ರಾಜ್ಯದಲ್ಲಿ ವೈದ್ಯರ ಮುಷ್ಕರದಿಂದಾಗಿ ಇಬ್ಬರು ಬಲಿ

Published : Nov 14, 2017, 12:06 PM ISTUpdated : Apr 11, 2018, 12:45 PM IST
ರಾಜ್ಯದಲ್ಲಿ ವೈದ್ಯರ ಮುಷ್ಕರದಿಂದಾಗಿ ಇಬ್ಬರು ಬಲಿ

ಸಾರಾಂಶ

ರಾಜ್ಯದಲ್ಲಿ ಖಾಸಗಿ ವೈದ್ಯರ ಮುಷ್ಕರದಿಂದಾಗಿ ಸೂಕ್ತ ಚಿಕಿತ್ಸೆ ಲಭಿಸದೇ ಮೂರು ತಿಂಗಳ ಮಗು ಬಲಿಯಾಗಿದೆ.  ಸಿದ್ದಯ್ಯನಗರದ  ನದೀಮ್ ಪಾಷಾ- ಫರಾನಾ ದಂಪತಿಯ ಮಗು ಸೂಕ್ತ ಚಿಕಿತ್ಸೆ ಸಿಗದೇ ಮೃತಪಟ್ಟಿದೆ.

ಹಾಸನ (ನ.14): ರಾಜ್ಯದಲ್ಲಿ ಖಾಸಗಿ ವೈದ್ಯರ ಮುಷ್ಕರದಿಂದಾಗಿ ಸೂಕ್ತ ಚಿಕಿತ್ಸೆ ಲಭಿಸದೇ ಮೂರು ತಿಂಗಳ ಮಗು ಬಲಿಯಾಗಿದೆ.  ಸಿದ್ದಯ್ಯನಗರದ  ನದೀಮ್ ಪಾಷಾ- ಫರಾನಾ ದಂಪತಿಯ ಮಗು ಸೂಕ್ತ ಚಿಕಿತ್ಸೆ ಸಿಗದೇ ಮೃತಪಟ್ಟಿದೆ.

ಕೆಲ ದಿನಗಳಿಂದ ಉಸಿರಾಟದ ತೊಂದರೆಯಿಂದ ಮಗು ಬಳಲುತ್ತಿತ್ತು.  ತಿಪಟೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ಸಿಗದ ಕಾರಣ ತಿಪಟೂರಿನಿಂದ ಹಾಸನಕ್ಕೆ ಬೆಳಗ್ಗೆ ಕರೆತರುವ ವೇಳೆ ಮಾರ್ಗಮಧ್ಯದಲ್ಲಿಯೇ ಮಗು ಸಾವನ್ನಪ್ಪಿದೆ.ಹಾಸನದ ಸಿದ್ದಯ್ಯನಗರದ ಮನೆಯಲ್ಲಿ ದಂಪತಿಯ ರೋದನ ಮುಗಿಲು ಮುಟ್ಟಿದೆ.

 

ವೈದ್ಯರ ಮುಷ್ಕರದಿಂದಾಗಿ ಸೂಕ್ತ ಚಿಕಿತ್ಸೆ ಸಿಗದೇ  ಕೊಪ್ಪಳದಲ್ಲಿ ಪಿಡಿಒ ಗ್ಯಾನಪ್ಪ ಬಡ್ನಾಳ (56) ಮೃತಪಟ್ಟಿದ್ದಾರೆ. ಇಂದು ಬೆಳಗಿನ ವೇಳೆ ಗ್ಯಾನಪ್ಪ ಬಡ್ನಾಳಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ಬಂದಿದ್ದ ಅವರಿಗೆ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದಾರೆ.  ತಕ್ಷಣವೇ ಗಂಗಾವತಿಯ ಖಾಸಗಿ ಆಸ್ಪತ್ರೆಗೆ ಕರೆ ತಂದರೂ ಆಸ್ಪತ್ರೆ ಬಾಗಿಲು ಮುಚ್ಚಿ ವೈದ್ಯರು  ಮುಷ್ಕರಕ್ಕೆ ತೆರಳಿದ್ದರಿಂದ  ಗ್ಯಾನಪ್ಪಗೆ ಚಿಕಿತ್ಸೆ ಸಿಗದೇ ಮೃತಪಟ್ಟಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!