡೆದಿದೆ.
ಸ್ಥಳದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ನಕ್ಸಲರು ಬೀಡುಬಿಟ್ಟಿರುವ ಬಗ್ಗೆ ಗುಪ್ತಚರ ಸಂಸ್ಥೆಗಳ ಮಾಹಿತಿಯನ್ನು ಆಧರಿಸಿಯೇ ಭದ್ರತಾ ಪಡೆಗಳು ಸ್ಥಳದಲ್ಲಿ ಕೂಂಬಿಂಗ್ ಆರಂಭಿಸಿದ್ದವು.
ಸಿಆರ್ ಪಿಎಫ್ ಹಾಗೂ ಜಿಲ್ಲಾ ಮೀಸಲು ಪೊಲೀಸ್ ಪಡೆ, ವಿಶೇಷ ಕಾರ್ಯಪಡೆ ನಕ್ಸಲರ ವಿರುದ್ಧ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.
ನಕ್ಸಲ್ ವಿರುದ್ಧ ಕಾರ್ಯಾಚರಣೆ ಸದ್ಯಕ್ಕೆ ಅಂತ್ಯವಾಗಿದ್ದು, ಅತ್ಯಂತ ಗುಡ್ಡಗಾಡು ಪ್ರದೇಶಗಳಲ್ಲಿ ಬಿದ್ದಿರುವ ಮೃತದೇಹಗಳನ್ನು ತೆರವುಗೊಳಿಸಲಾಗಿದೆ.
ಈ ವೇಳೆ ಅವರ ಬಳಿ ಇದ್ದ ಅತ್ಯಧಿಕ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.