
ಬೆಂಗಳೂರು(ಅ.5): ನಿರ್ಮಾಣ ಹಂತದಲ್ಲಿದ 5 ಅಂತಸ್ತಿನ ಕಟ್ಟಡವೊಂದು ಕುಸಿದು ಅವಶೇಷಗಳಡಿ ಸಿಲುಕಿ ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿ ನಡೆದಿದೆ.
ಒರಿಸ್ಸಾ ಮೂಲದ ಸೆಕ್ಯೂರಿಟಿ ಗಾರ್ಡ್ ಅಶೋಕ್(40) ಮೃತ ವ್ಯಕ್ತಿ. ಮತ್ತಿಬ್ಬರ ಕಾರ್ಮಿಕರ ಹೆಸರು ತಿಳಿದು ಬಂದಿಲ್ಲ.
ಮಧ್ಯಾಹ್ಯ 12:30ಕ್ಕೆ ಕುಸಿದ ಕಟ್ಟಡದ ಅವೇಶಷಗಳಡಿ ಹಲವರು ಸಿಲುಕಿದ್ದರು. ಪ್ರತ್ಯಕ್ಷದರ್ಶಿಗಳ ಪ್ರಕಾರ ಕಟ್ಟಡ ಕುಸಿಯುವುದಕ್ಕೂ ಮುನ್ನ ದೊಡ್ಡ ಸ್ಫೋಟದ ಶಬ್ದ ಕೇಳಿ ಬಂತು ಎಂದು ತಿಳಿದುಬಂದಿದೆ. ಮಾಹಿತಿ ಪ್ರಕಾರ ಕಟ್ಟಡದಲ್ಲಿ 20ಕ್ಕೂ ಅಧಿಕ ಕಾರ್ಮಿಕರು ಇದ್ದರು ಎಂದು ತಿಳಿದುಬಂದಿದೆ. ಈಗಗಾಲೇ 8 ವರ್ಷದ ಓರ್ವ ಬಾಲಕ ಸೇರಿದಂತೆ ನಾಲ್ವರನ್ನು ರಕ್ಷಿಸಲಾಗಿದೆ.
ನಾಲ್ಕು ಮಂದಿಯನ್ನು ರಕ್ಷಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ . ನಿಯಮ ಬಾಹಿರವಾಗಿ ಕಟ್ಟಡ ನಿರ್ಮಾಣ ಮಾಡಲಾಗಿತ್ತು ಎನ್ನಲಾಗಿದ್ದು, ಈ ಕಟ್ಟದ ಶ್ರೀನಿವಾಸ್ ರೆಡ್ಡಿ ಎಂಬುವವರಿಗೆ ಸೇರಿದ್ದು ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಭರದಿಂದ ಸಾಗುತ್ತಿರುವ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಅಗ್ನಿಶಾಮಕದಳದ ಉಪನಿರ್ದೇಶಕ ಮಾರ್ಕಂಡಯ್ಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.
ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್, ಮೇಯರ್ ಜೆ. ಪದ್ಮಾವತಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳಪೆ ಕಾಮಗಾರಿ ಇದಕ್ಕೆ ಕಾರಣವಾಗಿದ್ದು, ಕಟ್ಟಡದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವುದಾಗಿ ಬೆಂಗಳೂರು ನಗರ ಆಯುಕ್ತ ಮೇಘರೀಕ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.