15 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ಕೊಟ್ಟು ಕೊಲೆ, ಮೂವರು ಅರೆಸ್ಟ್

Published : Jun 23, 2019, 03:29 PM IST
15 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ಕೊಟ್ಟು ಕೊಲೆ, ಮೂವರು ಅರೆಸ್ಟ್

ಸಾರಾಂಶ

15 ವರ್ಷ ಬಾಲಕನಿಗೆ ಲೈಂಗಿಕ ಕಿರುಕುಳ ಕೊಟ್ಟು ಆತನನ್ನು ಕೊಲೆ ಮಾಡಿದ ಆರೋಪದಡಿ ಮೂವರು ಅಪ್ರಾಪ್ತ ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ.

ಗುರುಗ್ರಾಮ್, (ಜೂ.23)​: 15 ವರ್ಷ ಬಾಲಕನಿಗೆ ಲೈಂಗಿಕ ಕಿರುಕುಳ ಕೊಟ್ಟು ಆತನನ್ನು ಕೊಲೆ ಮಾಡಿರುವ ಘಟನೆ ಹರಿಯಾಣದ ಗುರುಗ್ರಾಮ್ ನಡೆದಿದೆ.

ಮೃತ ಬಾಲಕ ಗುರುಗ್ರಾಮ್​ನ ನಿವಾಸಿಯಾಗಿದ್ದಾನೆ.  ಲೈಂಗಿಕ ಕಿರುಕುಳ ಕಿರುಕುಳ ನೀಡಿ ಹತ್ಯೆ ಮಾಡಲಾಗಿದೆ ಎಂದು ಮೃತ ಬಾಲಕನ ತಂದೆ ಶನಿವಾರ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನ ಮೇರೆಗೆ ಮೂವರು ಅಪ್ರಾಪ್ತ ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಬಾಲಕ ಹುಟ್ಟಿದಾಗಿನಿಂದ ಬುದ್ಧಿಮಾಂದ್ಯ ಎನ್ನಲಾಗಿದೆ. 

 ಬುದ್ಧಿಮಾಂದ್ಯ ಮೃತ ಬಾಲಕ ತನ್ನನ್ನು ಮೂವರು ಬಾಲಕರು ಲೈಂಗಿಕವಾಗಿ ಹಿಂಸಿಸಿದ್ದಾರೆ. ನಂತರ ಹೊಡೆದಿದ್ದಾರೆ ಎಂದು ಜೂ.14ರಂದು ಪಾಲಕರ ಬಳಿ ಹೇಳಿಕೊಂಡಿದ್ದ.

 ಅಂದಿನಿಂದಲೇ ಬಾಲಕನಿಗೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮೃತಪಟ್ಟಿದ್ದಾನೆ ಎಂದು ಆತನ ತಂದೆ ದೂರು ನೀಡಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತ ಬಾಲಕನ ತಂದೆಯ ದೂರಿನ ಅನ್ವಯ ಮೂವರು ಬಾಲಕರನ್ನು ಬಂಧಿಸಲಾಗಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್ ಬದುಕುಳಿದಿದ್ದು ಹೇಗೆ? ವೀಡಿಯೋ
ಮಲ್ಲಿಕಾರ್ಜುನ ಖರ್ಗೆ ಹಠಾವೋ ಪ್ರಿಯಾಂಕಾ ಗಾಂಧಿ ಲಾವೋ, ಕಾಂಗ್ರೆಸ್ ಅಧ್ಯಕ್ಷ ಬದಲಾವಣೆಗೆ ಹೋರಾಟ