
ಉತ್ತರಪ್ರದೇಶ (ಸೆ.14): ಯಮುನಾ ನದಿಯಲ್ಲಿ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ 22 ಮಂದಿ ನೀರು ಪಾಲಾಗಿರುವ ಘಟನೆ ನಡೆದಿದೆ.60 ಮಂದಿ ಪ್ರಯಾಣಿಸುತ್ತಿದ್ದ ದೋಣಿ ಮಗುಚಿದ್ದು ಕೆಲವರನ್ನು ರಕ್ಷಿಸಲಾಗಿದೆ.
ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ದಳದ ಸಿಬ್ಬಂದಿಗಳು, ಆಗಮಿಸಿದ್ದು ರಕ್ಷಣಾ ಕಾರ್ಯ ನಿರತರಾಗಿದ್ದಾರೆ.ಇದುವರೆಗೆ 25ಮಂದಿಯನ್ನು ರಕ್ಷಿಸಲಾಗಿದ್ದು,ಅವರಲ್ಲಿ 16 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನೀರು ಪಾಲಾದವರಿಗಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ.ಮೃತಪಟ್ಟವರಲ್ಲಿ ಹೆಚ್ಚಿನವರು ಕೂಲಿ ಕಾರ್ಮಿಕರು. ಅವರೆಲ್ಲರೂ ಕಥಾ ಗ್ರಾಮದಿಂದ ಹರ್ಯಾಣದ ಸೋನಿಪತ್‌ಗೆ ಕೆಲಸ ಹುಡುಕಿಕೊಂಡು ಹೊರಟಿದ್ದರು ಎನ್ನಲಾಗಿದೆ. ಇನ್ನು ಮೃತರ ಕುಟುಂಬಗಳಿಗೆ ಯುಪಿ ಸರ್ಕಾರ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ.
ಚಿತ್ರಕೃಪೆ : (ಹಿಂದೂಸ್ಥಾನ್ ಟೈಮ್ಸ್)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.