
ಮುಂಬೈ : ಮಹಾರಾಷ್ಟ್ರದಲ್ಲಿ ಕೆಂಪು ಉಗ್ರರ ಅಟ್ಟಹಾಸ ಮುಂದುವರಿದಿದ್ದು, ಪೊಲೀಸ್ ಹಾಗೂ ಸೇನಾ ವಾಹನಗಳನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ 15 ಯೋಧರು ಹುತಾತ್ಮರಾಗಿದ್ದಾರೆ.
"
ಮಹಾರಾಷ್ಟ್ರ ಗಡ್‌ಚಿರೋಲಿ ಪ್ರದೇಶದಲ್ಲಿ ನಕ್ಸಲರು ಐಇಡಿ ಸ್ಫೋಟಿಸಿದ್ದರಿಂದ ಈ ದುರಂತ ಸಂಭವಿಸಿದೆ. ಭದ್ರತಾ ಸಿಬ್ಬಂದಿ ಮತ್ತು ಪೊಲೀಸ್ ವಾಹನ ಗುರಿಯಾಗಿಸಿಕೊಂಡು ಕಳೆದ 24 ಗಂಟೆಯಲ್ಲಿ 2ನೇ ಬಾರಿಗೆ ಐಇಡಿ ಸ್ಫೋಟಿಸಲಾಗಿದೆ.
ಸ್ಫೋಟದ ತೀವ್ರತೆಗೆ ವಾಹನಗಳು ಹೊತ್ತಿ ಉರಿದಿವೆ. ಮಹಾರಾಷ್ಟ್ರ ದಿನ ಹಾಗೂ ಕಾರ್ಮಿಕ ದಿನ ನಡೆಯುತ್ತಿರುವ ಈ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಫೆಬ್ರವರಿ 14ರಂದು ಪುಲ್ವಾಮದಲ್ಲಿ ಉಗ್ರರ ದಾಳಿಗೆ 40 ಯೋಧರು ಹುತಾತ್ಮರಾದ ನೋವು ಮಾಸುವ ಮುನ್ನವೇ ಈ ಘಟನೆ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.