
ಮಾಸ್ಕೋ(ಅ.17): ರಷ್ಯಾದ ಕ್ರಿಮಿಯಾ ಕಾಲೇಜಿನಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು, ವಿದ್ಯಾರ್ಥಿಗಳು ಸೇರಿ 18 ಜನ ಸಾವಿಗೀಡಾಗಿದ್ದಾರೆ.
ಇನ್ನು ದಾಳಿಯಲ್ಲಿ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಪೊಲೀಸರು ಸ್ಥಳವನ್ನು ಸುತ್ತುವರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕ್ರಿಮಿಯನ್ ಟ್ರೇಡ್ ಕಾಲೇಜಿನಲ್ಲಿ ಬಾಂಬ್ ಸ್ಪೋಟ ಸಂಭವಿಸಿದ್ದು, ಶಂಕಿತ ದಾಳಿಕೋರ ಸಹ ಇದೇ ಕಾಲೇಜು ವಿದ್ಯಾರ್ಥಿ ಎಂದು ಹೇಳಲಾಗಿದೆ. ಅಲ್ಲದೇ ಘಟನೆಯಲ್ಲಿ ಆತ ಕೂಡ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಪೋಟಕ್ಕೆ ಅತ್ಯಾಧುನಿಕ ಸ್ಪೋಟಕ ಸಾಮಗ್ರಿಗಳನ್ನು ಬಳಸಲಾಗಿದೆ. ಇದನ್ನು ಭಯೋತ್ಪಾದಲ ದಾಳಿಯೆಂದು ಪರಿಗಣಿಸಿ ತನಿಖೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಇನ್ನು ಘಟನೆಯನ್ನು ತೀವ್ರವಾಗಿ ಖಂಡಿಸಿರುವ ರಷ್ಯಾದ ಅಧ್ಯಕ್ಷ ವ್ಲಾಡ್ಮಿರ್ ಪುಟಿನ್, ಫೆಡರಲ್ ಸೆಕ್ಯೂರಿಟಿ ಸರ್ವೀಸ್ ಮಟ್ಟದ ತನಿಖೆಗೆ ನಿರ್ದೇಶಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.