ತಮಿಳುನಾಡಿನಲ್ಲಿ 19 ಉಗ್ರರು ವದಂತಿ : ಎಲ್ಲೆಡೆ ಹೈ ಅಲರ್ಟ್

Published : Apr 27, 2019, 07:31 AM IST
ತಮಿಳುನಾಡಿನಲ್ಲಿ 19 ಉಗ್ರರು ವದಂತಿ : ಎಲ್ಲೆಡೆ ಹೈ ಅಲರ್ಟ್

ಸಾರಾಂಶ

ತಮಿಳುನಾಡಿನಲ್ಲಿ 19 ಉಗ್ರರು ಅಡಗಿದ್ದಾರೆ, ದಕ್ಷಿಣ ರಾಜ್ಯಗಳ ಮೇಲೆ ದಾಳಿಗೆ ಸಜ್ಜಾಗಿದ್ದಾರೆ ಎಂದು ವ್ಯಕ್ತಿಯೊಬ್ಬ ಕರೆ ಮಾಡಿ ಹೇಳಿದ್ದು, ಈಗ ಎಲ್ಲೆಡೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ.

ಬೆಂಗಳೂರು: ತಮಿಳುನಾಡಿನಲ್ಲಿ 19 ಉಗ್ರರು ಅಡಗಿದ್ದಾರೆ, ದಕ್ಷಿಣ ರಾಜ್ಯಗಳ ಮೇಲೆ ದಾಳಿಗೆ ಸಜ್ಜಾಗಿದ್ದಾರೆ ಎಂದು ವ್ಯಕ್ತಿಯೊಬ್ಬ ಕರೆ ಮಾಡಿ ಹೇಳಿದ್ದು, ಎಲ್ಲ ರಾಜ್ಯಗಳ ಡಿಜಿಪಿಗಳು ಹೈ ಅಲರ್ಟ್‌ ಘೋಷಿಸಿದ್ದಾರೆ ಎನ್ನಲಾದ ಸುದ್ದಿಯೊಂದು ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿದೆ.

ಪೊಲೀಸ್‌ ಕಂಟ್ರೋಲ್‌ ರೂಂಗೆ ಕರೆ ಮಾಡಿದ ವ್ಯಕ್ತಿಯು ತಮಿಳುನಾಡಿನಲ್ಲಿ ಉಗ್ರರು ಅಡಗಿದ್ದಾರೆ ಎಂದು ಮಾಹಿತಿ ನೀಡಿದ್ದಾನೆ. ಈ ಮಾಹಿತಿಯನ್ನು ರಾಜ್ಯ ಡಿಜಿಪಿ ನೀಲಮಣಿ ರಾಜು ಅವರು ತಮಿಳುನಾಡು, ಗೋವಾ, ಕೇರಳ, ಆಂಧ್ರ, ಮಹಾರಾಷ್ಟ್ರ, ತೆಲಂಗಾಣ, ಪುದುಚೇರಿ ರಾಜ್ಯಗಳ ಪೊಲೀಸ್‌ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ್ದಾರೆ ಎನ್ನಲಾಗಿದೆ. 

ಅಲ್ಲದೆ ರಾಜ್ಯ ಪೊಲೀಸರಿಗೂ ಕಟ್ಟೆಚ್ಚರ ವಹಿಸಬೇಕು ಎಂದು ಸಕ್ರ್ಯೂಲರ್‌ ಹೊರಡಿಸಿದ್ದಾರೆ ಎನ್ನಲಾಗಿದ್ದು, ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿಯು ನೀಡಿದ ಮಾಹಿತಿಯ ಸತ್ಯಾಸತ್ಯತೆ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ನಡುವೆ ನೀಲಮಣಿ ರಾಜು ಅವರ ಸಹಿ ಇರುವ ಸಕ್ರ್ಯೂಲರ್‌ ಪ್ರತಿಯೊಂದು ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka Budget 2026-27: ಇಂದಿನ ಬಜೆಟ್‌ನಲ್ಲಿ ಬೆಳಗಾವಿಗೆ ಸಿಗುತ್ತಾ ಬಂಪರ್‌? ಬೇಡಿಕೆಗಳೇನು?
17 ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣ: ನಾಲ್ವರು ವಲಸೆ ಕಾರ್ಮಿಕರಿಗೆ ಜೀವಾವಧಿ ಶಿಕ್ಷೆ